ಬೆಂಗಳೂರು : ರಾಜ್ಯ ಸರ್ಕಾರವು ಕಾರ್ಮಿಕರ ಮಕ್ಕಳಿಗೆ ಸಿಹಿಸುದ್ದಿ ನೀಡಿದ್ದು, ಉಚಿತ ಊಟ ಮತ್ತು ವಸತಿ ಶಾಲೆ ಆರಂಭಿಸುವುದಾಗಿ ಘೋಷಿಸಿದೆ.
ಈ ಬಗ್ಗೆ ಸರ್ಕಾರ ಮಾಹಿತಿ ಹಂಚಿಕೊಂಡಿದ್ದು, ಕಟ್ಟಡ ಮತ್ತು ಇತರೆ ಕಾರ್ಮಿಕರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಕಾರಣದಿಂದ ಸರ್ಕಾರ ಕಾರ್ಮಿಕರ ಮಕ್ಕಳಿಗಾಗಿ ಉಚಿತ ಊಟ ಮತ್ತು ವಸತಿ ಶಾಲೆಗಳನ್ನು ತೆರೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಹಾಗೂ ರಾಜ್ಯದ 24,347 ಶಾಲೆಗಳಲ್ಲಿ ಗ್ರಂಥಾಲಯ ವ್ಯವಸ್ಥೆ ಕಲ್ಪಿಸುವ ಸಲುವಾಗಿ ₹20 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ.