ಬೆಂಗಳೂರು : ಬೆಂಗಳೂರು ನಗರದ ಅರಮನೆ ಆವರಣದಲ್ಲಿ “ಸಮ್ಮಿಲನ ಸಮಾವೇಶ, ಕಾರ್ಯಾಗಾರ ಹಾಗೂ ಉಪನ್ಯಾಸ” ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಸದರಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಂಘದ ಚುನಾಯಿತ ನಿರ್ದೇಶಕರು, ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರು ಹಾಗೂ ಪದಾಧಿಕಾರಿಗಳಿಗೆ ಫೆಬ್ರವರಿ 20 ರಂದು ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ದಿನಾಂಕ: 20.02.2025 ರಂದು ಬೆಂಗಳೂರು ನಗರದ ಅರಮನೆ ಆವರಣದಲ್ಲಿ “ಸಮ್ಮಿಲನ ಸಮಾವೇಶ, ಕಾರ್ಯಾಗಾರ ಹಾಗೂ ಉಪನ್ಯಾಸ” ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸದರಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಂಘದ ಚುನಾಯಿತ ನಿರ್ದೇಶಕರು, ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರು ಹಾಗೂ ಪದಾಧಿಕಾರಿಗಳಿಗೆ ದಿನಾಂಕ: 20.02.2025 ರಂದು ಒಂದು ದಿನದ ವಿಶೇಷ ಸಾಂದರ್ಭಿಕ ರಜೆಯನ್ನು ಈ ಕೆಳಕಂಡ ಷರತ್ತಿಗೊಳಪಟ್ಟು ಮಂಜೂರು ಮಾಡಲಾಗಿದೆ.
“2024-29ನೇ ಅವಧಿಗೆ ಆಯ್ಕೆಯಾದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾಯಿತ ನಿರ್ದೇಶಕರು, ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರು ಹಾಗೂ ಪದಾಧಿಕಾರಿಗಳು ಪೂರ್ವಾನುಮತಿಯನ್ನು ಪಡೆಯಬೇಕು. ಈ ಆಧಾರದ ಮೇಲೆ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲು ಅಧಿಕಾರವುಳ್ಳ ಅಧಿಕಾರಿಗಳು ಮಂಜೂರು ಮಾಡತಕ್ಕದ್ದು.