Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಬೆಂಗಳೂರು: ಮಾಜಿ ಕಾರ್ಪೊರೇಟರ್ ವಿರುದ್ಧ ವಂಚನೆ ಆರೋಪ: ಡೆತ್ ನೋಟ್ ಬರೆದಿಟ್ಟು ಮಹಿಳೆ ಆತ್ಮಹತ್ಯೆಗೆ ಯತ್ನ!

10/04/2026 3:31 PM

BIG NEWS : ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಕೋರ್ಟ್​​ ಗ್ರೀನ್​​ ಸಿಗ್ನಲ್​​ : ಆದ್ರೆ ಈ ಷರತ್ತುಗಳು ಅನ್ವಯ

10/04/2026 3:27 PM

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖ್ಯಾತ ನಿರ್ದೇಶಕ ರಂಜಿತ್‌ಗೆ ಜಾಮೀನು ಮಂಜೂರು | Filmmaker Ranjith

10/04/2026 3:24 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯ ಸರ್ಕಾರದಿಂದ `ST’ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 35,000 ರೂ. ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
KARNATAKA

BIG NEWS : ರಾಜ್ಯ ಸರ್ಕಾರದಿಂದ `ST’ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 35,000 ರೂ. ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

By kannadanewsnow5718/06/2025 8:27 AM

ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಇಲಾಖಾ ವತಿಯಿಂದ ನೀಡಲಾಗುವ ಪ್ರೋತ್ಸಾಹಧನ ಮಂಜೂರಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಪ್ರೋತ್ಸಾಹಧನ ವಿವರ: ದ್ವಿತೀಯ ಪಿಯುಸಿ ರೂ.20 ಸಾವಿರ, ಪದವಿ ರೂ.25 ಸಾವಿರ, ಯಾವುದೇ ಪೋಸ್ಟ್ ಗ್ರ್ಯಾಜ್ಯುವೇಟ್ ಕೋರ್ಸ್ ಎಂ.ಎ, ಎಂ.ಎಸ್ಸಿ, ಇತ್ಯಾದಿ ರೂ.30 ಸಾವಿರ ಮತ್ತು ಕೃಷಿ, ಎಂಜಿನಿಯರಿಂಗ್, ವೆಟರ್ನರಿ, ಮೆಡಿಸಿನ್ ರೂ.35 ಸಾವಿರ.

ಅರ್ಹತೆ: ವಿದ್ಯಾರ್ಥಿಗಳು ದ್ವಿತೀಯ, ಅಂತಿಮ ವರ್ಷದ ಪಿಯುಸಿಯನ್ನು ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿರಬೇಕು. ಸಿಬಿಎಸ್ಸಿ ಮತ್ತು ಐಸಿಎಸ್ಇ ವತಿಯಿಂದ ನಡೆಸಲಾಗುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆಯಾದವರೂ ಸಹ ಈ ಯೋಜನೆಯಡಿಯಲ್ಲಿ ಪ್ರೋತ್ಸಾಹಧನ ಪಡೆಯಲು ಅರ್ಹರಿರುತ್ತಾರೆ.

ಪದವಿ, ಸ್ನಾತಕೋತ್ತರ ಪದವಿ, ಕೃಷಿ, ಪಶುಸಂಗೋಪನೆ, ಎಂಜಿನಿಯರಿಂಗ್, ಮೆಡಿಕಲ್ ಕೋರ್ಸುಗಳಿಗೆ ಸಂಬಂಧಿಸಿದಂತೆ ಪ್ರತಿ ವರ್ಷ ಪ್ರಥಮ ಪ್ರಯತ್ನದಲ್ಲಿ ಪಾಸಾಗಿರಬೇಕು. ಅಂತಿಮ ವರ್ಷದ ತರಗತಿಯಲ್ಲಿ ಪ್ರಥಮ ದರ್ಜೆಯಲ್ಲಿ ಪಾಸಾಗಿರಬೇಕು. ಈ ಕೋರ್ಸ್ಗಳಿಗೆ ಸೆಮಿಸ್ಟರ್ ಪದ್ದತಿ ಇದ್ದಲ್ಲಿ ಎಲ್ಲಾ ಸೆಮಿಸ್ಟರ್ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪಾಸಾಗಿರಬೇಕು ಮತ್ತು ಅಂತಿಮ ವರ್ಷದ ತರಗತಿಯಲ್ಲಿ ಪ್ರಥಮ ದರ್ಜೆಯಲ್ಲಿ ಪಾಸಾಗಿರಬೇಕು. ಎಲ್ಲಾ ಕೋರ್ಸುಗಳಲ್ಲಿ ಪ್ರತಿ ವರ್ಷದ ಪರೀಕ್ಷೆ ಅಥವಾ ಸೆಮಿಸ್ಟರ್ಗಳಲ್ಲಿ ಕಂಪಾರ್ಟ್ಮೆಂಟಲ್/ ಕ್ಯಾರಿ ಓವರ್ ಸಿಸ್ಟಮ್ರಡಿ ಪಾಸಾಗಿದ್ದರೆ ಅಂತಹವರು ಬಹುಮಾನ ಹಣ ಪಡೆಯಲು ಅರ್ಹರಿರುವುದಿಲ್ಲ.

