ದಾವಣೆಗೆರೆ : ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಚುನಾವಣೆ ಪೂರ್ವದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ನೀಡಿದ್ದ ಓಪಿಎಸ್ ಜಾರಿಗೊಳಿಸುವ ಭರವಸೆ ಈಡೇರಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರ ಕೊಟ್ಟ ಭರವಸೆಯಂತೆ ರಾಜ್ಯದ ಎಲ್ಲಾ ಸರ್ಕಾರಿ ನೌಕರರಿಗೆ ಓಪಿಎಸ್‌ನ್ನು ಮುಂದಿನ ಕೆಲವೇ ದಿನಗಳಲ್ಲಿ ಜಾರಿಗೊಳಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ. ಈ ಮೂಲಕ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ.
ಇನ್ನು ಸಿಎಂ ಸಿದ್ದರಾಮಯ್ಯ ಅವರು ಶಿಕ್ಷಣ ಕ್ಷೇತ್ರಕ್ಕೆ ಈ ಬಾರಿಯ ಬಜೆಟ್‌ನಲ್ಲಿ ಅಧಿಕ ಅನುದಾನ ನೀಡಿದ್ದು, ರಾಜ್ಯದಲ್ಲಿ ಕೆ.ಪಿ.ಎಸ್ ಶಾಲೆಗಳಿಗೆ ಹೆಚ್ಚಿನ ಬೇಡಿಕೆ ಇದ್ದು, ಪ್ರಸ್ತುತ 300 ಕೆ.ಪಿ.ಎಸ್. ಶಾಲೆಗಳಿದ್ದು, ಈ ವರ್ಷ ಮತ್ತೆ 500ಕ್ಕೂ ಹೆಚ್ಚು ಶಾಲೆಗಳನ್ನು ತೆರೆಯಲಾಗುವುದು ಎಂದು ಹೇಳಿದ್ದಾರೆ.