ಬೆಂಗಳೂರು : ರಾಜ್ಯ ಸರ್ಕಾರವು ಹಿಂದುಳಿದ ವರ್ಗದವರಿಗೆ ಸಿಹಿಸುದ್ದಿ ನೀಡಿದ್ದು, ಹಿಂದುಳಿದ ವರ್ಗಗಳ ಜನರ ಸ್ವಯಂ ಉದ್ಯೋಗ ಕೈಗೊಳ್ಳಲು ಆರ್ಥಿಕ ಚಟುವಟಿಕೆಗಳಿಗನುಸಾರ ರೂ.2.00 ಲಕ್ಷಗಳವರೆಗೆ ಸಾಲ ಸೌಲಭ್ಯವನ್ನು ವಾರ್ಷಿಕ ಶೇ.4ರ ಬಡ್ಡಿ ದರದಲ್ಲಿ ಒದಗಿಸುವ ಯೋಜನೆಯ ಮಾರ್ಗಸೂಚಿಗಳನ್ನ ಸರ್ಕಾರ ಹೊರಡಿಸಿದೆ.
ನಿಗಮವು ಅನುಷ್ಠಾನಗೊಳಿಸುತ್ತಿರುವ ಯೋಜನೆಗಳಲ್ಲಿ ಫಲಾನುಭವಿಗಳ ಆಯ್ಕೆ ಮಾಡುವ ವಿಧಾನ ಹಾಗೂ ಆಯ್ಕೆ ಮಾಡುವ ಮಾನದಂಡಗಳು ಕೆಳಕಂಡಂತ್ತಿದೆ.
1. ಡಿ.ದೇವರಾಜ ಅರಸು ವೈಯುಕ್ತಿಕ ಸ್ವಯಂ ಉದ್ಯೋಗ ವೈಯಕ್ತಿಕ ನೇರ ಸಾಲ ಯೋಜನೆ
ಹಿಂದುಳಿದ ವರ್ಗಗಳ ಜನರ ಸ್ವಯಂ ಉದ್ಯೋಗ ಕೈಗೊಳ್ಳಲು ಆರ್ಥಿಕ ಚಟುವಟಿಕೆಗಳಿಗನುಸಾರ ರೂ.2.00 ಲಕ್ಷಗಳವರೆಗೆ ಸಾಲ ಸೌಲಭ್ಯವನ್ನು ವಾರ್ಷಿಕ ಶೇ.4ರ ಬಡ್ಡಿ ದರದಲ್ಲಿ ಒದಗಿಸುವ ಯೋಜನೆಯ ಮಾರ್ಗಸೂಚಿಗಳು.
ಯೋಜನೆ ಉದ್ದೇಶ:- ಹಿಂದುಳಿದ ವರ್ಗಗಳಿಗೆ ಸೇರಿದ ಜನರು ಕೃಷಿ ಅವಲಂಬಿತ ಚಟುವಟಿಕೆ, ವ್ಯಾಪಾರ, ಕೈಗಾರಿಕೆ, ಸಾರಿಗೆ ಮತ್ತು ಸೇವಾ ವಲಯದಲ್ಲಿ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಸಾಲದ ನೆರವು ನೀಡಲಾಗುವುದು.
ಅರ್ಹತೆಗಳು:
1. ಈ ಯೋಜನೆಯಲ್ಲಿ ಆರ್ಥಿಕ ಸಹಾಯ ಪಡೆಯಲು ಅಭ್ಯರ್ಥಿಯು ಸರ್ಕಾರದ ಆದೇಶ ಸಂಖ್ಯೆ:
ಸಕಇ 225 ಬಿಸಿಎ 2000, ದಿನಾಂಕ:30.03.2002ರಲ್ಲಿ ಗುರುತಿಸಿದ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.98,000/-ಗಳು ಪಟ್ಟಣ ಪ್ರದೇಶದವರಿಗೆ ರೂ.1,20,000/-ಗಳನ್ನು ಮೀರಿರಬಾರದು.
2. ಕರ್ನಾಟಕ ರಾಜ್ಯ ಖಾಯಂ ನಿವಾಸಿಯಾಗಿರಬೇಕು.
3. ಅರ್ಜಿದಾರರ ವಯಸ್ಸು ಕನಿಷ್ಠ 21 ವರ್ಷಗಳು ಹಾಗೂ ಗರಿಷ್ಠ 55 ವರ್ಷಗಳ ಮಿತಿಯೊಳಗಿರಬೇಕು.
