Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
vidhana soudha

ರಾಜ್ಯ ಸರ್ಕಾರದಿಂದ `ವಿಕಲಚೇತನ ವಿದ್ಯಾರ್ಥಿಗಳಿಗೆ’ ಗುಡ್ ನ್ಯೂಸ್ : ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

05/07/2025 3:32 PM

BIG NEWS : ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ‘ಭೂ ಸುರಕ್ಷಾ’ ಯೋಜನೆಯಡಿ ಡಿಜಿಟಲೀಕರಣ, ಕಂದಾಯ ದಾಖಲೆಗಳು ಆನ್ಲೈನ್ನಲ್ಲಿ ಲಭ್ಯ.!

05/07/2025 3:27 PM

ಅಮೆರಿಕದ ಸುಂಕಗಳ ವಿರುದ್ಧ ಭಾರತ ಮಹತ್ವದ ಹೆಜ್ಜೆ ; ‘WTO’ಗೆ ಪ್ರಸ್ತಾವನೆ, ಏನಾಗಲಿದೆ ತಿಳಿಯಿರಿ!

05/07/2025 3:24 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ‘ಭೂ ಸುರಕ್ಷಾ’ ಯೋಜನೆಯಡಿ ಡಿಜಿಟಲೀಕರಣ, ಕಂದಾಯ ದಾಖಲೆಗಳು ಆನ್ಲೈನ್ನಲ್ಲಿ ಲಭ್ಯ.!
KARNATAKA

BIG NEWS : ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ‘ಭೂ ಸುರಕ್ಷಾ’ ಯೋಜನೆಯಡಿ ಡಿಜಿಟಲೀಕರಣ, ಕಂದಾಯ ದಾಖಲೆಗಳು ಆನ್ಲೈನ್ನಲ್ಲಿ ಲಭ್ಯ.!

By kannadanewsnow5705/07/2025 3:27 PM

ದಾವಣಗೆರೆ : ಭೂ ಸುರಕ್ಷಾ ಯೋಜನೆಯಡಿ ಕಂದಾಯ ದಾಖಲೆಗಳ ಸ್ಕ್ಯಾನಿಂಗ್ ಮಾಡುವ ಕಾರ್ಯ ನಡೆಯುತ್ತಿದ್ದು ಸಾರ್ವಜನಿಕರಿಗೆ ಕಂದಾಯ ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿಯೇ ನೀಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮ ಜಿ.ಎಂ. ತಿಳಿಸಿದರು.

ಅವರು ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಂದಾಯ ಇಲಾಖೆಗಳ ಸೇವೆಗಳ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಸಾರ್ವಜನಿಕರು ಕಂದಾಯ ಇಲಾಖೆಯಲ್ಲಿನ ಹಳೇ ಪಹಣಿ, ಮುಟೇಷನ್, ಲ್ಯಾಂಡ್ ಗ್ರಾಂಟ್ ರಿಜಿಸ್ಟರ್, ಬಗರ್ಹುಕುಂ ಕಡತ ಸೇರಿದಂತೆ ಭೂಮಿಯ ಎಲ್ಲಾ ದಾಖಲೆಗಳನ್ನು ಪಡೆಯಲು ಅವಕಾಶ ನೀಡಲಾಗಿದೆ. ಇದಕ್ಕಾಗಿಯೇ ಎಲ್ಲಾ ತಾಲ್ಲೂಕುಗಳಲ್ಲಿನ ಅಭಿಲೇಖಾಲಯದ ದಾಖಲೆಗಳ ಸ್ಕ್ಯಾನಿಂಗ್ ಮಾಡುವ ಕೆಲಸ ನಡೆಯುತ್ತಿದ್ದು ಇಲ್ಲಿಯವರೆಗೆ 1.13 ಕೋಟಿ ಪುಟಗಳ ಕಂದಾಯ ದಾಖಲೆಗಳನ್ನು ಸ್ಕ್ಯಾನಿಂಗ್ ಮಾಡಿ ಅಪ್ಲೋಡ್ ಮಾಡಲಾಗಿದೆ ಎಂದರು.

