ಬೆಂಗಳೂರು : ರಾಜ್ಯ ಸರ್ಕಾರವು ಆಸ್ತಿ ಮಾಲೀಕರಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ನಿವೇಶನ ಅಥವಾ ಕಟ್ಟಡಗಳಿಗೆ ಬಿ ಖಾತಾ ನೀಡುವ ಸಂಬಂಧ ಶೀಘ್ರದಲ್ಲೇ ಹೊಸ ಆದೇಶವೊಂದನ್ನು ಹೊರಡಿಸಲಾಗುವುದು ಎಂದು ರಹೀಂ ಖಾನ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವರು ಆಸ್ತಿ ನೋಂದಣಿ ಮಾಡಿಕೊಳ್ಳದೇ, ಕರಾರು ಹಾಗೂ ಜನರಲ್ ಪವರ್ ಆಫ್ ಅಟಾರ್ನಿ (ಜಿಪಿಎ) ಹೊಂದಿದವರು ಕೂಡ ಬಿ ಖಾತಾ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಸಚಿವ ಸಂಪುಟದಲ್ಲಿ ಚರ್ಚೆಯಾಗಿದೆ. ಕಾನೂನು ತಜ್ಞರ ಅಭಿಪ್ರಾಯ ಬಂದ ನಂತರ ಹೊಸ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ.
ಇನ್ನು, ರಾಜ್ಯದ ಇಂದಿರಾ ಕ್ಯಾಂಟೀನ್ ಗಳಲ್ಲಿ ಮಾಂಸಾಹಾರ ನೀಡಬೇಕು ಎನ್ನುವ ವಿಚಾರ ಇದೆ. ಆದರೆ ಅದು ಆಗಿಲ್ಲ. ಇದೀಗ ಬಡವರಿಗೆ ಪ್ರೋಟಿನ್ ಯುಕ್ತ ಆಹಾರ ಸಿಗಬೇಕು ಎನ್ನುವ ದೃಷ್ಟಿಯಿಂದ ಮೊಟ್ಟೆ ನೀಡುವ ಚಿಂತನೆ ಇದೆ. ರಾಜ್ಯದಲ್ಲಿ ಈ ವರ್ಷ 186 ಹೊಸ ಇಂದಿರಾ ಕ್ಯಾಂಟೀನ್ ತೆರೆಯಲಾಗುತ್ತಿದ್ದು, ಈಗಾಗಲೇ 100 ಕ್ಕೂ ಹೆಚ್ಚು ಕ್ಯಾಂಟೀನ್ ಆರಂಭವಾಗಿವೆ. ಒಂದರೆಡು ತಿಂಗಳಲ್ಲಿ ಬಾಕಿ ಇರುವ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ಹೇಳಿದ್ದಾರೆ.