ಬೆಂಗಳೂರು: ನರೇಗಾ ಯೋಜನೆಡಿ ಕೂಲಿ ಕೆಲಸ ಮಾಡುವ ಕಾರ್ಮಿಕರ ಕೆಲಸದ ಪ್ರಮಾಣದಲ್ಲಿ ಶೇಕಡ 30ರಷ್ಟು ರಿಯಾಯಿತಿ ಘೋಷಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಏಪ್ರಿಲ್ ಹಾಗೂ ಮೇ ತಿಂಗಳ ಬೇಸಿಗೆಯ ಬಿಸಿಲಿನ ಪ್ರಖರತೆ ಹೆಚ್ಚಿರುವ ಹಿನ್ನೆಲೆಯಲ್ಲಿ ಕಲಬುರಗಿ ಹಾಗೂ ಬೆಳಗಾವಿ ವಿಭಾಗದ 14 ಜಿಲ್ಲೆಗಳಲ್ಲಿ ನರೇಗಾ ಯೋಜನೆಯಡಿಯಲ್ಲಿ ದುಡಿಯುವ ಕಾರ್ಮಿಕರಿಗೆ ಕೆಲಸದಲ್ಲಿ ರಿಯಾಯಿತಿ ನೀಡಲಾಗಿದೆ. ಬೆಳಗಾವಿ ಮತ್ತು ಕಲಬುರಗಿ ವಿಭಾಗದ 14 ಜಿಲ್ಲೆಗಳಲ್ಲಿ ನರೇಗಾ ಕಾಮಗಾರಿಗಳ ಕೆಲಸದಲ್ಲಿ 30%ರಷ್ಟು ರಿಯಾಯಿತಿ ನೀಡುವುದರಿಂದ ಶ್ರಮಿಕ ಸಮುದಾಯದ ನೆರವಿಗೆ ನಿಂತಿದೆ ನಮ್ಮ ಸರ್ಕಾರ ಎಂದು ಹೇಳಿದ್ದಾರೆ.
ಕಾರ್ಮಿಕ ಸ್ನೇಹಿ ವಾತಾವರಣ ನಿರ್ಮಿಸುವುದನ್ನು ಅಧಿಕಾರಿಗಳು ಆದ್ಯತೆಯಾಗಿ ಪರಿಗಣಿಸಬೇಕು. ನರೇಗಾ ಯೋಜನೆಯ ಕಾಮಗಾರಿ ನಡೆಯುವ ಸ್ಥಳದಲ್ಲಿ ಶುದ್ಧ ಕುಡಿಯುವ ನೀರು, ನೆರಳಿನ ವ್ಯವಸ್ಥೆ ಮತ್ತು ಪ್ರಥಮ ಚಿಕಿತ್ಸೆಯ ವ್ಯವಸ್ಥೆಯನ್ನು ಕಡ್ಡಾಯವಾಗಿ ಮಾಡಿರತಕ್ಕದ್ದು ಎಂದು ತಿಳಿಸಿದ್ದಾರೆ.