ಕಂದಾಯ ದಾಖಲೆಗಳನ್ನು ಸ್ಕ್ಯಾನಿಂಗ್ ಮಾಡಲು ದಾವಣಗೆರೆ ತಾಲ್ಲೂಕನ್ನು ಮಾದರಿ ತಾಲ್ಲೂಕಾಗಿ ತೆಗೆದುಕೊಳ್ಳಲಾಗಿತ್ತು. ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿರುವ ಒಟ್ಟು 105466 ಕಡತಗಳಲ್ಲಿ 83802 ಕಡತಗಳ 52,80,765 ಪುಟಗಳ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲ್ ಮಾದರಿಯಲ್ಲಿ ಅಪ್ಲೋಡ್ ಮಾಡಲಾಗಿದೆ. ಮತ್ತು ಇತರೆ ತಾಲ್ಲೂಕುಗಳಾದ ಹರಿಹರ 11,06,372, ಜಗಳೂರು 13,23.129, ಹೊನ್ನಾಳಿ 12,98,228, ಚನ್ನಗಿರಿ 11,48,183, ನ್ಯಾಮತಿ ತಾಲ್ಲೂಕು ಕಚೇರಿಯಲ್ಲಿನ 11,51,723 ಪುಟಗಳ ದಾಖಲೆಗಳನ್ನು ಸ್ಕ್ಯಾನ್ ಅಪ್ಲೋಡ್ ಮಾಡಲಾಗಿದೆ. ಬಾಕಿ ಇರುವ ಕಡತಗಳನ್ನು ಮುಂದಿನ ಒಂದು ವರ್ಷದೊಳಗಾಗಿ ಎಲ್ಲಾ ದಾಖಲೆಗಳ ಸ್ಕ್ಯಾನಿಂಗ್ ಮಾಡುವ ಕೆಲಸ ಪೂರ್ಣಗೊಳ್ಳಲಿದೆ. ಇದರಿಂದ ಸಾರ್ವಜನಿಕರಿಗೆ ಕಂದಾಯ ದಾಖಲೆಗಳನ್ನು ವಿಳಂಬವಿಲ್ಲದೇ ಬೆರಳತುದಿಯಲ್ಲಿ ಪಡೆಯಲು ಸಾಧ್ಯವಾಗಲಿದೆ. ಮತ್ತು ರೆಕಾರ್ಡ್ ರೂಂನಲ್ಲಿ ಕೆಲವರು ಕಂದಾಯ ದಾಖಲೆಗಳನ್ನು ತಿದ್ದುವ ಕೆಲಸವನ್ನು ಮಾಡುತ್ತಿದ್ದರು, ಇದು ಸಹ ಮುಂದಿನ ದಿನಗಳಲ್ಲಿ ತಪ್ಪಲಿದ್ದು ಸರಳ, ಸುಲಲಿತವಾಗಿ ದಾಖಲೆಗಳನ್ನು ಪಡೆಯಲು ಸರ್ಕಾರ ಜನರಿಗೆ ಅನುಕೂಲ ಮಾಡಿಕೊಟ್ಟಿದೆ ಎಂದರು.

