Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದ ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಅದ್ಧೂರಿ ಶಂಕರ ಜಯಂತಿ ಆಚರಣೆ

21/04/2026 8:13 PM

ರಕ್ಷಕನೇ ಭಕ್ಷಕ: ದಾಳಿ ನೆಪದಲ್ಲಿ ಮನೆಗೆ ನುಗ್ಗಿ ಚಿನ್ನ ಕದ್ದ ಇಂದೋರ್ ಪೊಲೀಸರು; ಖದರ್ ತೋರಿಸಿದ ಸಿಸಿಟಿವಿ ಕ್ಯಾಮೆರಾ | Watch video

21/04/2026 8:11 PM

Big Updates: ಕೇರಳದಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 13 ಬಲಿ, ಹಲವರ ಸ್ಥಿತಿ ಗಂಭೀರ | Watch video

21/04/2026 8:02 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ‘ರಾಜ್ಯ ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್: 2026 ಡಿ.31ರ ವರೆಗೆ ‘ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ’ ಅವಧಿ ವಿಸ್ತರಣೆ.!
KARNATAKA

BIG NEWS : ‘ರಾಜ್ಯ ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್: 2026 ಡಿ.31ರ ವರೆಗೆ ‘ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ’ ಅವಧಿ ವಿಸ್ತರಣೆ.!

By kannadanewsnow5713/02/2026 5:10 AM

ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರು ಬಡ್ತಿ ಸೇರಿದಂತೆ ಇತರೆ ಸೌಲಭ್ಯಕ್ಕೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ( Computer Literacy Test-CLT) ತೇರ್ಗಡೆ ಕಡ್ಡಾಯವಾಗಿದೆ. ಈ ಪರೀಕ್ಷೆ ಉತ್ತೀರ್ಣಕ್ಕೆ ದಿನಾಂಕ 31-12-2025ರವರೆಗೆ ಅವಕಾಶ ನೀಡಲಾಗಿತ್ತು. ಇದೀಗ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಎನ್ನುವಂತೆ ದಿನಾಂಕ 31-12-2026ರವರೆಗೆ ಅವಧಿಯನ್ನು ವಿಸ್ತರಿಸಿದೆ.

ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಅದರಲ್ಲಿ ಕರ್ನಾಟಕ ರಾಜ್ಯ ನಾಗರಿಕ ಸೇವಾ ಅಧಿನಿಯಮ, 1978 (1990 ರ ಕರ್ನಾಟಕ ಅಧಿನಿಯಮ 14) 8ನೇ ಪುಕರಣದೊಂದಿಗೆ ಓದಲಾದಂತೆ, 3ನೇ ಪ್ರಕರಣದ (1)ನೇ ಉಪ-ಪಕರಣದ ಮೂಲಕ ಪುದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ರಚಿಸಿರುವ ಕರ್ನಾಟಕ ನಾಗರಿಕ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು 2012ಕ್ಕೆ ತಿದ್ದುಪಡಿ ಮಾಡುವ ಸಲುವಾಗಿ ಈ ಕೆಳಗಿನ ನಿಯಮಗಳ ಕರಡನ್ನು, ಸದರಿ ಅಧಿನಿಯಮದ 3ನೇ ಪುಕರಣದ (2)ನೇ ಉಪ ಪಕರಣದ (ಎ) ಖಂಡದ ಮೂಲಕ ಅಗತ್ಯಪಡಿಸಲಾದಂತೆ ಇದರಿಂದ ಬಾಧಿತರಾಗುವ ಸಂಭವವಿರುವ ಎಲ್ಲಾ ವ್ಯಕ್ತಿಗಳ ಮಾಹಿತಿಗಾಗಿ, ಈ ಮೂಲಕ ಪುಕಟಿಸಲಾಗಿದೆ ಮತ್ತು ಸದರಿ ಕರಡನ್ನು ಅಧಿಕೃತ ರಾಜ್ಯಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ ಹದಿನೈದು ದಿನಗಳ ನಂತರ ಪರಿಗಣನೆಗೆ ತೆಗೆದುಕೊಳ್ಳಲಾಗುವುದೆಂದು ಈ ಮೂಲಕ ಸೂಚಿಸಲಾಗಿದೆ ಎಂದಿದ್ದಾರೆ.

