ಬೆಂಗಳೂರು : 2025-26ನೇ ಸಾಲಿಗೆ ಆಯಾ ಜಿಲ್ಲಾ ವ್ಯಾಪ್ತಿಯಲ್ಲಿನ ಪ್ರತಿಷ್ಠಿತ ಶಾಲೆಗಳಿಗೆ ಪರಿಶಿಷ್ಟ ವಂಗಡದ ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ಕಲ್ಪಿಸುವ ಕುರಿತು ಬಗ್ಗೆ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖಿತ ಸರ್ಕಾರದ ಆದೇಶದನ್ವಯ ಪರಿಶಿಷ್ಟ ಪಂಗಡದ ಪ್ರತಿಭಾವಂತ ವಿದ್ಯಾರ್ಥಿಗಳನ್ನು 2025-26ನೇ ಸಾಲಿಗೆ ಪ್ರತಿಷ್ಠಿತ ಶಾಲೆ ಯೋಜನೆಯಡಿ ಆಯ್ಕೆ ಮಾಡಲು ಅರ್ಹತಾ ಪರೀಕ್ಷೆ ಮೂಲಕ ನಿಯಮಾನುಸಾರ ಆಯ್ಕೆ ಪ್ರಕ್ರಿಯೆಯನ್ನು ಈ ಕೆಳಗಿನಂತೆ ಕೈಗೊಳ್ಳಲು ಈ ಮೂಲಕ ಕೋರಿದೆ.