ಬೆಂಗಳೂರು : 2024-25ನೇ ಸಾಲಿನಲ್ಲಿ ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ಒದುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು, 2024-25ನೇ ಸಾಲಿಗೆ -ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಶುಲ್ಕ ಮರುಪಾವತಿ” ಕಾರ್ಯಕ್ರಮದ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಮತ್ತೊಮ್ಮೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರದ ಆದೇಶದಲ್ಲಿ ಏನಿದೆ?
ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ಒದುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು, 2024-25ನೇ ಸಾಲಿಗೆ -ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಶುಲ್ಕ ಮರುಪಾವತಿ” ಕಾರ್ಯಕ್ರಮದ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, 20.12.2024ಕ್ಕೆ ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು ನಿಗದಿಪಡಿಸಲಾಗಿದ್ದು, ವಿದ್ಯಾರ್ಥಿಗಳು ಮತ್ತು ಶೈಕ್ಷಣಿಕ ಸಂಸ್ಥೆಗಳಿಂದ ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಿಸಲು ಮನವಿ ಮಾಡಿಕೊಂಡಿರುತ್ತಾರೆ. ಆದ ಕಾರಣ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು 15.02.2025 ರವರೆಗೆ ವಿಸ್ತರಿಸಿ ಆದೇಶಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ದೂರವಾಣಿ ಸಂಖ್ಯೆ: 8050770005, ಅಥವಾ bcwdhelpline@gmail.com ಗೆ ಭೇಟಿ ನೀಡಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.