ಬೆಂಗಳೂರು : ರಾಜ್ಯ ಸರ್ಕಾರದಿಂದ ಪರಿಶಿಷ್ಟ ಪಂಗಡದ ಉದ್ಯಮಿಗಳಿಗೆ ಸಿಹಿಸುದ್ದಿ ಸಿಕ್ಕಿದ್ದು, ವ್ಯಾಪಾರಕ್ಕಾಗಿ ಬಡ್ಡಿ ಸಹಾಯಧನ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗಿದೆ.
ಪರಿಶಿಷ್ಟ ಪಂಗಡದ ಉದ್ಯಮಿಗಳು ಎಂ.ಎಸ್.ಎಂ.ಇ (ಸೂಕ್ಷ್ಮ ಸಣ್ಣ ಮತ್ತು ಮಧ್ಯಮ ಉದ್ಯಮಗಳು) ಘಟಕಗಳನ್ನು ಸ್ಥಾಪಿಸಲು ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ಹಾಗೂ ರಾಷ್ಟ್ರೀಕೃತ / ಜಿಲ್ಲಾ ಸಹಕಾರಿ ಬ್ಯಾಂಕ್ / ಅಪೆಕ್ಸ್ ಸಹಕಾರಿ ಬ್ಯಾಂಕ್ಗಳಿಂದ ಪಡೆಯುವ ಸಾಲಕ್ಕೆ 4% ಬಡ್ಡಿ ಸಹಾಯಧನ ಸೌಲಭ್ಯ ಒದಗಿಸುವ ಯೋಜನೆ.
2021-22ನೇ ಸಾಲಿನಿಂದ ವಾಣಿಜ್ಯ ಮತ್ತು ವ್ಯಾಪಾರ ಚಟುವಟಿಕೆಗಳಾದ ಮಳಿಗೆ / ಡೀಲರ್ಶಿಪ್ / ಫ್ರಾಂಚೈಸಿ / ಹೋಟೆಲ್ ಉದ್ಯಮಗಳಿಗೂ ಈ ಯೋಜನೆ ವಿಸ್ತರಿಸಲಾಗಿದೆ.
ಈ ಯೋಜನೆಯಡಿ ಗರಿಷ್ಟ ರೂ. 1.00 ಕೋಟಿ ವರೆಗೆ ರಾಷ್ಟ್ರೀಕೃತ ಮತ್ತು ವಾಣಿಜ್ಯ ಶೆಡ್ಯೂಲ್ಡ್ ಬ್ಯಾಂಕ್ಗಳಿಂದ ಸಾಲ ಪಡೆಯಲು ಅವಕಾಶ ಒದಗಿಸಲಾಗಿದೆ.
ಸಾಲದ ಮರುಪಾವತಿ ಅವಧಿ : 5 ವರ್ಷಗಳ ಅವಧಿಗೆ ನಿಗದಿಪಡಿಸಲಾಗಿದೆ.