4. ಈ ಹಿಂದೆ ಈಗಾಗಲೇ ನಿಗಮದ ಯೋಜನೆಗಳಲ್ಲಿ ಸೌಲಭ್ಯ ಪಡೆದಿರಬಾರದು.
5. ಮಹಿಳೆಯರಿಗೆ ಈ ಯೋಜನಯಲ್ಲಿ ಶೇ.33ರಷ್ಟು ಮೀಸಲು ನಿಗಧಿಪಡಿಸಿದೆ.
6. ಅಂಗವಿಕಲರಿಗೆ ಈ ಯೋಜನೆಯಲ್ಲಿ ಶೇ.5 ರಷ್ಟು ಮೀಸಲು ನಿಗಧಿಪಡಿಸಿದೆ.
7. ಒಂದು ಕುಟುಂಬದ ಒಬ್ಬ ಸದಸ್ಯರಿಗೆ ಮಾತ್ರ ಸೌಲಭ್ಯ ಒದಗಿಸಲಾಗುವುದು.
ಘಟಕ ವೆಚ್ಚ / ಸಾಲದ ಮೊತ್ತ:
ಹಿಂದುಳಿದ ವರ್ಗಗಳಿಗೆ ಸೇರಿವ ಜನರು ಕೈಗೊಳ್ಳುವ ಸ್ವಯಂ ಉದ್ಯೋಗ/ಆರ್ಥಿಕ ಚಟುವಟಿಕೆಗಳ ಅನುಸಾರ ಕನಿಷ್ಠ ರೂ.1.00 ಲಕ್ಷ ಗರಿಷ್ಠ ರೂ.2.00 ಲಕ್ಷಗಳ ಸಾಲವನ್ನು ವಾರ್ಷಿಕ ಶೇ.4ರ ಬಡ್ಡಿದರದಲ್ಲಿ ಮಂಜೂರು ಮಾಡುವುದು, ರೂ.1.00 ಲಕ್ಷಗಳ ಮೊತ್ತದಲ್ಲಿ ಶೇ.20 ರಷ್ಟು ರೂ.20,000/-ಗಳ ಸಹಾಯಧನ ಹಾಗೂ ರೂ.1.00 ಲಕ್ಷದಿಂದ 2.00 ಲಕ್ಷಗಳ ಸಾಲದ ಮೊತ್ತದಲ್ಲಿ ಶೇ.15ರಷ್ಟು ಗರಿಷ್ಠ ರೂ.30,000/-ಗಳ ಸಹಾಯಧನ ಒಳಗೊಂಡಿರುತ್ತದೆ.
2. ಅರಿವು ಶೈಕ್ಷಣಿಕ ಸಾಲ ಯೋಜನೆ:
> ಸಾಲದ ಉದ್ದೇಶ: ಹಿಂದುಳಿದ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ಶೈಕ್ಷಣಿಕಾಭಿವೃದ್ಧಿಗಾಗಿ ಆರ್ಥಿಕ ನೆರವು.
> ಸಾಲದ ಮೊತ್ತ: ವಾರ್ಷಿಕ ರೂ.1.00ಲಕ್ಷಗಳಂತೆ ಕೋರ್ಸ್ನ ಅವಧಿಗೆ ಗರಿಷ್ಠ ರೂ.4.00ಲಕ್ಷಗಳಿಂದ ರೂ.5.00ಲಕ್ಷಗಳ ವರೆಗೆ ಸಾಲ.
> ಬಡ್ಡಿದರ: ವಾರ್ಷಿಕ ಶೇ.2ರಷ್ಟು.
> ಅರ್ಹತೆ:
ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದವರಾಗಿರಬೇಕು.
ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯ ರೂ.3.50 ಲಕ್ಷಗಳ ಮಿತಿಯಲ್ಲಿರಬೇಕು
ಸಾಮಾನ್ಯ ಪ್ರವೇಶ ಪರೀಕ್ಷೆ ಮೂಲಕ (ಸಿ.ಇ.ಟಿ.) ಪ್ರವೇಶ ಪಡೆದಿರಬೇಕು.
ಮರುಪಾವತಿ: ಕೋರ್ಸ್ ಪೂರ್ಣಗೊಂಡ 4 ತಿಂಗಳ ನಂತರ 3 ವರ್ಷಗಳಲ್ಲಿ ಮಾಸಿಕ ಕಂತುಗಳಲ್ಲಿ ಮರುಪಾವತಿ ಮಾಡುವುದು.
