Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಪೇಪರ್ ಲೀಕ್ ಸಾಕು, ಇನ್ನು ಸಹಿಸಲು ಸಾಧ್ಯವಿಲ್ಲ’: ದೇಶಾದ್ಯಂತ ಶಾಂತಿಯುತ ಪ್ರತಿಭಟನೆಗೆ Gen-Z ಯುವಕರಿಗೆ ಕೇಜ್ರಿವಾಲ್ ಕರೆ!

ಎಐಎಡಿಎಂಕೆ ಶಾಸಕರಿಗೆ ಬಿಗ್ ಶಾಕ್: TVK ಪರ ಮತ ಹಾಕಿದ 25 ಶಾಸಕರು ಪಕ್ಷದ ಹುದ್ದೆಗಳಿಂದ ವಜಾ!

ಅದಾನಿ ಗ್ರೂಪ್ ಜೊತೆ ಕೈಜೋಡಿಸಿದ ಉಬರ್: ಭಾರತದಲ್ಲಿ ತಲೆಯೆತ್ತಲಿದೆ ಮೊದಲ ಬೃಹತ್ ಡೇಟಾ ಸೆಂಟರ್!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ಬಡಜನತೆಗೆ ಗುಡ್ ನ್ಯೂಸ್ : `ಸೂಪರ್ ಸ್ಪೆಷಾಲಿಟಿ’ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ನೆರವು.!
KARNATAKA

BIG NEWS : ರಾಜ್ಯದ ಬಡಜನತೆಗೆ ಗುಡ್ ನ್ಯೂಸ್ : `ಸೂಪರ್ ಸ್ಪೆಷಾಲಿಟಿ’ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ನೆರವು.!

By kannadanewsnow57

ಕರ್ನಾಟಕ ರಾಜ್ಯ ಮುಖ್ಯಮಂತ್ರಿಯವರ ವೈದ್ಯಕೀಯ ಪರಿಹಾರ ನಿಧಿ ಸೊಸೈಟಿಯ (KCMMR) ಕಾರ್ಪಸ್‌ ಹಣ 110 ಕೋಟಿಗಳನ್ನು ನಿಶ್ಚಿತ ಠೇವಣಿಯಲ್ಲಿಡುವ ಮುಖಾಂತರ ಬರುವ ಬಡ್ಡಿ ಹಣದಲ್ಲಿ ರಾಜ್ಯದಲ್ಲಿ ಗಂಭೀರ ಹಾಗೂ ಅತೀ ವಿರಳ ರೋಗಗಳಿಂದ ನಿರಂತರವಾಗಿ ಬಳಲುತ್ತಿರುವ ಬಡ ರೋಗಿಗಳ ಚಿಕಿತ್ಸೆಯನ್ನು ಸರ್ಕಾರದ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಒದಗಿಸಿ, ಅದರ ವೆಚ್ಚವನ್ನು ಭರಿಸಿ, ರೋಗಿಗಳಿಗೆ ಸರ್ಕಾರದ ವತಿಯಿಂದ ನೆರವು ನೀಡಲಾಗುತ್ತಿದೆ.

ಈ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆ, ಶ್ರೀ ಜಯದೇವ ಹೃದ್ರೋಗ ಸಂಸ್ಥೆ, ಸಂಜಯ ಗಾಂಧಿ ಟ್ರಾಮಾ ಮತ್ತು ಅಸ್ಥಿ ಚಿಕಿತ್ಸಾ ಸಂಸ್ಥೆ, ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆ, ಎಸ್.ಡಿ.ಎಸ್.ಟಿ.ಬಿ. ಆಸ್ಪತ್ರೆ, ನೆಫ್ರೋ ಯೂರಾಲಜಿ ಸಂಸ್ಥೆ, ಪಿ.ಎಂ.ಎಸ್.ಎಸ್.ವೈ. ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ, ಟ್ರಾಮಾ ಕೇರ್‌ ಸೆಂಟರ್‌, ಮಿಂಟೋ ಪ್ರಾದೇಶಿಕ ಕಣ್ಣಿನ ಆಸ್ಪತ್ರೆ, ಗ್ಯಾಸ್ಟ್ರೋ ಎಂಟ್ರಾಲಜಿ ಸೈನ್‌ಸ್‌ ಅಂಡ್‌ ಆರ್ಗನ್‌ ಟ್ರಾನ್ಸ್‌ಪ್ಲಾಂಟ್‌ ಸಂಸ್ಥೆಗಳು ಸದರಿ ಅನುದಾನವನ್ನು ಬಳಕೆ ಮಾಡಿಕೊಂಡಿರುತ್ತವೆ. ಅಲ್ಲದೆ, ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ವಾಣಿ ವಿಲಾಸ ಆಸ್ಪತ್ರೆ ಬೆಂಗಳೂರು ಮತ್ತು ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಗಳು ಸೂಪರ್‌ ಸ್ಪೆಷಾಲಿಟಿ ಅಡಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯಮಂತ್ರಿಯವರ ವೈದ್ಯಕೀಯ ಪರಿಹಾರ ನಿಧಿ ಸೊಸೈಟಿಯ (KCMMR) ಅನುದಾನಕ್ಕೆ ಬೇಡಿಕೆ ಸಲ್ಲಿಸಿರುತ್ತವೆ.

