ಹಾಸನ : ರಾಜ್ಯದ ಪಡಿದರ ಚೀಟಿದಾರರಿಗೆ ಸರ್ಕಾರ ಇದೀಗ ಸಿಹಿಸುದ್ದಿ ಒಂದನ್ನು ನೀಡುತ್ತಿದ್ದು, ಫೆಬ್ರುವರಿ ಅಂತ್ಯ ಅಥವಾ ಮಾರ್ಚ್ ತಿಂಗಳಿನಿಂದ ಇಂದಿರಾ ಕಿಟ್ ವಿತರಣೆ ಮಾಡಲಾಗುತ್ತೆ ಎಂದು ಆಹಾರ ಇಲಾಖೆ ಸಚಿವ ಕೆಎಚ್ ಮುನಿಯಪ್ಪ ತಿಳಿಸಿದರು.
ಹಾಸನದಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಸರ್ಕಾರ ರಾಜ್ಯದ ಪಡಿತರ ಚೀಟಿದಾರರಿಗೆ ಈ ಒಂದು ಇಂದಿರಾ ಕಿಟ್ ಯೋಜನೆ ಜಾರಿಗೆ ಮಾಡಿದ್ದು, ಫೆಬ್ರವರಿ ಅಂತ್ಯ ಅಥವಾ ಮಾರ್ಚ್ ತಿಂಗಳಲ್ಲಿ ಇಂದಿರಾ ಕಿಟ್ ವಿತರಣೆ ಮಾಡಲಾಗುತ್ತೆ. ಸಕ್ಕರೆ, ಬೆಳೆ, ಅಡುಗೆ ಎಣ್ಣೆ ಉಪ್ಪು ಒಳಗೊಂಡ ಈ ಒಂದು ಕಿಟ್ ವಿತರಿಸಲಾಗುತ್ತಿದ್ದು ಇದರಿಂದ ಪೌಷ್ಟಿಕ ಆಹಾರ ಸಿಗಲಿದೆ ಎಂದು ಅವರು ತಿಳಿಸಿದರು.