ಆನ್ಲೈನ್ ಮೂಲಕವೇ ದಾಖಲೆಗಳ ವಿತರಣೆ; ತಹಶೀಲ್ದಾರರ ಕಚೇರಿ ಸೇರಿದಂತೆ ಉಪವಿಭಾಗಾಧಿಕಾರಿ ಮತ್ತು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇ-ಕಚೇರಿಯಲ್ಲಿಯೇ ಕಡತಗಳ ನಿರ್ವಹಣೆ ಮಾಡಲಾಗುತ್ತದೆ. ಈಗಾಗಲೇ ಕಂದಾಯ ದಾಖಲೆಗಳ ಸ್ಯ್ಕಾನಿಂಗ್ ಮಾಡಲಾಗುತ್ತಿದ್ದು ಸಾರ್ವಜನಿಕರು ಕೇಳುವ ಎಲ್ಲಾ ದಾಖಲೆಗಳನ್ನು ಡಿಜಿಟಲ್ ಮೂಲಕವೇ ನೀಡಲಾಗುತ್ತದೆ. ದಾಖಲೆಗಳನ್ನು ಪಡೆಯಲು ಭೂ ಸುರಕ್ಷಾ ವೆಬ್ಸೈಟ್ ಮೂಲಕ hಣಣಠಿs;//ಡಿeಛಿoಡಿಜಡಿoom.ಞಚಿಡಿಟಿಚಿಣಚಿಞಚಿ.gov.iಟಿ/ ಸ್ವಯಂ ಸೇವಾ ಪೋರ್ಟಲ್ ಮೂಲಕ ಲಾಗಿನ್ ಆಗಿ ತಾವು ಬಯಸಿದ ದಾಖಲೆ ಆಯ್ಕೆ ಮಾಡಿ ಅದಕ್ಕೆ ಪ್ರತಿ ಪುಟಕ್ಕೆ ತಗಲುವ ರೂ.8 ಹಣವನ್ನು ಪಾವತಿ ಮಾಡಿ ದಾಖಲೆಗಳನ್ನು ಪಡೆಯಬಹುದು. ಆನ್ಲೈನ್ನಲ್ಲಿ ದಾಖಲೆಗಳು ಇಲ್ಲದಿದ್ದಲ್ಲಿ 7 ದಿನಗಳಲ್ಲಿ ಸ್ಕ್ಯಾನ್ ಮಾಡಿ ನೀಡಲಾಗುತ್ತದೆ. ಇದರಿಂದ ಸಾರ್ವಜನಿಕರು ತಾಲ್ಲೂಕು ಕಚೇರಿಗಳನ್ನು ಅಲೆದಾಡುವಂತಿಲ್ಲ. ಡಿಜಿಟಲ್ ದಾಖಲೆಗಳಿಗೆ ಮೂಲ ದಾಖಲೆಗಳ ಪ್ರತಿಗೆ ಇದ್ದ ಮೌಲ್ಯವೇ ಇರಲಿದ್ದು ನ್ಯಾಯಾಲಯ ಸೇರಿದಂತೆ ಎಲ್ಲಾ ಅಗತ್ಯವಿರುವ ಕಡೆ ಮಾನ್ಯ ಮಾಡಲಾಗುತ್ತದೆ ಇದಕ್ಕೆ ಸರ್ಕಾರ ಆದೇಶ ನೀಡಿದೆ ಎಂದರು.

ರಾಜ್ಯದಲ್ಲಿ ಪ್ರಥಮ; ಭೂ ಸುರಕ್ಷಾ ಯೋಜನೆಯಡಿ ಕಂದಾಯ ದಾಖಲೆಗಳನ್ನು ಸ್ಕ್ಯಾನಿಂಗ್ ಮಾಡುವ ಕೆಲಸದಲ್ಲಿ ದಾವಣಗೆರೆ ಜಿಲ್ಲೆಯ ಪ್ರಥಮ ಸ್ಥಾನದಲ್ಲಿದೆ. ಮತ್ತು ಪಹಣಿಯೊಂದಿಗೆ ಆಧಾರ್ ಜೋಡಣೆಯಲ್ಲಿಯು ಮೊದಲ ಸ್ಥಾನದಲ್ಲಿದ್ದು ಅಧಿಕಾರಿಗಳು ತಂಡವಾಗಿ ಕೆಲಸ ಮಾಡುತ್ತಿದ್ದಾರೆ ಎಂದರು.

ಕಂದಾಯ ಗ್ರಾಮದಿಂದ 25 ಸಾವಿರ ಜನರಿಗೆ ಹಕ್ಕುಪತ್ರ; ಜಿಲ್ಲೆಯಲ್ಲಿ ಈಗಾಗಲೇ 104 ಕಂದಾಯ ಗ್ರಾಮಗಳನ್ನು ರಚನೆ ಮಾಡುವ ಮೂಲಕ ಮನೆಗಳ ಹಕ್ಕುಪತ್ರ ನೀಡಲಾಗಿದೆ. ಇನ್ನೂ 200 ಕಂದಾಯ ಗ್ರಾಮಗಳನ್ನು ತೆಗೆದುಕೊಂಡಿದ್ದು ಒಟ್ಟು 25 ಸಾವಿರ ಜನರಿಗೆ ಹಕ್ಕುಪತ್ರಗಳನ್ನು ವಿತರಣೆ ಮಾಡಲಾಗುತ್ತದೆ.

