ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರು ರಾಜ್ಯದ ಸರ್ಕಾರಿ ಪಿಯು ಕಾಲೇಜು ಉಪನ್ಯಾಸಕರು, ಪ್ರಾಂಶುಪಾಲರು 2025-26ನೇ ಸಾಲಿನ ವರ್ಗಾವಣೆಗೆ ಜೂ.25ರ ಇಂದಿನಿಂದ ಕೌನ್ಸೆಲಿಂಗ್ ಆರಂಭವಾಗಲಿದೆ.
ಕಡಿಮೆ ಮಕ್ಕಳ ದಾಖಲಾತಿ ಇರುವ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳನ್ನೂ ವರ್ಗಾವಣೆಗೆ ಲಭ್ಯವಿರುವ ಪಟ್ಟಿಯಲ್ಲಿ ತೋರಿಸದಿದ್ದರೆ ದಾಖಲಾತಿ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಸಾಕಷ್ಟು ಸಮಸ್ಯೆಯಾಗಬಹುದು. ಹಾಗಾಗಿ ಪ್ರಸಕ್ತ ಸಾಲಿನಲ್ಲಿ ಹೆಚ್ಚುವರಿ ಮತ್ತು ಶೂನ್ಯ ದಾಖಲಾತಿ ಹೊಂದಿರುವ ಕಾಲೇಜಿನ ಉಪನ್ಯಾಸಕರ, ಕೋರಿಕೆ ವರ್ಗಾವಣೆ ಯಲ್ಲಿ 40ಕ್ಕಿಂತ ಕಡಿಮೆ ವಿದ್ಯಾರ್ಥಿಗಳಿರುವ ಗ್ರಾಮೀಣ ಪ್ರದೇಶದ ಕಾಲೇಜಿನ ಖಾಲಿ ಹುದ್ದೆ ವರ್ಗಕ್ಕೆ ಆಯ್ಕೆ ಮಾಡಿಕೊಳ್ಳಲು ಅವಕಾಶಕ್ಕಾಗಿ ಸಂಘ ಆಗ್ರಹಿಸಿದೆ.
ಕಡಿಮೆ ವಿದ್ಯಾರ್ಥಿಗಳಿರುವ ಕಾಲೇಜುಗಳಲ್ಲಿಖಾಲಿ ಹುದ್ದೆಗಳನ್ನೂ ವರ್ಗಾವಣೆಗೆ ಪರಿಗಣಿಸುವಂತೆ ರಾಜ್ಯ ಪಿಯು ಉಪನ್ಯಾಸಕರ ಸಂಘ ಶಿಕ್ಷಣ ಇಲಾಖೆಯನ್ನು ಒತ್ತಾಯಿಸಿದೆ.