ಅಭ್ಯರ್ಥಿಗಳ ಆಯ್ಕೆ: ಈ ಕಾರ್ಯಕ್ರಮದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪ್ರವೇಶ ಪಡೆದು ವ್ಯಾಸಂಗ ಮಾಡುವ ವಿದ್ಯಾರ್ಥಿಗಳನ್ನು ಹೊರತು ಪಡಿಸಿ, ಇತರೆ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳನ್ನು ಆಯಾ ಜಿಲ್ಲೆಯ ಜಿಲ್ಲಾ ಪಂಚಾಯತ್‌ಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚಿಸಿರುವ ಜಿಲ್ಲಾ ಆಯ್ಕೆ ಸಮಿತಿ ಮೂಲಕ ಆಯ್ಕೆ ಮಾಡುವುದು.
ಅರಿವು ನವೀಕರಣ: ಈಗಾಗಲೇ ಹಿಂದುಳಿದ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ಕಳದ ಸಾಲುಗಳಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿಯಲ್ಲಿ ಸೌಲಭ್ಯ ಪಡೆದ ವಿದ್ಯಾರ್ಥಿಗಳಿಗೆ ಸದರಿ ಸಾಲಿನಲ್ಲಿ, ವ್ಯಾಸಂಗ ಮಾಡುತ್ತಿದ್ದಲ್ಲಿ ಮುಂದುವರದ ಕಂತುಗಳಿಗೆ (3,4,5ನೇ ಕಂತುಗಳು) ವಾರ್ಷಿಕ ಗರಿಷ್ಠ ರೂ.1.00ಲಕ್ಷಗಳ ವರೆಗೆ ಸಾಲವನ್ನು ಶೇ.2 ರ ಬಡ್ಡಿ ದರದಲ್ಲಿ ಸೌಲಭ್ಯ ಕಲ್ಪಿಸಲಾಗುತ್ತಿದ.
ಅಭ್ಯರ್ಥಿಯ ಪ್ರಸಕ್ತ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಬಗ್ಗೆ ಕಾಲೇಜಿನ ಪ್ರಾಂಶುಪಾಲರಿಂದ (Study Certificate) ಪ್ರಮಾಣ ಪತ್ರ, ಹಿಂದಿನ ವರ್ಷದ ಅಂಕ ಪಟ್ಟಿ ಪೋಷಕರ ಒಪ್ಪಿಗೆ ಪತ್ರ, ಶುಲ್ಕ ಪಾವತಿ ರಸೀದಿ, ಜಾಮೀನುದಾರರ ಒಪ್ಪಿಗೆ ಪತ್ರವನ್ನು ಅಭ್ಯರ್ಥಿಯು ಮನವಿ ಪತ್ರದೊಂದಿಗೆ ಸಲ್ಲಿಸಿದ್ದಲ್ಲಿ ಮಂಜೂರಾದ ಸಾಲವನ್ನು ಬಿಡುಗಡೆ ಮಾಡಲಾಗುವುದು.
3. ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಆರ್ಥಿಕ ನೆರವು:
ಉದ್ದೇಶ: ವಿದೇಶಿ ವಿಶ್ವವಿದ್ಯಾಲಯಗಳಲ್ಲಿ
ಇಂಜಿನಿಯರಿಂಗ್ & ಟೆಕ್ನಾಲಜಿ.
ಮ್ಯಾನೇಜ್‌ಮೆಂಟ್ & ಕಾಮರ್ಸ್
ಸೈನ್ಸ್ & ಟೆಕ್ನಾಲಜಿ. ಹೀಗೆ ಒಟ್ಟು 3 ವ್ಯಾಸಂಗದ ಕೋರ್ಸ್ನ ಕ್ಷೇತ್ರಗಳಿಗೆ (Category) ಸೌಲಭ್ಯ ವಿಸ್ತರಿಸಲಾಗಿದೆ.
ಸದರಿ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಮೇಲ್ಕಂಡ ಕೋರ್ಸ್ ಗಳ ವ್ಯಾಸಂಗಕ್ಕೆ ಪ್ರವೇಶ ಹೊಂದಿದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, 3ಬಿಗೆ ಸೇರಿದವರಾಗಿರಬೇಕು.
