ಬೆಂಗಳೂರು : ರಾಜ್ಯ ಸರ್ಕಾರವು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಗಳಿಗೆ ನೌಕರರ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ “ಕೆ ಎಸ್ ಆರ್ ಟಿ ಸಿ ಆರೋಗ್ಯ ಕಾರ್ಯಕ್ರಮಕ್ಕೆ ನಾಳೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.
ಜನವರಿ 6 ರ ನಾಳೆ ಬೆಳಗ್ಗೆ 11 ಗಂಟೆಗೆ ವಿಧಾನಸೌದದಲ್ಲಿ ಸಮ್ಮೆಳನ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಗಳಿಗೆ ನೌಕರರ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ “ಕೆ ಎಸ್ ಆರ್ ಟಿ ಸಿ ಆರೋಗ್ಯ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಗಳಿಗೆ ನೌಕರರ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ “ಕೆ ಎಸ್ ಆರ್ ಟಿ ಸಿ ಆರೋಗ್ಯ” ಗೆ ಸನ್ಮಾನ್ಯ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದು, ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್,ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಮಾನ್ಯ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು, ಮಾನ್ಯ ಅಧ್ಯಕ್ಷರು, ಕೆ.ಎಸ್.ಆರ್.ಟಿ.ಸಿ ಹಾಗೂ ಶಾಸಕರು, ಗುಬ್ಬಿ ವಿಧಾನಸಭಾ ಕ್ಷೇತ್ರ ಹಾಗೂ ಉಪಾಧ್ಯಕ್ಷರು, ಕೆ.ಎಸ್.ಆರ್.ಟಿ.ಸಿ ರವರು ಘನ ಉಪಸ್ಥಿತಿವಹಿಸಲಿದ್ದಾರೆ. ಮಾನ್ಯ ಶಾಸಕರು, ಶಿವಾಜಿನಗರ ವಿಧಾನಸಭಾ ಕ್ಷೇತ್ರರವರು ಅಧ್ಯಕ್ಷತೆ ವಹಿಸಲಿದ್ದಾರೆ.
ಈ ಸಮಾರಂಭದಲ್ಲಿ ಕರ್ನಾಟಕ ಸರ್ಕಾರದ ಸಚಿವರುಗಳು, ಸಂಸದರುಗಳು, ಶಾಸಕರುಗಳು ಹಾಗೂ ಇತರೆ ಗಣ್ಯ ವ್ಯಕ್ತಿಗಳು ಮತ್ತು ಒಡಂಬಡಿಕೆ ಮಾಡಿಕೊಳ್ಳುವ ಆಸ್ಪತ್ರೆಗಳ ಮುಖ್ಯಸ್ಥರುಗಳು ಭಾಗವಹಿಸಲಿದ್ದಾರೆ.