ಬೆಂಗಳೂರು: ರಾಜ್ಯದ ಸೈನಿಕರು, ಮಾಜಿ ಸೈನಿಕರಿಗೆ ಉಚಿತವಾಗಿ ಜಮೀನು, ನಿವೇಶನ ಕಲ್ಪಿಸುವದಲ್ಲಿ ಆಗುತ್ತಿದ್ದಂತ ತಡವನ್ನು ಪರಿಹರಿಸಿ, ಶೀಘ್ರವೇ ಮಂಜೂರು ಮಾಡುವಂತೆ ರಾಜ್ಯ ಸರ್ಕಾರ ಖಡಕ್ ಆದೇಶ ಹೊರಡಿಸಿದೆ. ಈ ಮೂಲಕ ಸೈನಿಕ, ಮಾಜಿ ಸೈನಿಕರಿಗೆ ಗುಡ್ ನ್ಯೂಸ್ ನೀಡಿದೆ.
BIGG NEWS: ಪೊಲೀಸರು ಕರೆದಿದ್ದಕ್ಕೆ ವಿಚಾರಣೆಗೆ ಹಾಜರಾಗಿದ್ದೇನೆ; ಯಾರೂ ಸಂಧಾನಕ್ಕೆ ಬಂದಿಲ್ಲ; ಪಾನಿಪೂರಿ ಕಿಟ್ಟಿ
ಈ ಕುರಿತಂತೆ ಕಂದಾಯ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದ್ದು, ರಾಜ್ಯದ ಪ್ರತಿ ಗ್ರಾಮದಲ್ಲಿ ವಿಲೇವಾರಿಗೆ ಲಭ್ಯವಿರುವ ಜಮೀನಿನ ಪೈಕಿ ಶೇ.10ರಷ್ಟು ಜಮೀನನ್ನು ಸೈನಿಕ, ಮಾಜಿ ಸೈನಿಕರಿಗೆ ಕಾಯ್ದಿರಸಲು ಅವಕಾಶ ಕಲ್ಪಿಸಲಾಗಿರುವುದಾಗಿ ಹೇಳಿದೆ.
ಸೈನಿಕ, ಮಾಜಿ ಸೈನಿಕರಿಗೆ ಅವರ ಸೇವಾ ರಿಜಿಸ್ಟರ್ ನಲ್ಲಿ ನಮೂದಿಸಿರುವ ಸ್ಥಳೀಯ ತಾಲೂಕಿನಲ್ಲಿ ಅಥವಾ ಸಂಬಂಧ ಪಟ್ಟ ಜಿಲ್ಲೆಯಲ್ಲಿ ಭೂ ಲಭ್ಯತಾ ಪಟ್ಟಿಯಂತೆ ಸರ್ಕಾರಿ ಜಮೀನು ಲಭ್ಯವಿದ್ದಲ್ಲಿ, ಉಚಿತವಾಗಿ ಮಂಜೂರು ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದೆ.
ಸೈನಿಕ, ಮಾಜಿ ಸೈನಿಕರಿಗೆ ಜಮೀನು ಮಂಜೂರಾತಿ ಕೋರಿ ಸ್ವೀಕೃತವಾಗುವ ಅರ್ಜಿಗಳನ್ನು ವರ್ಗಾಯಿಸುವ ಬಗ್ಗೆ ಸ್ಪಷ್ಟೀಕರಣ ಕೋರಿ ಜಿಲ್ಲಾಧಿಕಾರಿಗಳಿಂದ ಪ್ರಸ್ತಾವನೆಗಳು ಸ್ವೀಕೃತವಾಗುತ್ತಿವೆ. ಈ ಹಿನ್ನಲೆಯಯಲ್ಲಿ ಭೂ ಲಭ್ಯತಾ ಪಟ್ಟಿಯಂತೆ ಸರ್ಕಾರಿ ಜಮೀನು ಲಭ್ಯವಿದ್ದಲ್ಲಿ, ಉಚಿತವಾಗಿ ಮಂಜೂರು ಮಾಡಲು ನಿಯಮಾನುಸಾರ ಕ್ರಮವಹಿಸುವಂತೆ ಸೂಚಿಸಿದೆ.
BIGG NEWS : ವಿಜಯಪುರದ ಬಾವಿಯಲ್ಲಿ ‘ಬೃಹತ್ ಮೊಸಳೆ ಪತ್ತೆ’, ಸ್ಥಳೀಯರಲ್ಲಿ ಆತಂಕ
ಜಿಲ್ಲಾಧಿಕಾರಿಯವರು ಸಂಬಂಧಪಟ್ಟ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಯಾವುದಾದರೂ ತಾಲೂಕಿನಲ್ಲಿ ಮಂಜೂರಾತಿಗಾಗಿ ಲಭ್ಯವಿದ್ದಲ್ಲಿ ಮಂಜೂರು ಮಾಡಲು ಕ್ರಮವಹಿಸುವಂತೆ ತಿಳಿಸಲಾಗಿದೆ.
ಇದಲ್ಲದೇ ಒಂದು ವೇಳೆ ಅರ್ಜಿದಾರರು ಕೋರಿರುವ ಜಿಲ್ಲೆಯಲ್ಲಿ ಸರ್ಕಾರಿ ಜಮೀನು ಲಭ್ಯವಿಲ್ಲದ ಪಕ್ಷದಲ್ಲಿ ಬೆಂಗಳೂರು ನಗರ ಜಿಲ್ಲೆ ಹೊರತುಪಡಿಸಿ, ನಗರ ಪ್ರದೇಶದಲ್ಲಿ 1200 ಚದರ ಅಡಿ ವಿಸ್ತೀರ್ಣದ ನಿವೇಶನವನ್ನು ಅಥವಾ ಗ್ರಾಮೀಣ ಪ್ರದೇಶದಲ್ಲಿ 2400 ಚದರ ಅಡಿ ವಿಸ್ತೀರ್ಣದ ನಿವೇಶನವನ್ನು ಜಾರಿಯಲ್ಲಿರುವ ಸರ್ಕಾರದ ಯಾವುದೇ ವಸತಿ ಯೋಜನೆಯಡಿ, ಯಾವುದೇ ವಿಶೇಷ ಯೋಜನೆಯಡಿ ನಿವೇಶನವನ್ನು ಮಂಜೂರು ಮಾಡುವಂತೆ ಕ್ರಮ ವಹಿಸಲು ಸೂಚಿಸಿದ್ದಾರೆ.
ವರದಿ: ವಸಂತ ಬಿ ಈಶ್ವರಗೆರೆ