ಸದರಿ ಕರಡು ನಿಯಮಗಳಿಗೆ ಸಂಬಂಧಪಟ್ಟಂತೆ ಮೇಲೆ ಗೊತ್ತುಪಡಿಸಿದ ಅವಧಿ ಕೊನೆಗೊಳ್ಳುವ ಮುಂಚೆ ಯಾರೇ ವ್ಯಕ್ತಿಯಿಂದ ರಾಜ್ಯ ಸರ್ಕಾರವು ಸ್ವೀಕರಿಸಬಹುದಾದ ಯಾವುದೇ ಆಕ್ಷೇಪಣೆ ಅಥವಾ ಸಲಹೆಯನ್ನು ರಾಜ್ಯ ಸರ್ಕಾರವು ಪರಿಗಣಿಸುತ್ತದೆ. ಆಕ್ಷೇಪಣೆಗಳು ಅಥವಾ ಸಲಹೆಗಳನ್ನು ಸರ್ಕಾರದ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ವಿಧಾನ ಸೌಧ, ಡಾII ಬಿ.ಆರ್. ಅಂಬೇಡ್ಕರ್ ವೀದಿ, ಬೆಂಗಳೂರು-560001 ಇವರಿಗೆ ಸಲ್ಲಿಸತಕ್ಕದ್ದು.

ಕರಡು ನಿಯಮಗಳು

1. ಶೀರ್ಷಿಕೆ ಮತ್ತು ಪ್ರಾರಂಭ:- (1) ಈ ನಿಯಮಗಳನ್ನು ಕರ್ನಾಟಕ ನಾಗರಿಕ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) (ತಿದ್ದುಪಡಿ) ನಿಯಮಗಳು, 2026 ಎಂದು ಕರೆಯತಕ್ಕದ್ದು.

(2) ಈ ನಿಯಮಗಳಲ್ಲಿ ಒದಗಿಸಿರುವಂತೆ ಉಳಿಸಿಕೊಂಡು, ಈ ನಿಯಮಗಳು ಅಧಿಕೃತ ರಾಜ್ಯಪತ್ರದಲ್ಲಿ ಅಂತಿಮವಾಗಿ ಪುಕಟಗೊಂಡ ದಿನಾಂಕದಿಂದ ಜಾರಿಗೆ ಬರತಕ್ಕದ್ದು.

2. ನಿಯಮ 2ಕ್ಕೆ ತಿದ್ದುಪಡಿ:- ಕರ್ನಾಟಕ ನಾಗರಿಕ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು 2012ರ (ಇದರಲ್ಲಿ ಇನ್ನು ಮುಂದೆ ಸದರಿ ನಿಯಮಗಳೆಂದು ಉಲ್ಲೇಖಿಸಲಾಗಿದೆ) ನಿಯಮ 2ರಲ್ಲಿ “ 31.12.2025 ರೊಳಗೆ” ಎಂಬ ಪದ ಮತ್ತು ಅಂಕಿಗಳ ಬದಲಿಗೆ “31.12.2026” ಎಂಬ ಪದ ಮತ್ತು ಅಂಕಿಗಳನ್ನು ದಿನಾಂಕ:01.01.2026 ರಿಂದ ಜಾರಿಗೆ ಬಂದಿವೆ ಎಂದು ಭಾವಿಸಿ ಪ್ರತಿಸ್ಥಾಪಿಸತಕ್ಕದ್ದು.

3. ನಿಯಮ 3ಕ್ಕೆ ತಿದ್ದುಪಡಿ :- ಸದರಿ ನಿಯಮಗಳ ನಿಯಮ 3ರಲ್ಲಿ..

(ಎ) ಉಪ ನಿಯಮ (1) ರಲ್ಲಿ “31.12.2025 ರೊಳಗೆ”, ಎಂಬ ಪದ ಮತ್ತು ಅಂಕಿಗಳ ಬದಲಿಗೆ “31.12.2026 ರೊಳಗೆ”, ಎಂಬ ಪದ ಮತ್ತು ಅಂಕಿಗಳನ್ನು ದಿನಾಂಕ:01.01.2026 ರಿಂದ ಜಾರಿಗೆ ಬಂದಿವೆ ಎಂದು ಭಾವಿಸಿ ಪ್ರತಿಸ್ಥಾಪಿಸತಕ್ಕದ್ದು, ಮತ್ತು

(ಬಿ) ಉಪ ನಿಯಮ (2) ರಲ್ಲಿ “31.12.2025ರೊಳಗೆ”, ಎಂಬ ಪದ ಮತ್ತು ಅಂಕಿಗಳ ಬದಲಿಗೆ “31.12.2026 ರೊಳಗೆ”, ಎಂಬ ಪದ ಮತ್ತು ಅಂಕಿಗಳನ್ನು ದಿನಾಂಕ:01.01.2026 ರಿಂದ ಜಾರಿಗೆ ಬಂದಿವೆ ಎಂದು ಭಾವಿಸಿ ಪ್ರತಿಸ್ಥಾಪಿಸತಕ್ಕದ್ದು ಎಂಬುದಾಗಿ ತಿಳಿಸಿದ್ದಾರೆ.

