ಬೆಂಗಳೂರು: ರಾಜ್ಯದ ವೈದ್ಯಕೀಯ ಶಿಕ್ಷಣ ಆಕಾಂಕ್ಷಿಗಳಿಗೆ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಈ ವರ್ಷ ಯಾವುದೇ ವೈದ್ಯಕೀಯ ಕೋರ್ಸ್ ಗಳ ಶುಲ್ಕ ಹೆಚ್ಚಳ ಮಾಡದಿರಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಗುರುವಾರ ವೈದ್ಯ ಶಿಕ್ಷಣ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ವೈದ್ಯಕೀಯ ಕಾಲೇಜುಗಳ ಪ್ರಸ್ತಾವನೆಯನ್ನು ತಿರಸ್ಕರಿಸಲಾಗಿದೆ. ಖಾಸಗಿ ವೈದ್ಯಕೀಯ ಕಾಲೇಜುಗಳ ಆಡಳಿತ ಮಂಡಳಿಗಳು ಈ ವರ್ಷ ಶೇಕಡ 15ರಷ್ಟು ಶುಲ್ಕ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿದ್ದವು.
ಯಾವುದೇ ಕಾರಣಕ್ಕೂ ಈ ವರ್ಷ ಶುಲ್ಕ ಹೆಚ್ಚಳ ಮಾಡುವುದಿಲ್ಲ ಎಂದು ಆಡಳಿತ ಮಂಡಳಿ ಪ್ರತಿನಿಧಿಗಳಿಗೆ ಸಚಿವರು ಸ್ಪಷ್ಟವಾಗಿ ತಿಳಿಸಿದ್ದಾರೆ. ಕಳೆದ ವರ್ಷ ಖಾಸಗಿ ವೈದ್ಯಕೀಯ ಕಾಲೇಜು ವರ್ಷ ಶುಲ್ಕ ಹೆಚ್ಚಳಕ್ಕೆ ಒಪ್ಪಿಗೆ ನೀಡಲಾಗಿತ್ತು. ಈ ವರ್ಷ ಶುಲ್ಕ ಹೆಚ್ಚಳ ಮಾಡಲು ಸಾಧ್ಯವಿಲ್ಲ ಎಂದು ಸಚಿವರು ಮಾಹಿತಿ ನೀಡಿದ್ದಾರೆ.