ಬೆಂಗಳೂರು : ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಸಿಹಿಸುದ್ದಿ ನೀಡಿದ್ದು, ಹೆಸರು ಸೇರ್ಪಡೆ/ತಿದ್ದುಪಡಿಗೆ ಜನವರಿ 31 ರವರೆಗೆ ಅವಕಾಶ ನೀಡಲಾಗಿದ್ದು, ಪಡಿತರ ಚೀಟಿದಾರರು ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ,ಹೆಸರು ತೆಗೆಯುವುದಕ್ಕೆ ಅವಕಾಶ ನೀಡಲಾಗಿದೆ. ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ತಿದ್ದುಪಡಿಗೆ ಅವಕಾಶವಿದೆ.
ಪಡಿತರ ಚೀಟಿ ತಿದ್ದುಪಡಿಗೆ ಈ ಹಿಂದೆ 2024ನೇ ಸಾಲಿನ ಡಿಸೆಂಬರ್ 31ರ ವರೆಗೆ ಅವಕಾಶ ನೀಡಲಾಗಿತ್ತು. ಇದೀಗ ಈ ಅವಧಿಯನ್ನು ವಿಸ್ತರಿಸಲಾಗಿದ್ದು. ಪಡಿತರ ಚೀಟಿ ತಿದ್ದುಪಡಿ ಅವಧಿಯು 2025ನೇ ಸಾಲಿನ ಜನವರಿ ತಿಂಗಳ 31ರ ವರೆಗೆ ಇರಲಿದೆ. ಈ ಅವಧಿಯಲ್ಲಿ ನೀವು ರೇಷನ್ ಕಾರ್ಡ್ ತಿದ್ದುಪಡಿಗಳನ್ನು ಮಾಡಿಕೊಳ್ಳುವುದಕ್ಕೆ ಅವಕಾಶ ಇದೆ.
ಬೆಂಗಳೂರು ಒನ್, ಸೈಬರ್ ಸೆಂಟರ್ ಗಳಲ್ಲಿ ಹೊಸ ಕಾರ್ಡ್ ಅಥವಾ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ವಟ್ನಲ್ಲಿ ಸ್ವಯಂ ಆಗಿ ಅರ್ಜಿ ಸಲ್ಲಿಸಬಹುದು. ಎಪಿಎಲ್ ಕಾರ್ಡ್ ಪಡೆಯುವವರು ಕೂಡ ಆನ್ನೈನ್ ನಲ್ಲಿ ಅರ್ಜಿ ಸಲ್ಲಿಸಬೇಕಿದೆ. ಈಗಾಗಲೇ ಪಡಿತರ ಚೀಟಿ ಹೊಂದಿದವರು ಹೊಸದಾಗಿ ಮಕ್ಕಳು ಅಥವಾ ತಮ್ಮ ಕುಟುಂಬದ ಇತರೆ ಸದಸ್ಯರ ಸೇರ್ಪಡೆಗೆ ಅವಕಾಶ ನೀಡಲಾಗುವುದು. http://ahara.kar.nic.in ವೆಬ್ಟ್ ಗಮನಿಸಬಹುದಾಗಿದೆ.
ಹೆಸರು ಸೇರಿಸಲು ಈ ದಾಖಲೆಗಳು ಕಡ್ಡಾಯ
ಪಡಿತರ ಚೀಟಿಯ ಮೂಲ ದಾಖಲೆ
ಮಗುವಿನ ಜನನ ಪ್ರಮಾಣಪತ್ರ ಜೊತೆಗೆ ಮಗುವಿನ ಪೋಷಕರ ಆಧಾರ್ ಕಾರ್ಡ್
ಹೆಂಡತಿಯ ಹೆಸರನ್ನು ಸೇರ್ಪಡೆ ಮಾಡುವಾಗ ಆ ಮಹಿಳೆಯ ಆಧಾರ್ ಕಾರ್ಡ್
ಗಂಡನ ಮನೆಯ ಪಡಿತರ ಚೀಟಿ ಪ್ರತಿ
ಈ ಎರಡು ದಾಖಲೆಗಳು ಇದ್ದರೆ ನೀವು ಆನ್ಲೈನ್ ಮುಖಾಂತರ ರೇಷನ್ ಕಾರ್ಡ್ನಲ್ಲಿ ನಿಮ್ಮ ಹೆಸರನ್ನು ಸೇರಿಸಬಹುದು.
ಪಡಿತರ ಚೀಟಿಯಲ್ಲಿ ಹೊಸ ಸದಸ್ಯರ ಸೇರ್ಪಡೆ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ
ನಿಮ್ಮ ಪಡಿತರ ಚೀಟಿಯ ಮೂಲ ದಾಖಲೆ ಮತ್ತು ಮಗುವಿನ ಜನನ ಪ್ರಮಾಣಪತ್ರ ಜೊತೆಗೆ ಮಗುವಿನ ಪೋಷಕರ ಆಧಾರ್ ಕಾರ್ಡ್ ಬೇಕಾಗುತ್ತದೆ. ಹೆಂಡತಿಯ ಹೆಸರನ್ನು ಸೇರ್ಪಡೆ ಮಾಡುವಾಗ ಆ ಮಹಿಳೆಯ ಆಧಾರ್ ಮತ್ತು ಗಂಡನ ಮನೆಯ ಪಡಿ ತರ ಚೀಟಿ ಪ್ರತಿಯನ್ನು ನೀಡಬೇಕಾಗುತ್ತದೆ.
ಅಧಿಕೃತ ವೆಬ್ ಸೈಟ್ ಗೆ https://ahara.kar.nic.in/home ಭೇಟಿ ನೀಡಿ
ಮುಖ್ಯ ಪುಟದಲ್ಲಿ ಇ-ಸೇವೆಗಳನ್ನು ಆಯ್ಕೆ ಮಾಡಿ.
ತಿದ್ದುಪಡಿ/ಹೊಸ ಸೇರ್ಪಡೆಗೆ ವಿನಂತಿ ಆಯ್ಕೆಯನ್ನು ಕ್ಲಿಕ್ ಮಾಡಿ.
ಹೊಸ ಪೇಜ್ ನಲ್ಲಿ ಫಾರ್ಮ್‌ನಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿದ ನಂತರ ತಿಳಿಸಲಾದ ಎಲ್ಲ ದಾಖಲೆಗಳನ್ನು ಸ್ಕ್ಯಾನ್ ಪ್ರತಿಯನ್ನು ಅನಲೋಡ್ ಮಾಡಿ.
ಅಪ್‌ಲೋಡ್ ಮಾಡಿದ ನಂತರ ಫಾರ್ಮ್ ಅನ್ನು ಸಬ್ಮೀಟ್ ಮಾಡಿ.
ಅರ್ಜಿ ಸಲ್ಲಿಸುವ ವೇಳೆ ನೀವು ನೀಡಿರುವಂತಹ ಎಲ್ಲ ದಾಖಲಾತಿಗಳು ಸರಿಯಾಗಿದ್ದರೆ, ನಿಮ್ಮ ಮನಗೆ ಅಪ್‌ಡೇಟ್ ಆಗಿರುವ ಹೊಸ ಪಡಿತರ ಚೀಟಿ ನೀಡಲಾಗುತ್ತದೆ.