ಬೆಂಗಳೂರು: ರಾಜ್ಯ ಸರ್ಕಾರದಿಂದ ಬಂದೋಬಸ್ತ್ ಕರ್ತವ್ಯಗಳಿಗೆ ನಿಯೋಜಿಸುವಂತ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಪಾವತಿಸುತ್ತಿರುವ ಆಹಾರ ಭತ್ಯೆಯ ದರಗಳನ್ನು ಪರಿಷ್ಕರಿಸಿ ಆದೇಶಿಸಿದೆ.
ಈ ಕುರಿತಂತೆ ಎಐಜಿಪಿ ಡಾ.ಸಂಜೀವ ಎಂ ಪಾಟೀಲ ಅವರು ಆದೇಶ ಹೊರಡಿಸಿದ್ದು, ಗುಣಮಟ್ಟದ ಆರೋಗ್ಯಕರ ಆಹಾರವನ್ನು ಪೂರೈಸುವ ದೃಷ್ಠಿಯಿಂದ ಹಬ್ಬಹರಿ ದಿನಗಳು, ವಿಶೇಷ ಹಾಗೂ ಚುನಾವಣಾ ಸಂದರ್ಭಗಳಲ್ಲಿ ಬಂದೋಬಸ್ತ್ ಕರ್ತವ್ಯ ನಿರ್ವಹಿಸುವ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗೆ ಪ್ರಸ್ತುತ ಪಾವತಿಸುತ್ತಿರುವ ಆಹಾರ ಭತ್ಯೆ( Food Allowance) ದರವನ್ನು ರೂ.200ರಿಂದ ರೂ.300ಗಳಿಗೆ ಹೆಚ್ಚಿಸಿ ಆದೇಶಿಸಿದ್ದಾರೆ.