> ಸಾಲದ ಮೊತ್ತ: ವಾರ್ಷಿಕ ಗರಿಷ್ಠ ರೂ.25.00ಲಕ್ಷಗಳಂತೆ 2 ವರ್ಷಗಳ ಅವಧಿಗೆ ಗರಿಷ್ಠ ರೂ.50.00ಲಕ್ಷಗಳು.
> ಅಭ್ಯರ್ಥಿಯ ವಯಸ್ಸು ಮಾಸ್ಟರ್ ಡಿಗ್ರಿ ವ್ಯಾಸಂಗಕ್ಕೆ-32 ವರ್ಷ ಹಾಗೂ ಪಿ.ಹೆಚ್.ಡಿ. ವ್ಯಾಸಂಗಕ್ಕೆ -35 ವರ್ಷಗಳ ವಯೋಮಿತಿಯನ್ನು ನಿಗಧಿಪಡಿಸಲಾಗಿರುತ್ತದೆ.
> ಕುಟುಂಬದ ವಾರ್ಷಿಕ ಆದಾಯ ರೂ.15,00,000/-ಗಳ ಮಿತಿಯಲ್ಲಿರಬೇಕು.
➤ QS ವಿಶ್ವ ವಿಶ್ವವಿದ್ಯಾಲಯ ಶ್ರೇಯಾಂಕ 1000 ರಲ್ಲಿ 2 ನೇ ಸ್ಥಾನ.
> ಅರ್ಹತ ಪರೀಕ್ಷೆಯಲ್ಲಿ ಶೇ.60ಕ್ಕಿಂತ ಕಡಿಮೆ ಅಂಕ ಇರಬಾರದು.
> ವ್ಯಾಸಂಗಕ್ಕೆ ಪ್ರವೇಶ ಪಡೆದ ಬಗ್ಗೆ ವಿದೇಶಿ ವಿಶ್ವವಿದ್ಯಾಲಯಗಳ ಪ್ರವೇಶ ಪತ್ರ, ವೀಸಾ, ಪಾಸ್‌ಪೋರ್ಟ್, ಏರ್‌ಟಿಕೇಟ್ ಪ್ರತಿ ಒದಗಿಸಬೇಕು.
> ಸಾಲದ ಭದ್ರತೆ: ವಿದ್ಯಾರ್ಥಿಯ ತಂದೆ ಅಥವಾ ಜಾಮೀನುದಾರರು ಹೊಂದಿರುವ ಸ್ಥಿರಾಸ್ತಿಯನ್ನು ನಿಗಮಕ್ಕೆ ಆಧಾರ ಮಾಡಬೇಕು. (ಕೊಲ್ಯಾಟರಲ್ ಸೆಕ್ಯೂರಿಟಿ)
> ಅಭ್ಯರ್ಥಿಗಳ ಆಯ್ಕೆ: ಮಾನ್ಯ ಆಯುಕ್ತರು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ರಚಿಸಿರುವ ಆಯ್ಕೆ ಸಮಿತಿಯ ಮೂಲಕ ಆಯ್ಕೆ ಮಾಡಲಾಗುವುದು.
> ಮರುಪಾವತಿ ಅವಧಿ: ಮರುಪಾವತಿ ಅವಧಿ ಗರಿಷ್ಠ 60 ಮಾಸಿಕ ಕಂತುಗಳು. ವ್ಯಾಸಂಗ ಪೂರ್ಣಗೊಂಡ 1 ವರ್ಷದ ನಂತರ ಅಥವಾ ಉದ್ಯೋಗ ದೊರೆತ 6 ತಿಂಗಳ ನಂತರ ಮರುಪಾವತಿ ಕಂತು ಪ್ರಾರಂಭವಾಗುತ್ತದೆ. :
4. ಗಂಗಾ ಕಲ್ಯಾಣ ನೀರಾವರಿ ಯೋಜನೆ:
> ಉದ್ದೇಶ: ಹಿಂದುಳಿದ ವರ್ಗಗಳ ಸಣ್ಣ ಮತ್ತು ಅತಿಸಣ್ಣ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸುವುದು.
> ಅರ್ಹತೆ: ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದವರಾಗಿದ್ದು, ಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕು.
> ಸೌಲಭ್ಯ:ವೈಯಕ್ತಿಕ ನೀರಾವರಿ ಕೊಳವೆಬಾವಿ ಯೋಜನೆ: ಈ ಯೋಜನೆಯಲ್ಲಿ ಉಡುಪಿ, ದಕ್ಷಿಣ ಕನ್ನಡ, ಕೊಡಗು, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು. ಉಳಿಕೆ ಜಿಲ್ಲೆಗಳಲ್ಲಿ ಒಂದೇ ಸ್ಥಳದಲ್ಲಿ ಹೊಂದಿಕೊಂಡಂತೆ ಇರುವ ಕನಿಷ್ಠ 2 ಎಕರೆ ಜಮೀನು ಇರಬೇಕು.