ಮಾನವೀಯತೆ ದೃಷ್ಟಿಯಿಂದ ಬಡತನ ರೇಖೆಗಿಂತ (ಬಿಪಿಎಲ್‌) ಕೆಳಗಿರುವ ಫಲಾನುಭವಿಗಳನ್ನು ಕರ್ನಾಟಕ ರಾಜ್ಯದಲ್ಲಿ ಅಳವಡಿಸಿಕೊಂಡಿರುವ ಮಾನದಂಡಗಳನ್ನು ಹೊರರಾಜ್ಯಗಳ ಬಡ ರೋಗಿಗಳಿಗೂ ಅನ್ವಯಿಸಿ ಕೊಂಡು ನಮ್ಮ ರಾಜ್ಯದ ರೋಗಿಗಳಿಗೆ ಮೊದಲ ಆದ್ಯತೆ ಆದರೂ ಹೊರ ರಾಜ್ಯದ ಬಡ ರೋಗಿಗಳನ್ನು ಸಹ ಒಳಪಡಿಸಲಾಗಿರುತ್ತದೆ. ಈ ಪ್ರಕರಣಗಳಲ್ಲಿ ಆಧಾರ್‌ ಮಾಹಿತಿಯನ್ನು ಪರಿಗಣಿಸಿ, ಅಳವಡಿಸಿಕೊಳ್ಳಲಾಗಿರುತ್ತದೆ.

2023-24ನೇ ಸಾಲಿನಲ್ಲಿ 30,296 ಫಲಾನುಭವಿಗಳಿಗೆ ವೆಚ್ಚ ಭರಿಸಲಾಗಿರುತ್ತದೆ.

2023-24ನೇ ಸಾಲಿನಲ್ಲಿ ಕಾರ್ಪಸ್‌ ನಿಶ್ಚಿತ ಮೊತ್ತದ ಬಡ್ಡಿಯಿಂದ 2024-25ನೇ ಸಾಲಿನಲ್ಲಿ 27,442 ಫಲಾನುಭವಿಗಳಿಗೆ ವೆಚ್ಚ ಭರಿಸಲಾಗಿರುತ್ತದೆ.

ಒಟ್ಟಾರೆಯಾಗಿ 2023-24 ಮತ್ತು 2024-25ನೇ ಸಾಲುಗಳಲ್ಲಿ ಕರ್ನಾಟಕ ರಾಜ್ಯ ಮುಖ್ಯಮಂತ್ರಿಯವರ ವೈದ್ಯಕೀಯ ಪರಿಹಾರ ನಿಧಿ ಸೊಸೈಟಿಯ (KCMMR) ಅನುದಾನದಿಂದ 57,738 ಬಡ ರೋಗಿಗಳು ಪ್ರಯೋಜನ ಪಡೆದಿರುತ್ತಾರೆ. 2025-26ನೇ ಸಾಲಿನಲ್ಲಿ ಕಾರ್ಪಸ್‌ ನಿಶ್ಚಿತ ಮೊತ್ತದ ಬಡ್ಡಿಯಿಂದ ಬಂದಿರುವ ರೂ.9.30 ಕೋಟಿಗಳನ್ನು ಹಂಚಿಕೆ ಮಾಡಲು ಕ್ರಮ ವಹಿಸಲಾಗಿರುತ್ತದೆ.

