Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Big Updates: ತಮಿಳುನಾಡು ಪಟಾಕಿ ಕಾರ್ಖಾನೆಯಲ್ಲಿ ಮಹಾ ಸ್ಫೋಟ; 23 ಕಾರ್ಮಿಕರ ಸಾವು, ಹಲವರಿಗೆ ಗಾಯ!

19/04/2026 8:44 PM

‘ರಾಷ್ಟ್ರದ ಹಕ್ಕನ್ನು ಕಸಿದುಕೊಳ್ಳಲು ಇವನ್ಯಾರು?’: ಟ್ರಂಪ್ ವಿರುದ್ಧ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್ ಕೆಂಡಾಮಂಡಲ!

19/04/2026 8:25 PM

ಭದ್ರತಾ ಕಾರಣ: ಪಾಕಿಸ್ತಾನಕ್ಕೆ ತೆರಳುವ ಅಮೆರಿಕ ನಿಯೋಗದಲ್ಲಿ ಜೆ.ಡಿ. ವ್ಯಾನ್ಸ್ ಭಾಗಿ ಇಲ್ಲ; ಸ್ಪಷ್ಟನೆ ನೀಡಿದ ಡೊನಾಲ್ಡ್ ಟ್ರಂಪ್

19/04/2026 8:21 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಕೃಷಿ ಚಟುವಟಿಕೆಗೆ ನಿರಂತರ ವಿದ್ಯುತ್ ಪೂರೈಕೆ.!
KARNATAKA

BIG NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಕೃಷಿ ಚಟುವಟಿಕೆಗೆ ನಿರಂತರ ವಿದ್ಯುತ್ ಪೂರೈಕೆ.!

By kannadanewsnow5706/02/2025 5:11 PM

ಶಿವಮೊಗ್ಗ : ರೈತರ ಕೃಷಿ ಚಟುವಟಿಕೆಗಳಿಗೆ ವಿದ್ಯುತ್ ವ್ಯತ್ಯಯವಾಗದಂತೆ ಈಗಾಗಲೇ ಸರ್ಕಾರ ನಿಗಧಿಡಿಸಿದ ಸಮಯನುಸಾರ ನಿರಂತರವಾಗಿ ವಿದ್ಯುತ್ ಸರಬರಾಜು ಮಾಡುವಂತೆ ಸಚಿವ ಎಸ್. ಮಧು ಬಂಗಾರಪ್ಪ ಅವರು ಮೆಸ್ಕಾಂ ಅಭಿಯಂತರರಿಗೆ ಸೂಚಿಸಿದರು.

ಅವರು ಇಂದು ಶಿಕಾರಿಪುರದ ತಾಲೂಕು ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ತಾಲೂಕು ಅಭಿವೃದ್ಧಿ ಚಟುವಟಿಕೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಶಿಕಾರಿಪುರ, ಶಿರಾಳಕೊಪ್ಪ ಮತ್ತು ಸೊರಬ ಭಾಗಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ನಿರಂತರ ವ್ಯತ್ಯಾಯವಾಗುತ್ತಿರುವ ಕಾರಣ ಕೃಷಿ ಚಟುವಟಿಕೆಗಳಿಗೆ ತೀವ್ರ ಅಡಚಣೆ ಆಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಕೇಳಿ ಬರುತ್ತಿದ್ದು ಅದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಇದರ ವ್ಯವಸ್ಥಿತ ನಿರ್ವಹಣೆಯ ಜವಾಬ್ದಾರಿ ಹೊತ್ತ ಅಧಿಕಾರಿಗಳು ವಿದ್ಯುತ್ ನ್ನು ಒದಗಿಸುವಂತೆ ಹಾಗೂ ಯಾವುದೇ ದೂರಗಳು ಬಾರದಂತೆ ನೋಡಿಕೊಳ್ಳಬೇಕು. ಮಾತ್ರವಲ್ಲ ಈ ಸಂಬಂಧ ಬರುವ ಸಾರ್ವಜನಿಕರ ಅಹವಾಲುಗಳಿಗೆ ಸಕಾಲಿಕವಾಗಿ ಸ್ಪಂದಿಸುವಂತೆ ಸೂಚಿಸಿದರು.

