ಬೆಂಗಳೂರು : ರಾಜ್ಯದ ಜನತೆಗೆ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು, ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಈಗಿರುವ ಮಾನದಂಡವನ್ನು ಸರಳೀಕರಣ ಮಾಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.
ವಿಧಾನಪರಿಷತ್ ನಲ್ಲಿ ಬಿಜೆಪಿಯ ವೈ.ಎಂ. ಸತೀಶ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಕೃಷ್ಣ ಬೈರೇಗೌಡ, ವಂಶವೃಕ್ಷ ಪಡೆಯಲು ಇಡೀ ರಾಜ್ಯದಲ್ಲಿ ಒಂದೇ ಮಾದರಿಯ ಮಾನದಂಡವಿದೆ. ಪಡಿತರ ಚೀಟಿ ಅಥವಾ ಆಧಾರ್ ಕಾರ್ಡ್ ಅಥವಾ ಮತದಾರರ ಗುರುತಿನ ಚೀಟಿ ಹಾಗೂ ಅರ್ಜಿ ನಮೂನೆಯಲ್ಲಿ ಸ್ವಯಂ ಘೋಷಿತ ಪತ್ರ ಸಲ್ಲಿಸಬೇಕು.
ಗ್ರಾಮ ಲೆಕ್ಕಿಗರು ಈ ದಾಖಲೆಗಳೊಂದಿಗೆ ಕ್ಷೇತ್ರ ಪರಿಶೀಲಿಸಿ ನೀಡಿದ ವರದಿ ಆಧಾರದ ಮೇಲೆ ಪ್ರಮಾಣಪತ್ರ ವಿತರಿಸಲಾಗುವುದು. ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಈಗಿರುವ ಮಾನದಂಡವನ್ನು ಸರಳೀಕರಣ ಮಾಡಲಾಗುವುದು, ಈಗಾಗಲೇ ಈ ಸಂಬಂಧ ಪ್ರಕ್ರಿಯೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.