BIG NEWS: Good news for the poor of the state: Assistance from the Chief Minister's Relief Fund for treatment in `super specialty' hospitals!
Share. Facebook Twitter LinkedIn WhatsApp Email

Related Posts

ಸುಶಿಕ್ಷಿತ ಯುವಶಕ್ತಿಯಿಂದ ಮಾತ್ರ ದೇಶದ ಪ್ರಗತಿ ಸಾಧ್ಯ: ಸಚಿವ ಕೆ.ಜೆ.ಜಾರ್ಜ್

2 Mins Read

BREAKING: ಬೆಂಗಳೂರಿನಲ್ಲಿ ಬೃಹತ್ GST ವಂಚನೆ ಜಾಲ ಪತ್ತೆ: ₹410 ಕೋಟಿ ಐಟಿಸಿ ಹಗರಣದ ಕಿಂಗ್‌ಪಿನ್ ಬಂಧನ

2 Mins Read

ಬೆಂಗಳೂರಲ್ಲಿ 23 ಲಕ್ಷಕ್ಕೂ ಹೆಚ್ಚು ಖಾತಾ ಬಿಡುಗಡೆ ದೇಶದಲ್ಲೇ ದಾಖಲೆ: ಡಿಸಿಎಂ ಡಿ ಕೆ ಶಿವಕುಮಾರ್

6 Mins Read
Recent News

‘ಪೇಪರ್ ಲೀಕ್ ಸಾಕು, ಇನ್ನು ಸಹಿಸಲು ಸಾಧ್ಯವಿಲ್ಲ’: ದೇಶಾದ್ಯಂತ ಶಾಂತಿಯುತ ಪ್ರತಿಭಟನೆಗೆ Gen-Z ಯುವಕರಿಗೆ ಕೇಜ್ರಿವಾಲ್ ಕರೆ!

ಎಐಎಡಿಎಂಕೆ ಶಾಸಕರಿಗೆ ಬಿಗ್ ಶಾಕ್: TVK ಪರ ಮತ ಹಾಕಿದ 25 ಶಾಸಕರು ಪಕ್ಷದ ಹುದ್ದೆಗಳಿಂದ ವಜಾ!

ಅದಾನಿ ಗ್ರೂಪ್ ಜೊತೆ ಕೈಜೋಡಿಸಿದ ಉಬರ್: ಭಾರತದಲ್ಲಿ ತಲೆಯೆತ್ತಲಿದೆ ಮೊದಲ ಬೃಹತ್ ಡೇಟಾ ಸೆಂಟರ್!

‘ಇರಾನ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ಸಾಧಿಸಿದೆ’: ಹಾರ್ಮುಜ್ ಜಲಸಂಧಿ ಬಿಕ್ಕಟ್ಟಿನ ನಡುವೆ ಟ್ರಂಪ್ ಮತ್ತು ರಕ್ಷಣಾ ಕಾರ್ಯದರ್ಶಿ ಅಧಿಕೃತ ಘೋಷಣೆ!

State News
KARNATAKA

ಸುಶಿಕ್ಷಿತ ಯುವಶಕ್ತಿಯಿಂದ ಮಾತ್ರ ದೇಶದ ಪ್ರಗತಿ ಸಾಧ್ಯ: ಸಚಿವ ಕೆ.ಜೆ.ಜಾರ್ಜ್

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ…

BREAKING: ಬೆಂಗಳೂರಿನಲ್ಲಿ ಬೃಹತ್ GST ವಂಚನೆ ಜಾಲ ಪತ್ತೆ: ₹410 ಕೋಟಿ ಐಟಿಸಿ ಹಗರಣದ ಕಿಂಗ್‌ಪಿನ್ ಬಂಧನ

ಬೆಂಗಳೂರಲ್ಲಿ 23 ಲಕ್ಷಕ್ಕೂ ಹೆಚ್ಚು ಖಾತಾ ಬಿಡುಗಡೆ ದೇಶದಲ್ಲೇ ದಾಖಲೆ: ಡಿಸಿಎಂ ಡಿ ಕೆ ಶಿವಕುಮಾರ್

BIG BREAKING: ರಾಜ್ಯ ಸರ್ಕಾರದಿಂದ ‘ಶಾಲಾ-ಕಾಲೇಜು’ಗಳಲ್ಲಿ ‘ಹಿಜಾಬ್ ನಿಷೇಧ’ ಆದೇಶ ವಾಪಾಸ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.