ತಾಲೂಕಿನ ಆಯ್ದ ಭಾಗಗಳಲ್ಲಿ ಟ್ರಾನ್ಸ್ಫರ್ಮರ್ ಗಳು ಹಾಳಾಗಿದ್ದು ದುರಸ್ತಿ ಮಾಡುವ ಬಗ್ಗೆ ಹಾಗೂ ಅಗತ್ಯವಿರುವೆಡೆಗಳಲ್ಲಿ ಹೊಸ ಟ್ರಾನ್ಸ್ಫರ್ಮರ್ ಗಳನ್ನು ಅಳವಡಿಸಬೇಕು. ಅದಕ್ಕಾಗಿ ತಾವು ತಮ್ಮ ಮೇಲಾಧಿಕಾರಿಗಳಿಗೆ ಸಲ್ಲಿಸಿದ ಪ್ರಸ್ತಾವನೆಯ ಪ್ರತಿಯನ್ನು ಕೊಟ್ಟಲ್ಲಿ ಕ್ರಮ ಕೈಗೊಳ್ಳಲಾಗುವುದು. ವಿದ್ಯುತ್ ಸಮಸ್ಯೆಯ ಇತ್ಯರ್ಥಕ್ಕೆ ಆದ್ಯತೆಯ ಮೇಲೆ ಕ್ರಮ ವಹಿಸುವಂತೆಯೂ ಸೂಚಿಸಿದ ಅವರು ಸಮಸ್ಯೆಯ ಶಾಶ್ವತ ಪರಿಹಾರಕ್ಕಾಗಿ ಮೆಸ್ಕಾಂನ ವ್ಯವಸ್ಥಾಪಕರೊಂದಿಗೆ ಚರ್ಚಿಸಲಾಗುವುದು ಎಂದರು.

ತಾಲೂಕಿನಲ್ಲಿ ಏತ ನೀರಾವರಿ ಯೋಜನೆಗಳಲ್ಲಿ ಚಾನಲ್ ಗಳ ಒಣ ಭೂಮಿ ಹಾಗೂ ಕೊನೆಯ ಗ್ರಾಮಗಳಿಗೆ ಸಕಾಲದಲ್ಲಿ ನೀರು ಪೂರೈಸಿದ ಕೆರೆ ಕಟ್ಟೆ ಕಾಲುವೆಗಳನ್ನು ಭರ್ತಿ ಮಾಡಿದಲ್ಲಿ ಜನ ಜಾನುವಾರುಗಳಿಗೆ ಬೇಸಿಗೆಯಲ್ಲಿ ಕುಡಿಯುವ ನೀರಿನ ಪೂರೈಕೆಗೆ ಅನುಕೂಲವಾಗಲಿದೆ. ಇದರಿಂದಾಗಿ ಜನರ ನೀರಿನ ದಾಹ ಇಂಗಿಸಿದಂತಾಗಲಿದೆ ಎಂದ ಅವರು ಮಳೆಗಾಲದಲ್ಲಿ ಮಳೆ ನೀರನ್ನು ವ್ಯರ್ಥವಾಗಿ ಸಮುದ್ರಕ್ಕೆ ಬಿಡದಂತೆ ಕೆರೆಗಳನ್ನು ತುಂಬಿಸುವ ಮೂಲಕ ಸದ್ಭಾಳಕೆ ಮಾಡಿಕೊಳ್ಳುವಂತೆ ಸೂಚಿಸಿದರು. ಚಾನಲ್ ಗಳ ದುರಸ್ತಿ, ಹೂಳು ತೆಗೆಯುವ ಕಾರ್ಯಗಳಿಗೆ ಅನುದಾನದ ಅಗತ್ಯವಿದ್ದಲ್ಲಿ ಕೂಡಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಅವರು ಸೂಚಿಸಿದರು.

ತಾಲೂಕಿನಲ್ಲಿ ಜಾಲಜೀವನ್ ಮಿಷನ್ ಮತ್ತು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿಯಈಗಾಗಲೇ ಕೈಗೊಂಡಿರುವ ಯೋಜನೆಗಳ ಅನುಸ್ತಾನದಲ್ಲಿ ಅತೀವ ವಿಳಂಬವಾಗುತ್ತಿರುವುದು ಬೇಸರ ತಂದಿದೆ ಎಂದ ಅವರು ಸ್ಥಳೀಯವಾಗಿರುವ ಸಮಸ್ಯೆಗಳಿಗೆ ಕೂಡಲೇ ಪರಿಹಾರ ಕಂಡುಕೊಂಡು ಕಾಮಗಾರಿಗಳನ್ನು ಆರಂಭಿಸಿ, ಕುಡಿಯುವ ನೀರಿನ ಸಮಸ್ಯೆಯ ಶಾಶ್ವತ ಪರಿಹಾರಕ್ಕೆ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳ ಖಾತೆಗೆ ನೇರವಾಗಿ ಜಮೆಯಾಗುವ ಹಣವನ್ನು ಬ್ಯಾಂಗಳ ವ್ಯವಸ್ಥಾಪಕರು ಸಾಲದ ಖಾತೆಗೆ ಜಮಾ ಮಾಡಿಕೊಳ್ಳದಂತೆ ಸೂಚಿಸಿದರು. ಸೌಲಭ್ಯಕ್ಕಾಗಿ ಬಂದ ಅರ್ಜಿಗಳನ್ನು ತ್ವರಿತವಾಗಿ ವಿಲೇ ಮಾಡುವಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಸೂಚಿಸಿದರು.

