ಬೆಂಗಳೂರು : ಆಸ್ತಿ ಮಾಲೀಕರಿಗೆ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ನಿಮ್ಮ ಮನೆಯಲ್ಲೇ ಕುಳಿತು ಇ – ಖಾತಾವನ್ನು ಪಡೆದುಕೊಳ್ಳಿ. ಸಾರ್ವಜನಿಕ ಆಸ್ತಿ ದಾಖಲೆ ಈಗ ಮತ್ತಷ್ಟು ಸುರಕ್ಷಿತವಾಗಿದೆ.
ಬೇಕಾದ ದಾಖಲಾತಿಗಳು
ಮಾಲೀಕರ ಭಾವಚಿತ್ರ ಮತ್ತು ಆಧಾರ್
ಆಸ್ತಿ ತೆರಿಗೆ ಎಸ್.ಎ.ಎಸ್ ಚಲನ್ ಸಂಖ್ಯೆ
ಸ್ವತ್ತಿನ ಕ್ರಯ / ನೋಂದಾಯಿತ ಪತ್ರ ಸಂಖ್ಯೆ (ಕಾವೇರಿ ತಂತ್ರಾಶದಿಂದ ವಿದ್ಯುನ್ಮಾನವಾಗಿ ಪಡೆದುಕೊಳ್ಳುವುದು)
ವಿದ್ಯುತ್ ಆರ್ ಆರ್ ಸಂಖ್ಯೆ (ಖಾಲಿ ನಿವೇಶನಗಳಿಗೆ ಅಗತ್ಯವಿಲ್ಲ)
ಸ್ವತ್ತಿನ ಛಾಯಾಚಿತ್ರ
ಸ್ವತ್ತಿಗೆ ಸಂಬಂಧಿಸಿದ ಇತರೆ ಪೂರಕ ಅಗತ್ಯ ದಾಖಲೆಗಳು
ನಗರ ನಿವಾಸಿಗಳ 45 ಲಕ್ಷಕ್ಕೂ ಹೆಚ್ಚು ಕರಡು ಆಸ್ತಿ ದಾಖಲೆ ಇ-ಆಸ್ತಿ ತಂತ್ರಾಂಶದಲ್ಲಿ ಪ್ರಕಟಿಸಲಾಗುವುದು.
www.eaasthi.karnataka.gov.in Online ನಲ್ಲಿ ಆಸ್ತಿ ದಾಖಲೆ ಪರಿಶೀಲಿಸಬಹುದು.
ಅಗತ್ಯವಿದ್ದಲ್ಲಿ ದಾಖಲೆ ನೀಡಿ ತಿದ್ದುಪಡಿ/ತಕರಾರು ಅರ್ಜಿ ಸಲ್ಲಿಸಬಹುದು.
ಆನ್ಲೈನ್ನಲ್ಲೇ ಶುಲ್ಕ ಪಾವತಿಸಿ ದಾಖಲೆ ಸಲ್ಲಿಸಿ
ಅನುಮೋದಿತ ಅಧಿಕೃತ ಇ-ಖಾತೆ ಪಡೆಯಬಹುದು.
K-1 ಕೇಂದ್ರಗಳಲ್ಲೂ ಸಹ ನಾಗರಿಕರು ತಂತ್ರಾಂಶವನ್ನು ಬಳಸಿ ಸೇವೆಯನ್ನು ಪಡೆಯಬಹುದು.
ಇ-ಖಾತಾ ಪಡೆಯುವ ಮೂಲಕ ಸರಳವಾಗಿ ಆಸ್ತಿ ತೆರಿಗೆಯನ್ನು ಆನ್ಲೈನ್ ಮುಖಾಂತರ ಪಾವತಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : www.eaasthi.karnataka.gov.in 7259585959
ನಿಮ್ಮ ಮನೆಯಲ್ಲೇ ಕುಳಿತು ಇ – ಖಾತಾವನ್ನು ಪಡೆದುಕೊಳ್ಳಿ.
ಸಾರ್ವಜನಿಕ ಆಸ್ತಿ ದಾಖಲೆ ಈಗ ಮತ್ತಷ್ಟು ಸುರಕ್ಷಿತ pic.twitter.com/wPKjpvHqvq
— DIPR Karnataka (@KarnatakaVarthe) December 18, 2025