ದರಖಾಸ್ತು ಪೋಡಿ; ದರಖಾಸ್ತು ಪೋಡಿ ಅಭಿಯಾನದ ಮೂಲಕ ಒಟ್ಟುಗೂಡಿದ್ದ ಪಹಣಿಗಳನ್ನು ಬೇರ್ಪಡಿಸಲಾಗುತ್ತಿದೆ. ಈಗಾಗಲೇ 2 ಸಾವಿರ ದರಖಾಸ್ತು ಪೋಡಿ ಮೂಲಕ ಪ್ರತ್ಯೇಕ ಪಹಣಿ ವಿಂಗಡಿಸಲಾಗಿದೆ. ಇನ್ನೂ 5 ರಿಂದ 6 ಸಾವಿರ ಪಹಣಿಯನ್ನು ಒಟ್ಟುಗೂಡಿಸಿ ಬೇರ್ಪಡಿಸಲಾಗುತ್ತದೆ ಎಂದರು.

ಪೌತಿಖಾತೆ ಆಂದೋಲನ; ಜಿಲ್ಲೆಯಲ್ಲಿ ಆಧಾರ್ ಸೀಡಿಂಗ್ ಮಾಡುವ ವೇಳೆ ಪೌತಿ ಖಾತೆಯ 96 ಸಾವಿರ ಪಹಣಿಗಳು ಉಳಿದಿರುವುದು ಕಂಡು ಬಂದಿದೆ. ಕಂದಾಯ ಸಚಿವರ ಸೂಚನೆಯಂತೆ ಪೌತಿಖಾತೆ ಆಂದೋಲನ ಮಾಡುವ ಮೂಲಕ ವಾರಸುದಾರರಿಗೆ ಖಾತೆ ಮಾಡಿಕೊಡಲಾಗುತ್ತದೆ. ಜನರು ಈ ಆಂದೋಲನದ ಪ್ರಯೋಜನ ಪಡೆಯಬೇಕೆಂದು ತಿಳಿಸಿದರು.

ಕಂದಾಯ ಇಲಾಖೆ ಸಂಪೂರ್ಣ ಡಿಜಿಟಲೀಕರಣ; ಕಂದಾಯ ಇಲಾಖೆಯು ಸಂಪೂರ್ಣ ಡಿಜಿಟಲೀಕರಣದತ್ತ ಸಾಗುತ್ತಿದ್ದು ಈಗಾಗಲೇ ಎಲ್ಲಾ ಕಡತಗಳನ್ನು ಇ-ಕಚೇರಿಯ ಮೂಲಕವೇ ನಿರ್ವಹಣೆ ಮಾಡಲಾಗುತ್ತಿದೆ. ಇದಕ್ಕಾಗಿ ಗ್ರಾಮ ಆಡಳಿತಾಧಿಕಾರಿಗಳಿಗೂ ಲ್ಯಾಪ್ಟ್ಯಾಪ್ ಸೇರಿ ಆಡಳಿತ ಕಚೇರಿಗೆ ಸ್ಥಳಾವಕಾಶ ಮಾಡಿಕೊಡಲಾಗಿದೆ. ಮುಂದಿನ ದಿನಗಳಲ್ಲಿ ಗ್ರಾಮ ಆಡಳಿತ ಅಧಿಕಾರಿಗಳು ಲಬ್ಯವಾಗುವ ಸ್ಥಳ ಮತ್ತು ಸಮಯದ ಆದೇಶ ಹೊರಡಿಸಲಾಗುತ್ತದೆ, ಸಾರ್ವಜನಿಕರು ಗ್ರಾಮ ಆಡಳಿತಾಧಿಕಾರಿಗೆ ಹುಡುಕಾಟ ನಡೆಸುವಂತಿಲ್ಲ ಎಂದರು.