ಗ್ರಾಮೀಣ ಪ್ರದೇಶಗಳಲ್ಲಿನ ರೈತರು ತಮ್ಮ ಗ್ರಹ ಚಟುವಟಿಕೆಗಳಿಗಾಗಿ ಕೆರೆಗಳಿಂದ ಮಣ್ಣನ್ನು ಬಳಸಿಕೊಳ್ಳುತ್ತಿದ್ದಲ್ಲಿ ಕಂದಾಯ ಅಧಿಕಾರಿಗಳು ಮಾನವೀಯ ನೆಲೆಯಲ್ಲಿ ಸಹಕರಿಸುವಂತೆ ಹಾಗೂ ಯಾವುದೇರಾಯಧನ ಭರಿಸದೆ ಮಣ್ಣನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿಕೊಳ್ಳುತ್ತಿದ್ದಲ್ಲಿ ನಿಯಮಾನುಸಾರ ಕಠಿಣ ಕಾನೂನು ಕ್ರಮಗಳನ್ನು ಅನುಸರಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚಿಸಿದರು.

ಪ್ರಸಕ್ತ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷಾ ಪಲಿತಾಂಶ ಉತ್ತಮವಾಗಿರುವಂತೆ ನೋಡಿಕೊಳ್ಳಲು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ವಿಶೇಷ ಗಮನಹರಿಸುವಂತೆ ಸೂಚಿಸಲಾಗಿದೆ. ಅಲ್ಲದೆ ಪರೀಕ್ಷಾ ಪೂರ್ವ ತರಬೇತಿ ಹಾಗೂ ವಿಶೇಷ ತರಗತಿಗಳನ್ನು ನಡೆಸಲಾಗುತ್ತಿದೆ ಎಂದರು.

ಪರೀಕ್ಷೆಗಳನ್ನು ನಿಯಮಾನಸಾರ ಕಟ್ಟುನಿಟ್ಟಾಗಿ ನಡೆಸಲು ಸೂಚಿಸಲಾಗಿದೆ ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೆ ನಿರ್ಭೀತಿಯಿಂದ ಪರೀಕ್ಷೆಗೆ ಹಾಜರಾಗುವಂತೆ ಸೂಚಿಸಿದ ಅವರು ಅನುತ್ತೀರ್ಣ ವಿದ್ಯಾರ್ಥಿಗಳಿಗಾಗಿ ಪೂರಕ ಪರೀಕ್ಷೆಗಳನ್ನು ಕೂಡ ಏರ್ಪಡಿಸಲಾಗಿದೆ ಎಂದವರು ನುಡಿದರು.

ಸಭೆಯಲ್ಲಿ ಸಾಗರ ಉಪ ವಿಭಾಗಾಧಿಕಾರಿ ಯತೀಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ನಟರಾಜ್, ತಹಶೀಲ್ದಾರ್ ಮಲ್ಲೇಶಪ್ಪ ಪೂಜಾರ್ ಹಾಗೂ ಕಾರ್ಯನಿರ್ವಾಹಕ ಅಧಿಕಾರಿ ನಾಗರಾಜ್ ಸೇರಿದಂತೆ ತಾಲೂಕಿನ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಜನಪ್ರತಿನಿಧಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದ ನಂತರ ಸಚಿವರು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು.

