ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಆರೋಗ್ಯ ಸಂಜೀವಿನಿ ಯೋಜನೆ ಜನವರಿ 1ರಿಂದಲೇ ಜಾರಿಗೆ ತರಲು ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದಿನ ವರ್ಷದೊಳಗೆ ಎನ್ಪಿಎಸ್ ನೌಕರರು ಒಪಿಎಸ್ ಗೆ ಪರಿವರ್ತನೆ ಆಗಬೇಕು. ಈ ನಿಟ್ಟಿನಲ್ಲಿ ಸೋಮವಾರ ಮುಖ್ಯಮಂತ್ರಿಗಳನ್ನು ಭೇಟಿಯಾಗಲಿದ್ದು, ಚರ್ಚೆ ನಡೆಸಲಾಗುವುದು. ಕೇಂದ್ರದ ಮಾದರಿಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ವೇತನ 2026ರಲ್ಲಿ ಕೊಡಿಸುವ ಗುರಿ ಗೊಂದಲಾಗಿದೆ. ಆರೋಗ್ಯ ಸಂಜೀವಿನಿ ಯೋಜನೆ ಜನವರಿ 1ರಿಂದಲೇ ಜಾರಿಗೆ ತರಲು ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಹೇಳಿದ್ದಾರೆ.
ಬೆಂಗಳೂರಿಗೆ ಕೆಲಸಕ್ಕೆ ಆಗಮಿಸುವ ಸರ್ಕಾರಿ ನೌಕರರಿಗೆ ವಾಸ್ತವ್ಯಕ್ಕೆ ಅನುಕೂಲವಾಗುವಂತೆ 300 ರಿಂದ 350 ಕೊಠಡಿಗಳ ಭವ್ಯ ಕಟ್ಟಡ ನಿರ್ಮಾಣಕ್ಕೆ ನೀಲಿ ನಕ್ಷೆ ರೂಪಿಸಲಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಬೆಂಗಳೂರಿಗೆ ಕೆಲಸಕ್ಕೆ ಆಗಮಿಸುವ ಸರ್ಕಾರಿ ನೌಕರರಿಗೆ ವಾಸ್ತವ್ಯಕ್ಕೆ ಅನುಕೂಲವಾಗುವಂತೆ ದಿನವೊಂದಕ್ಕೆ 100ರೂ. ಬಾಡಿಗೆ ದರದಲ್ಲಿ ಕೊಠಡಿ ನೀಡಲಾಗುವುದು. ಎಲ್ಲಾ ಜಿಲ್ಲೆಗಳಲ್ಲಿಯೂ ನೌಕರರ ಭವನ ಮತ್ತು ಸಭಾಂಗಣ, ನೌಕರರ ಮಕ್ಕಳ ಶುಭಕಾರ್ಯ ಮಾಡಲು ಅನುಕೂಲವಾಗುವಂತೆ ಕಲ್ಯಾಣ ಮಂಟಪಗಳನ್ನು ನಿರ್ಮಿಸಲಾಗುವುದು ಎಂದು ಹೇಳಿದ್ದಾರೆ.
![’ಆಕೆಯೇನಕ್ಕೆ ಅಲ್ಲಿಗೆ ಬಂದಿದ್ದಾರೆ?’: ವಿಜಯ್ ಪ್ರಮಾಣ ವಚನ ಸಮಾರಂಭದಲ್ಲಿ ಕಾಣಿಸಿಕೊಂಡ ನಟಿ ತ್ರಿಶಾ ವಿರುದ್ಧ ನೆಟ್ಟಿಗರ ಆಕ್ರೋಶ! ದಳಪತಿ ವಿಜಯ್ ರಾಜಕೀಯ ಪ್ರವೇಶ - [Dalapathi Vijay Politics], ತ್ರಿಶಾ ಕೃಷ್ಣನ್ ತಿಳಿ ನೀಲಿ ಸೀರೆ - [Trisha Krishnan in Blue Saree], ತಮಿಳಗ ವೆಟ್ರಿ ಕಳಗಂ ಮುಖ್ಯಮಂತ್ರಿ - [TVK Chief Minister Vijay]](https://kannadanewsnow.com/kannada/wp-content/uploads/2026/05/ವಿಜಯ್-ಪ್ರಮಾಣವಚನ-ಕಾರ್ಯಕ್ರಮದಲ್ಲಿ-ತ್ರಿಶಾ-ಕೃಷ್ಣನ್-Trisha-Krishnan-at-Vijay-Swearing-in-Ceremony-300x169.jpg)