> ಘಟಕವೆಚ್ಚ: ರೂ.3.75ಲಕ್ಷಗಳು. ರೂ.3.25ಲಕ್ಷಗಳ ಸಹಾಯಧನ(ಸಬ್ಸಿಡಿ) ಹಾಗೂ ವಾರ್ಷಿಕ ಶೇ.4ರ ಬಡ್ಡಿದರದಲ್ಲಿ ರೂ.50,000/-ಗಳ ಸಾಲ.ರೂ.3.25ಲಕ್ಷಗಳ ಸಹಾಯಧನದಲ್ಲಿ ಕೊಳವೆ ಬಾವಿ ಕೊರೆಯುವ ವಚ್ಚ; ಪಂಪ್‌ಸೆಟ್ ಅಳವಡಿಕೆ ಹಾಗೂ ಪೂರಕ ಸಾಮಗ್ರಿಗಳ ಸರಬರಾಜಿಗೆ ರೂ.2.50ಲಕ್ಷಗಳ ವೆಚ್ಚ ಭರಿಸಲಾಗುವುದು.
ಕೊರೆದ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿ ಆರ್.ಆರ್. ಸಂಖ್ಯೆ ನೀಡಿದ ನಂತರ ವಿದ್ಯುತ್ ಸರಬರಾಜು ಕಂಪನಿಗಳಿಗೆ ವಿದ್ಯುದ್ದೀಕರಣ ವೆಚ್ಚವಾಗಿ, ಪ್ರತಿ ಕೊಳವೆ ಬಾವಿಗೆ ರೂ.75,000/-ಗಳಂತೆ ಪಾವತಿಸಲಾಗುವುದು.
ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ವೈಯಕ್ತಿಕ ಕೊಳವೆ ಬಾವಿಯ ಘಟಕ ವೆಚ್ಚ ರೂ.4.75ಲಕ್ಷಗಳು, ಇದರಲ್ಲಿ ರೂ.4.25ಲಕ್ಷಗಳ ಸಹಾಯಧನ ಹಾಗೂ ರೂ.50000/-ಗಳ ಸಾಲವಾಗಿರುತ್ತದೆ.
ಈ ಕಾರ್ಯಕ್ರಮಕ್ಕೆ ಆಯಾ ವಿಧಾನಸಭಾ ಕ್ಷೇತ್ರಕ್ಕೆ ನಿಗದಿಪಡಿಸಿದ ಆರ್ಥಿಕ ಗುರಿಯನ್ವಯ ಮೀಸಲಾತಿ ಅನುಪಾತ ಪ್ರವರ್ಗ-1 ಮತ್ತು 2ಎಗೆ 85% ಹಾಗೂ ಪ್ರವರ್ಗ-3ಎ ಮತ್ತು 3ಬಿಗೆ 15%ರಂತೆ ನೀರಾವರಿ ಘಟಕಗಳನ್ನು ಆಯ್ಕೆ ಮಾಡಿ ಸೌಲಭ್ಯ ಒದಗಿಸಬೇಕು.
> ಮರುಪಾವತಿ ಅವಧಿ: ಸಾಲದ ಮರುಪಾವತಿ ಅವಧಿ 3 ವರ್ಷಗಳು.
5. ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ:-
> ಯೋಜನೆಯ ಉದ್ದೇಶ:- ಹಿಂದುಳಿದ ವರ್ಗಗಳ ವಿದ್ಯಾವಂತ ಯುವ ಜನರಿಗೆ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಸರ್ಕಾರದ ಸಂಸ್ಥೆಗಳಾದ ITI, KGTTI, ATDC, GTTC, VTU & ಶ್ರೀ ಕಾಳಿದಾಸ ಶಿಕ್ಷಣ ಸಮಿತಿ (ರಿ) ಗಳ ಮೂಲಕ ವಿವಿಧ ಅಲ್ಪಾವಧಿ ಕೋರ್ಸ್‌ಳಲ್ಲಿ ತರಬೇತಿ ನೀಡಿ ಅವರ ಉದ್ಯೋಗ ಸಾಮರ್ಥ್ಯವನ್ನು ಹಾಗೂ ಸಾಮಾಜಿಕ/ಆರ್ಥಿಕ ಸ್ಥಿತಿಗತಿಗಳ ಉನ್ನತೀಕರಿಸುವ ನಿಟ್ಟಿನಲ್ಲಿ ಪ್ರಸಕ್ತ ಸಾಲಿನಿಂದ ಸ್ವಾತಂತ್ರು ಅಮೃತ ಮಹೋತ್ಸವದ ಮುನ್ನಡ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ.