ಕರ್ನಾಟಕ ರಾಜ್ಯದ ಪರಿಶಿಷ್ಟ ವರ್ಗಗಳ ವಿದ್ಯಾರ್ಥಿಗಳು ಈ ಕೋರ್ಸುಗಳನ್ನು ಹೊರ ರಾಜ್ಯಗಳಲ್ಲಿ ವ್ಯಾಸಂಗ ಮಾಡಿದ್ದರೂ ಸಹ ಅರ್ಹರಾಗಿರುತ್ತಾರೆ. ಆದರೆ ಹೊರ ದೇಶಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಈ ಯೋಜನೆಯಡಿ ಬಹುಮಾನ ಹಣ ಪಡೆಯಲು ಅರ್ಹರಲ್ಲ.

ರಾಜ್ಯ, ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವ ವಿದ್ಯಾಲಯಗಳಡಿ ಬರುವ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡಿದ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಸ್ವಾಯತ್ತ ವಿದ್ಯಾಸಂಸ್ಥೆಗಳಿಗೆ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಈ ಯೋಜನೆಗೆ ಅರ್ಹರಿರುತ್ತಾರೆ. ಸರ್ಕಾರದಿಂದ ಮಾನ್ಯತೆ ಪಡೆಯದಿರುವ ವಿದ್ಯಾ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಈ ಯೋಜನೆಯಡಿ ಅರ್ಹರಿರುವುದಿಲ್ಲ.

ವಿದ್ಯಾರ್ಥಿಯು ವ್ಯಾಸಂಗ ಮಾಡಿದ ಶೈಕ್ಷಣಿಕ ಸಂಸ್ಥೆ ಯಾವ ಜಿಲ್ಲೆಯಲ್ಲಿ ಇರುತ್ತದೆಯೋ ಅದೇ ಜಿಲ್ಲೆಯ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಇವರಿಗೆ ಅರ್ಜಿ ಸಲ್ಲಿಸಬೇಕು. ಹೊರ ರಾಜ್ಯಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ನೇಟಿವ್ ಜಿಲ್ಲೆಯಲ್ಲಿ ಮಾತ್ರ ಅರ್ಜಿ ಸಲ್ಲಿಸಬೇಕು.

ಆನ್ಲೈನ್ ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳು

ದ್ವಿತೀಯ ಪಿಯುಸಿಗೆ ಅಭ್ಯರ್ಥಿಯ ಭಾವಚಿತ್ರ, ದ್ವಿತೀಯ ಪಿಯುಸಿ ಅಂಕಪಟ್ಟಿ, ಎಸ್ಎಸ್ಎಲ್ಸಿ ಅಂಕಪಟ್ಟಿ, ಆಧಾರ್ ಪ್ರತಿ, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ ಮತ್ತು ಬ್ಯಾಂಕ್ ಪಾಸ್ ಪುಸ್ತಕ ಹಾಗೂ ಪದವಿ, ಸ್ನಾತಕೋತ್ತರ ಪದವಿ, ಕೃಷಿ, ಪಶುಸಂಗೋಪನೆ, ಎಂಜಿನಿಯರಿಂಗ್, ಮೆಡಿಕಲ್ ಅಭ್ಯರ್ಥಿಯ ಭಾವಚಿತ್ರ, ಎಲ್ಲಾ ಸೆಮ್ಗಳ ಅಂಕಪಟ್ಟಿ, ಎಸ್ಎಸ್ಎಲ್ಸಿ ಅಂಕಪಟ್ಟಿ, ಆಧಾರ್ ಪ್ರತಿ, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ ಮತ್ತು ಬ್ಯಾಂಕ್ ಪಾಸ್ ಪುಸ್ತಕ.

ವಿದ್ಯಾರ್ಥಿಗಳು www.tw.kar.nic.in ನಲ್ಲಿ ಆನ್ಲೈನ್ ಅರ್ಜಿ ಸಲ್ಲಿಸುವಾಗ ಯಾವುದಾದರೂ ತಾಂತ್ರಿಕ ತೊಂದರೆಯಾದಲ್ಲಿ ಇಲಾಖೆಯ ಟೋಲ್ಫ್ರೀ ದೂ.ಸಂ.080-22634300, 080-22353757 ಅಥವಾ ಸಹಾಯಕ ನಿರ್ದೇಶಕರು(ಗ್ರೇಡ್-2) ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ ಅವರ ದೂ.ಸಂ. 9480843156 ಮತ್ತು 08276-281115 ನ್ನು ಸಂಪರ್ಕಿಸಬಹುದು ಎಂದು ಸೋಮವಾರಪೇಟೆ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

BIG NEWS: Good news for students from `ST’ community from the state government: Applications invited for Rs. 35000 incentive
Share. Facebook Twitter LinkedIn WhatsApp Email

Related Posts

BREAKING: ಬೆಂಗಳೂರು: ಮಾಜಿ ಕಾರ್ಪೊರೇಟರ್ ವಿರುದ್ಧ ವಂಚನೆ ಆರೋಪ: ಡೆತ್ ನೋಟ್ ಬರೆದಿಟ್ಟು ಮಹಿಳೆ ಆತ್ಮಹತ್ಯೆಗೆ ಯತ್ನ!