ವರದಿ; ವಸಂತ ಬಿ ಈಶ್ವರಗೆರೆ, ಸಂಪಾದಕರು..

BIG NEWS: Good news for ‘State Government Employees’: ‘Computer Literacy Test’ period extended till 31st December 2026!
Share. Facebook Twitter LinkedIn WhatsApp Email

Related Posts

ಸಾಗರದ ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಅದ್ಧೂರಿ ಶಂಕರ ಜಯಂತಿ ಆಚರಣೆ

21/04/2026 8:13 PM2 Mins Read

ಗುರುಗಳು ಹೇಳಿದ ಆ ಮಾತೇ ಆ ಯುವಕನ ಬದುಕು ಬದಲಿಸಿತು. ಅದೇನು ಅಂತ ಈ ಸುದ್ದಿ ಓದಿ!

21/04/2026 7:36 PM3 Mins Read

ಬಸವಾದಿ ಶರಣರ ತತ್ವಗಳು ಸಮಾಜದ ಪ್ರಗತಿಗೆ ಪೂರಕ: ಶಾಸಕ ಗೋಪಾಲಕೃಷ್ಣ ಬೇಳೂರು

21/04/2026 7:32 PM2 Mins Read
Recent News

ಸಾಗರದ ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಅದ್ಧೂರಿ ಶಂಕರ ಜಯಂತಿ ಆಚರಣೆ

21/04/2026 8:13 PM

ರಕ್ಷಕನೇ ಭಕ್ಷಕ: ದಾಳಿ ನೆಪದಲ್ಲಿ ಮನೆಗೆ ನುಗ್ಗಿ ಚಿನ್ನ ಕದ್ದ ಇಂದೋರ್ ಪೊಲೀಸರು; ಖದರ್ ತೋರಿಸಿದ ಸಿಸಿಟಿವಿ ಕ್ಯಾಮೆರಾ | Watch video

21/04/2026 8:11 PM

Big Updates: ಕೇರಳದಲ್ಲಿ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 13 ಬಲಿ, ಹಲವರ ಸ್ಥಿತಿ ಗಂಭೀರ | Watch video

21/04/2026 8:02 PM

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: DA ಏರಿಕೆಯಿಂದ ನಿಮ್ಮ ಸಂಬಳ ಎಷ್ಟು ಹೆಚ್ಚಾಗಲಿದೆ? ಇಲ್ಲಿದೆ ಸಂಪೂರ್ಣ ಲೆಕ್ಕಾಚಾರ ಮತ್ತು ಅರಿಯರ್ಸ್ ಮಾಹಿತಿ

21/04/2026 7:56 PM
State News
KARNATAKA

ಸಾಗರದ ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಅದ್ಧೂರಿ ಶಂಕರ ಜಯಂತಿ ಆಚರಣೆ

By kannadanewsnow0921/04/2026 8:13 PM KARNATAKA 2 Mins Read

ಶಿವಮೊಗ್ಗ: ಜಿಲ್ಲೆಯ ಸಾಗರ ಪಟ್ಟಣದ ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಮಂಗಳವಾರ ತಾಲ್ಲೂಕು ಆಡಳಿತದ ಸಹಯೋಗದೊಂದಿಗೆ ಶ್ರೀ ಶಂಕರ ಭಗವತ್ಪಾದಾಚಾರ್ಯರ…

ಗುರುಗಳು ಹೇಳಿದ ಆ ಮಾತೇ ಆ ಯುವಕನ ಬದುಕು ಬದಲಿಸಿತು. ಅದೇನು ಅಂತ ಈ ಸುದ್ದಿ ಓದಿ!

21/04/2026 7:36 PM

ಬಸವಾದಿ ಶರಣರ ತತ್ವಗಳು ಸಮಾಜದ ಪ್ರಗತಿಗೆ ಪೂರಕ: ಶಾಸಕ ಗೋಪಾಲಕೃಷ್ಣ ಬೇಳೂರು

21/04/2026 7:32 PM

ಸಾಗರ ಪಟ್ಟಣದ ಅಭಿವೃದ್ಧಿಗೆ ₹7 ಕೋಟಿ ಮೀಸಲು: ಶಾಸಕ ಗೋಪಾಲಕೃಷ್ಣ ಬೇಳೂರು ಭರವಸೆ

21/04/2026 7:22 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.