ಅಂಗನವಾಡಿ ನೇಮಕ ಅತ್ಯಂತ ಪಾರದರ್ಶಕ; ಅಂಗನವಾಡಿಯಲ್ಲಿ ಖಾಲಿ ಇದ್ದು 50 ಕಾರ್ಯಕರ್ತೆಯರ ಮತ್ತು 282 ಸಹಾಯಕಿರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು ನೇಮಕಾತಿ ಪ್ರಕ್ರಿಯೆ ಅತ್ಯಂತ ಪಾದರರ್ಶಕವಾಗಿ ನಡೆಯಲಿದೆ. ಯಾರು ಸಹ ಮಧ್ಯವರ್ತಿಗಳಿಗೆ ಹಣವನ್ನು ನೀಡಿ ಮೋಸ ಹೋಗಬಾರದು. ಈಗಾಗಲೇ ನೇಮಕಾತಿ ಪ್ರಕ್ರಿಯೆ ನಡೆಯಬೇಕಿದ್ದು ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ ಕೆಲವು ಲೋಪದೋಷಗಳನ್ನು ಮಾಡಿರುವುದು ಕಂಡು ಬಂದಿದೆ. ಲೋಪದೋಷ ಸರಿಪಡಿಸಲು ಅವಕಾಶಕ್ಕಾಗಿ ಸರ್ಕಾರಕ್ಕೆ ಪತ್ರ ಬರೆಯಲಾಗಿದ್ದು ಅನುಮತಿ ಸಿಕ್ಕ ನಂತರ ಲೋಪದೋಷ ಸರಿಪಡಿಸಲು ಆಯಾ ತಾಲ್ಲೂಕು ಕಚೇರಿ, ಜಿ.ಪಂ, ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಈಗಾಗಲೇ ಅರ್ಜಿ ಹಾಕಿದವರಿಗೆ ಮಾತ್ರ ಅವರ ಅರ್ಜಿಯಲ್ಲಿ ಲೋಪದೋಷ ಸರಿಪಡಿಸಲು, ದಾಖಲೆಗಳನ್ನು ಅಪ್ಲೋಡ್ ಮಾಡಲು ಅವಕಾಶ ನೀಡಿ ಸಹಾಯಮೇಜವನ್ನು ಸ್ಥಾಪಿಸಲಾಗುತ್ತದೆ ಎಂದರು.

ಪರಿಸರ ಸಂರಕ್ಷಣೆ, ಪ್ಲಾಸ್ಟಿಕ್ ನಿಷೇಧ; ಪರಿಸರ ಸಂರಕ್ಷಣೆ ಮಾಡಲು ದಾವಣಗೆರೆ ನಗರದಲ್ಲಿ ಗಿಡಗಳನ್ನು ಬೆಳೆಸಲಾಗುತ್ತದೆ. ಇದಕ್ಕಾಗಿ ಮಳೆಗಾಲ ಮುಗಿಯುವವರೆಗೆ ಪ್ರತಿ 15 ದಿನಗಳಿಗೊಮ್ಮೆ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಂಡು ಸಸಿಗಳನ್ನು ಸಂರಕ್ಷಿಸುವ ಕೆಲಸ ಮಾಡಲಾಗುತ್ತದೆ.

ಪ್ಲಾಸ್ಟಿಕ್ ಬಳಕೆಯನ್ನು ಜಿಲ್ಲಾಧಿಕಾರಿಗಳ ಕಚೇರಿ, ಸಿಇಓ ಕಚೇರಿ ಸೇರಿದಂತೆ ಅನೇಕ ಕಡೆ ಸಂಪೂರ್ಣವಾಗಿ ನಿಲ್ಲಿಸಲಾಗಿದೆ. ಅದೇ ರೀತಿ ಕಲ್ಯಾಣ ಮಂಟಪ, ಬಾರ್ ಅಂಡ್ ರೆಸ್ಟೋರೆಂಟ್, ವೈದ್ಯರ ಸಂಘ, ಬಟ್ಟೆ ಅಂಗಡಿ ಮಾಲಿಕರುಗಳ ಜೊತೆಗೆ ಸಭೆ ನಡೆಸಿ ಪ್ಲಾಸ್ಟಿಕ್ ಬಳಕೆಯನ್ನು ಗಣನೀಯವಾಗಿ ತಗ್ಗಿಸಲು ಮತ್ತು ವೈಜ್ಞಾನಿಕವಾಗಿ ವಿಲೇ ಮಾಡಲು ಚರ್ಚೆ ಮಾಡಲಾಗುತ್ತದೆ ಎಂದರು.

ಈ ವೇಳೆ ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ರಾಜಾನಾಯ್ಕ, ತಹಶೀಲ್ದಾರ್ ಡಾ; ಎಂ.ಬಿ.ಅಶ್ವಥ ಉಪಸ್ಥಿತರಿದ್ದರು.