10/04/2026 3:31 PM1 Min Read

BIG NEWS : ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಕೋರ್ಟ್​​ ಗ್ರೀನ್​​ ಸಿಗ್ನಲ್​​ : ಆದ್ರೆ ಈ ಷರತ್ತುಗಳು ಅನ್ವಯ

10/04/2026 3:27 PM1 Min Read

ತನ್ನ ಪ್ರಾಣ ಕೊಟ್ಟು ಇಬ್ಬರಿಗೆ ಮರುಜನ್ಮ ನೀಡಿದ ಮಹಾದಾನಿ: ಈ ಹುಲಿಕಲ್ ಘಾಟಿಯ ರಿಯಲ್ ಹೀರೋ ಕಥೆ ಓದಿ!

10/04/2026 3:22 PM2 Mins Read
Recent News

BREAKING: ಬೆಂಗಳೂರು: ಮಾಜಿ ಕಾರ್ಪೊರೇಟರ್ ವಿರುದ್ಧ ವಂಚನೆ ಆರೋಪ: ಡೆತ್ ನೋಟ್ ಬರೆದಿಟ್ಟು ಮಹಿಳೆ ಆತ್ಮಹತ್ಯೆಗೆ ಯತ್ನ!

10/04/2026 3:31 PM

BIG NEWS : ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಕೋರ್ಟ್​​ ಗ್ರೀನ್​​ ಸಿಗ್ನಲ್​​ : ಆದ್ರೆ ಈ ಷರತ್ತುಗಳು ಅನ್ವಯ

10/04/2026 3:27 PM

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖ್ಯಾತ ನಿರ್ದೇಶಕ ರಂಜಿತ್‌ಗೆ ಜಾಮೀನು ಮಂಜೂರು | Filmmaker Ranjith

10/04/2026 3:24 PM

ತನ್ನ ಪ್ರಾಣ ಕೊಟ್ಟು ಇಬ್ಬರಿಗೆ ಮರುಜನ್ಮ ನೀಡಿದ ಮಹಾದಾನಿ: ಈ ಹುಲಿಕಲ್ ಘಾಟಿಯ ರಿಯಲ್ ಹೀರೋ ಕಥೆ ಓದಿ!

10/04/2026 3:22 PM
State News
KARNATAKA

BREAKING: ಬೆಂಗಳೂರು: ಮಾಜಿ ಕಾರ್ಪೊರೇಟರ್ ವಿರುದ್ಧ ವಂಚನೆ ಆರೋಪ: ಡೆತ್ ನೋಟ್ ಬರೆದಿಟ್ಟು ಮಹಿಳೆ ಆತ್ಮಹತ್ಯೆಗೆ ಯತ್ನ!

By kannadanewsnow0910/04/2026 3:31 PM KARNATAKA 1 Min Read

ಬೆಂಗಳೂರು: ಮಾಜಿ ಕಾರ್ಪೊರೇಟರ್ ಒಬ್ಬರಿಂದ ತನಗೆ ವಂಚನೆಯಾಗಿದೆ ಎಂದು ಆರೋಪಿಸಿ ಮಹಿಳೆಯೊಬ್ಬರು ಡೆತ್ ನೋಟ್ ಬರೆದಿಟ್ಟು ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ…

BIG NEWS : ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಕೋರ್ಟ್​​ ಗ್ರೀನ್​​ ಸಿಗ್ನಲ್​​ : ಆದ್ರೆ ಈ ಷರತ್ತುಗಳು ಅನ್ವಯ

10/04/2026 3:27 PM

ತನ್ನ ಪ್ರಾಣ ಕೊಟ್ಟು ಇಬ್ಬರಿಗೆ ಮರುಜನ್ಮ ನೀಡಿದ ಮಹಾದಾನಿ: ಈ ಹುಲಿಕಲ್ ಘಾಟಿಯ ರಿಯಲ್ ಹೀರೋ ಕಥೆ ಓದಿ!

10/04/2026 3:22 PM

SHOCKING: ವಾದ ಮಂಡಿಸುತ್ತಿದ್ದಾಗಲೇ ಹೃದಯಾಘಾತದಿಂದ ವಕೀಲ ಸಾವು

10/04/2026 3:18 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.