> ಯೋಜನೆಯಲ್ಲಿ ಅರ್ಜಿಸಲ್ಲಿಸಲು ಬೇಕಾದ ಸಾಮಾನ್ಯ ಅರ್ಹತೆಗಳು:-
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ಜಾತಿಗೆ ಸೇರಿದವರಾಗಿರಬೇಕು.
ಈ ಯೋಜನೆಯಲ್ಲಿ ತರಬೇತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ, ದ್ವಿತೀಯ ಪಿ.ಯು.ಸಿ, ಡಿಪ್ಲೋಮಾ, ಪದವಿ, ಇಂಜಿನಿಯರಿಂಗ್ ಕೋರ್ಸ್ ಪೂರ್ಣಗೊಳಿಸಿರಬೇಕು.
ಅರ್ಜಿದಾರರ ವಯಸ್ಸು 18 ರಿಂದ 30 ವರ್ಷಗಳ ಒಳಗಿರಬೇಕು.
ಪ್ರವರ್ಗ 1ರ ಜಾತಿಯ ಅರ್ಜಿದಾರರಿಗೆ ಆದಾಯ ಮಿತಿ ಇರುವುದಿಲ್ಲ. ಪ್ರವರ್ಗ 2ಎ,3ಎ ಮತ್ತು 3ಬಿ ಜಾತಿಯಲ್ಲಿ ಬರುವ ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ 8.00 ಲಕ್ಷ ರೂ.ಗಳಿಗಿಂತ ಕಡಿಮೆ ಇರಬೇಕು.
ಅರ್ಜಿದಾರರ ಉದ್ಯೋಗದ ಸ್ಥಿತಿಗತಿಗಳ ಬಗ್ಗೆ ಸ್ವಯಂ ಘೋಷಣೆ ಸಲ್ಲಿಸುವುದು.
ಸದರಿ ಯೋಜನೆಗೆ ಅರ್ಜಿಗಳನ್ನು ಕೌಶಲ್ಯ ಕರ್ನಾಟಕ ಪೋರ್ಟಲ್ ಆನ್‌ಲೈನ್ ಮಾಧ್ಯಮದ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗುವುದು.
6. “ಸ್ವಾವಲಂಬಿ ಸಾರಥಿ” ಯೋಜನೆಯಡಿ ನಾಲ್ಕು ಚಕ್ರಗಳ ವಾಹನ ಖರೀದಿಗೆ ಸಹಾಯಧನ ಮಂಜೂರಾತಿ ಯೋಜನೆ
ಯೋಜನೆ ಉದ್ದೇಶ: ವಾಹನ ಚಾಲನ ಪರವಾನಗಿಯನ್ನು ಹೊಂದಿರುವ ಹಿಂದುಳಿದ ವರ್ಗಗಳಿಗೆ ಸೇರಿದ ನಿರುದ್ಯೋಗಿ ಯುವಕರಿಗೆ ಸ್ವಾವಲಂಬಿ ಸಾರಥಿ ಯೋಜನೆಯಡಿ ನಾಲ್ಕು ಚಕ್ರಗಳ ವಾಹನವನ್ನು ಖರೀದಿಸಲು ನಿಗಮದಿಂದ ಸಹಾಯಧನ ಮತ್ತು ಬ್ಯಾಂಕ್ ಗಳಿಂದ ಸಾಲ ಸೌಲಭ್ಯ ಒದಗಿಸುವುದು.
ಯೋಜನೆಯಲ್ಲಿ ಪ್ರಯೋಜನ ಪಡೆಯಲು ಇರಬೇಕಾದ ಅರ್ಹತೆಗಳು:
1. ಈ ಯೋಜನೆಯಲ್ಲಿ ಆರ್ಥಿಕ ಸಹಾಯ ಪಡೆಯಲು ಅಭ್ಯರ್ಥಿಯು ಸರ್ಕಾರದ ಆದೇಶ ಸಂಖ್ಯೆ: ಸಕಇ 225 ಬಿಸಿಎ 2000, ದಿನಾಂಕ:30.03.2002ರಲ್ಲಿ ಗುರುತಿಸಿದ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದವರಾಗಿರಬೇಕು.
2. ಈ ಯೋಜನೆಯಲ್ಲಿ ಆರ್ಥಿಕ ಸಹಾಯ ಪಡೆಯಲು ಇಚ್ಛಿಸುವ ಅರ್ಜಿದಾರರು ಲಘು ವಾಹನ ಚಾಲನ ಪರವಾನಗಿಯನ್ನು ಹೊಂದಿರಬೇಕು.
3. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.98,000/-ಗಳು ಪಟ್ಟಣ ಪ್ರದೇಶದವರಿಗೆ ರೂ.1,20,000/-ಗಳನ್ನು ಮೀರಿರಬಾರದು.
4. ಕರ್ನಾಟಕ ರಾಜ್ಯ ಖಾಯಂ ನಿವಾಸಿಯಾಗಿರಬೇಕು.
5. ಅರ್ಜಿದಾರರ ವಯಸ್ಸು ಕನಿಷ್ಠ 18 ರಿಂದ 45 ವರ್ಷಗಳ ಮಿತಿಯೊಳಗಿರಬೇಕು.
6. ಈ ಹಿಂದೆ/ಈಗಾಗಲೇ ನಿಗಮದ ಯೋಜನೆಗಳಲ್ಲಿ ಸೌಲಭ್ಯ ಪಡೆದಿರಬಾರದು.
7. ಈ ಯೋಜನೆಯಲ್ಲಿ ಸವಲತ್ತು ಪಡೆಯ ಬಯಸುವ ಅರ್ಜಿದಾರರು ವಾಸಿಸುತ್ತಿರುವ ವ್ಯಾಪ್ತಿಗೆ ಬರುವ ಬ್ಯಾಂಕ್ ಶಾಖೆಯ ಖಾತೆಯನ್ನು ಕಡ್ಡಾಯವಾಗಿ ಹೊಂದಿರಬೇಕು.
8. ಒಂದು ಕುಟುಂಬದ ಒಬ್ಬ ಸದಸ್ಯರಿಗೆ ಮಾತ್ರ ಸೌಲಭ್ಯ ಒದಗಿಸಲಾಗುವುದು.
9. ಕಡ್ಡಾಯವಾಗಿ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಆಧಾರ್ ಸಂಯೋಜನೆಯಾಗಿರುವ ಹೊಂದಿರಬೇಕು. ಖಾತೆ
ಘಟಕ ವೆಚ್ಚ / ಸಾಲದ ಮೊತ್ತ:
ಸ್ವಾವಲಂಬಿ ಸಾರಥಿ ಯೋಜನೆಯಡಿ ನಾಲ್ಕು ಚಕ್ರಗಳ ವಾಹನವನ್ನು (ಟ್ಯಾಕ್ಸಿ, ಟಾಟಾ ಎಸಿ, ಗೂಡ್ಸ್ ವಾಹನ ಇತ್ಯಾದಿ ನಾಲ್ಕು ಚಕ್ರಗಳ ವಾಹನ) ಖರೀದಿಸಲು ಬ್ಯಾಂಕ್ ಮಂಜೂರು ಮಾಡಿದ ಸಾಲದ ಶೇ.50ರಷ್ಟು ಅಥವಾ ಗರಿಷ್ಠ ರೂ.3.00 ಲಕ್ಷಗಳ ವರೆಗೆ ಇವುಗಳಲ್ಲಿ ಯಾವುದು ಕಡಿಮೆಯೋ ಅಷ್ಟು ಸಹಾಯಧನವನ್ನು ನಿಗಮದಿಂದ ಮಂಜೂರು ಮಾಡುವುದು. ಉಳಿದ ಮೊತ್ತವನ್ನು ಬ್ಯಾಂಕ್ /ಹಣಕಾಸು ಸಂಸ್ಥೆಗಳಿಂದ ಸಾಲದ ರೂಪದಲ್ಲಿ ಪಡೆಯುವುದು ಈ ಸಾಲಕ್ಕೆ ಬ್ಯಾಂಕ್ / ಹಣಕಾಸು ಸಂಸ್ಥೆಗಳು ನಿಗದಿಪಡಿಸುವ ಬಡ್ಡಿಯನ್ನು ಪಾವತಿಸಬೇಕು
7. ಹೊಲಿಗೆ ಯಂತ್ರ ವಿತರಣೆ ಯೋಜನೆ.