BIG NEWS: Good news for property owners: Digitization under the 'Bhu Suraksha' scheme revenue records are available online!
Share. Facebook Twitter LinkedIn WhatsApp Email

Related Posts

vidhana soudha

ರಾಜ್ಯ ಸರ್ಕಾರದಿಂದ `ವಿಕಲಚೇತನ ವಿದ್ಯಾರ್ಥಿಗಳಿಗೆ’ ಗುಡ್ ನ್ಯೂಸ್ : ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

05/07/2025 3:32 PM1 Min Read

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ರಾಜ್ಯದ ವಸತಿ ಶಾಲೆಯಲ್ಲಿ 7 ಮತ್ತು 8ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ.!

05/07/2025 3:22 PM1 Min Read

BREAKING: ರಾಜ್ಯದಲ್ಲಿ ಹೃದಯಾಘಾತದಿಂದ ಸಾವು ಪ್ರಕರಣ: ಆರೋಗ್ಯ ಇಲಾಖೆಗೆ ವರದಿ ಸಲ್ಲಿಸಿದ ಟೆಕ್ನಿಕಲ್ ಕಮಿಟಿ

05/07/2025 3:19 PM1 Min Read
Recent News
vidhana soudha

ರಾಜ್ಯ ಸರ್ಕಾರದಿಂದ `ವಿಕಲಚೇತನ ವಿದ್ಯಾರ್ಥಿಗಳಿಗೆ’ ಗುಡ್ ನ್ಯೂಸ್ : ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

05/07/2025 3:32 PM

BIG NEWS : ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ‘ಭೂ ಸುರಕ್ಷಾ’ ಯೋಜನೆಯಡಿ ಡಿಜಿಟಲೀಕರಣ, ಕಂದಾಯ ದಾಖಲೆಗಳು ಆನ್ಲೈನ್ನಲ್ಲಿ ಲಭ್ಯ.!

05/07/2025 3:27 PM

ಅಮೆರಿಕದ ಸುಂಕಗಳ ವಿರುದ್ಧ ಭಾರತ ಮಹತ್ವದ ಹೆಜ್ಜೆ ; ‘WTO’ಗೆ ಪ್ರಸ್ತಾವನೆ, ಏನಾಗಲಿದೆ ತಿಳಿಯಿರಿ!

05/07/2025 3:24 PM

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ರಾಜ್ಯದ ವಸತಿ ಶಾಲೆಯಲ್ಲಿ 7 ಮತ್ತು 8ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ.!

05/07/2025 3:22 PM
State News
vidhana soudha KARNATAKA

ರಾಜ್ಯ ಸರ್ಕಾರದಿಂದ `ವಿಕಲಚೇತನ ವಿದ್ಯಾರ್ಥಿಗಳಿಗೆ’ ಗುಡ್ ನ್ಯೂಸ್ : ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

By kannadanewsnow5705/07/2025 3:32 PM KARNATAKA 1 Min Read

ಪ್ರಸಕ್ತ ಸಾಲಿನಲ್ಲಿ ವಿಕಲಚೇತನ ವಿದ್ಯಾರ್ಥಿಗಳು ಸ್ಕಾಲರ್ಶಿಪ್ ಪಡೆಯಲು ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ತರಗತಿಗಳಲ್ಲಿ ವಿದ್ಯಾಭ್ಯಾಸ ಮಾಡುವ ವಿಕಲಚೇತನ…

BIG NEWS : ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ‘ಭೂ ಸುರಕ್ಷಾ’ ಯೋಜನೆಯಡಿ ಡಿಜಿಟಲೀಕರಣ, ಕಂದಾಯ ದಾಖಲೆಗಳು ಆನ್ಲೈನ್ನಲ್ಲಿ ಲಭ್ಯ.!

05/07/2025 3:27 PM

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ರಾಜ್ಯದ ವಸತಿ ಶಾಲೆಯಲ್ಲಿ 7 ಮತ್ತು 8ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ.!

05/07/2025 3:22 PM

BREAKING: ರಾಜ್ಯದಲ್ಲಿ ಹೃದಯಾಘಾತದಿಂದ ಸಾವು ಪ್ರಕರಣ: ಆರೋಗ್ಯ ಇಲಾಖೆಗೆ ವರದಿ ಸಲ್ಲಿಸಿದ ಟೆಕ್ನಿಕಲ್ ಕಮಿಟಿ

05/07/2025 3:19 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.