BIG NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಕೃಷಿ ಚಟುವಟಿಕೆಗೆ ನಿರಂತರ ವಿದ್ಯುತ್ ಪೂರೈಕೆ.! BIG NEWS: Good news for the farmers of the state: Uninterrupted power supply for agricultural activities.
Share. Facebook Twitter LinkedIn WhatsApp Email

Related Posts

ಸಾಗರದಲ್ಲಿ ‘ಕಾಗೋಡು ಚಳುವಳಿ’ಗೆ 75ರ ಸಂಭ್ರಮ: ‘ಬದುಕಿಗಾಗಿ ಭೂಮಿ’ ಹೋರಾಟ ಎಂದಿಗೂ ಪ್ರಸ್ತುತವೆಂದ ಬಿ.ಆರ್.ಜಯಂತ್

19/04/2026 8:16 PM2 Mins Read

ಸಾಗರದ ಮಾರಿಕಾಂಬಾ ರುದ್ರಭೂಮಿಯಲ್ಲಿ ವಿವಿಧ ಸಂಘಟನೆಗಳಿಂದ ಶ್ರಮದಾನ: ಸ್ವಚ್ಛತೆಗೆ ಸಾರ್ವಜನಿಕರಿಗೆ ಮನವಿ

19/04/2026 8:07 PM2 Mins Read

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

19/04/2026 8:05 PM2 Mins Read
Recent News

Big Updates: ತಮಿಳುನಾಡು ಪಟಾಕಿ ಕಾರ್ಖಾನೆಯಲ್ಲಿ ಮಹಾ ಸ್ಫೋಟ; 23 ಕಾರ್ಮಿಕರ ಸಾವು, ಹಲವರಿಗೆ ಗಾಯ!

19/04/2026 8:44 PM

‘ರಾಷ್ಟ್ರದ ಹಕ್ಕನ್ನು ಕಸಿದುಕೊಳ್ಳಲು ಇವನ್ಯಾರು?’: ಟ್ರಂಪ್ ವಿರುದ್ಧ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್ ಕೆಂಡಾಮಂಡಲ!

19/04/2026 8:25 PM

ಭದ್ರತಾ ಕಾರಣ: ಪಾಕಿಸ್ತಾನಕ್ಕೆ ತೆರಳುವ ಅಮೆರಿಕ ನಿಯೋಗದಲ್ಲಿ ಜೆ.ಡಿ. ವ್ಯಾನ್ಸ್ ಭಾಗಿ ಇಲ್ಲ; ಸ್ಪಷ್ಟನೆ ನೀಡಿದ ಡೊನಾಲ್ಡ್ ಟ್ರಂಪ್

19/04/2026 8:21 PM

ಸಾಗರದಲ್ಲಿ ‘ಕಾಗೋಡು ಚಳುವಳಿ’ಗೆ 75ರ ಸಂಭ್ರಮ: ‘ಬದುಕಿಗಾಗಿ ಭೂಮಿ’ ಹೋರಾಟ ಎಂದಿಗೂ ಪ್ರಸ್ತುತವೆಂದ ಬಿ.ಆರ್.ಜಯಂತ್

19/04/2026 8:16 PM
State News
KARNATAKA

ಸಾಗರದಲ್ಲಿ ‘ಕಾಗೋಡು ಚಳುವಳಿ’ಗೆ 75ರ ಸಂಭ್ರಮ: ‘ಬದುಕಿಗಾಗಿ ಭೂಮಿ’ ಹೋರಾಟ ಎಂದಿಗೂ ಪ್ರಸ್ತುತವೆಂದ ಬಿ.ಆರ್.ಜಯಂತ್

By kannadanewsnow0919/04/2026 8:16 PM KARNATAKA 2 Mins Read

ಶಿವಮೊಗ್ಗ: “ಮಾನವನ ಬದುಕನ್ನು ಸುಧಾರಿಸುವಲ್ಲಿ ಮತ್ತು ಸಾಮಾಜಿಕ ನ್ಯಾಯ ದೊರಕಿಸಿಕೊಡುವಲ್ಲಿ ಹೋರಾಟಗಳು ಪ್ರಮುಖ ಪಾತ್ರ ವಹಿಸುತ್ತವೆ. ಸ್ವಾತಂತ್ರ್ಯಾನಂತರದ ಭಾರತದಲ್ಲಿ ಭೂಹೀನ…

ಸಾಗರದ ಮಾರಿಕಾಂಬಾ ರುದ್ರಭೂಮಿಯಲ್ಲಿ ವಿವಿಧ ಸಂಘಟನೆಗಳಿಂದ ಶ್ರಮದಾನ: ಸ್ವಚ್ಛತೆಗೆ ಸಾರ್ವಜನಿಕರಿಗೆ ಮನವಿ

19/04/2026 8:07 PM

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

19/04/2026 8:05 PM

BREAKING: ಕಾವೇರಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 6 ಮಂದಿ ದುರ್ಮರಣ

19/04/2026 5:55 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.