ಹಿಂದುಳಿದ ವರ್ಗಗಳ ಪ್ರವರ್ಗ: 1, 2ಎ, 3ಎ ಹಾಗೂ 3ಬಿ ರಲ್ಲಿ ಒಳಪಡುವ ಜಾತಿಗೆ ಸೇರಿದ ಬಡ ಕುಟುಂಬದವರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸುವ ಯೋಜನೆಯನ್ನು ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿರುತ್ತದ.
8. ಸ್ವಯಂ ಉದ್ಯೋಗ (ವಾಣಿಜ್ಯ ಬ್ಯಾಂಕ್‌ಗಳ ಸಹಯೋಗದೊಂದಿಗೆ) ಸಾಲ ಯೋಜನೆ.
ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಹಿಂದುಳಿದ ವರ್ಗಗಳಿಗೆ ಸೇರಿದವರಿಗೆ ಸ್ವಯಂ ಉದ್ಯೋಗ ಕಲ್ಪಿಸಿ ಕೊಳ್ಳಲು ಅವರು ಕೈಗೊಳ್ಳುವ ಆರ್ಥಿಕ ಚಟುವಟಿಕೆಗಳು/ಉದ್ಯಮಗಳಿಗೆ ವಾಣಿಜ್ಯ ಬ್ಯಾಂಕುಗಳ ಮೂಲಕ ಸಾಲ ಪಡೆದಲ್ಲಿ ನಿಗಮದಿಂದ ಶೇ.20ರಷ್ಟು ಗರಿಷ್ಠ ರೂ.1.00 ಲಕ್ಷಗಳ ಸಹಾಯಧನ ಮಂಜೂರು ಮಾಡಲು ಉಳಿಕೆ ಮೊತ್ತವನ್ನು ಬ್ಯಾಂಕ್‌ನಿಂದ ಸಾಲ ಪಡೆಯುವ ಯೋಜನೆಯನ್ನು ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿರುತ್ತದೆ.
9. ಆಹಾರ ಕಿಯೋಸ್ಕಾ (food Cart) ಯೋಜನೆ.
ಆಹಾರ ವಾಹಿನಿ (ಕಿಯೋಸ್ಟ್) ಯೋಜನೆಯಲ್ಲಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, 3ಬಿಗೆ ಸೇರಿದ ನಿರುದ್ಯೋಗಿ ಜನರಿಗೆ ಉದ್ಯೋಗಾವಕಾಶವನ್ನು ಕಲ್ಪಿಸಿ ಆರ್ಥಿಕವಾಗಿ ಸಶಕ್ತಗೊಳಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ಗಂಗಾ ಕಲ್ಯಾಣ ಯೋಜನೆಯನ್ನು ರಾಜ್ಯದ ನಗರ ಮತ್ತು ಪಟ್ಟಣ ಪ್ರದೇಶಗಳ ವ್ಯಾಪ್ತಿಯ 35 ವಿಧಾನಸಭಾ ಕ್ಷೇತ್ರಗಳಲ್ಲಿ ಅನುಷ್ಠಾನಗೊಳಿಸುತ್ತಿರುವುದಿಲ್ಲ. ಈ 35 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮಾತ್ರ ಆಹಾರ ವಾಹಿನಿ (ಕಿಯೋಸ್ಕ) ಯೋಜನೆಯನ್ನು ಬ್ಯಾಂಕುಗಳ ಸಹಯೋಗದೊಂದಿಗೆ ಅನುಷ್ಠಾನಗೊಳಿಸಲು ಈ ಯೋಜನೆಯಲ್ಲಿ ಫಲಾನುಭವಿಗಳು ವಿದ್ಯುತ್ ಚಾಲಿತ 4 ಚಕ್ರಗಳ ವಾಹನ ಖರೀದಿಸಲು ನಿಗಮದಿಂದ ಗರಿಷ್ಠ 3.00 ಲಕ್ಷ ರೂ.ಗಳ ಸಹಾಯಧನವನ್ನು ಉಳಿದ ಮೊತ್ತವನ್ನು ಬ್ಯಾಂಕ್/ಹಣಕಾಸು ಸಂಸ್ಥೆಗಳ ಮೂಲಕ ಪಡೆಯಬಹುದಾಗಿರುತ್ತದೆ.









