Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದ IPL ಪ್ರಿಯರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಬಿಗ್ ಗಿಫ್ಟ್: ಮೇ.31ರಂದು ಫೈನಲ್ ಪಂದ್ಯ ವೀಕ್ಷಣೆಗೆ ಎಲ್‌ಇಡಿ ಪರದೆ ವ್ಯವಸ್ಥೆ!

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ.ಆರ್ ನೇಮಿಸಿ ಸರ್ಕಾರ ಆದೇಶ

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’27 ತಹಶೀಲ್ದಾರ್’ಗಳನ್ನು ವರ್ಗಾವಣೆ | Tahashildar Transfer

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ‘SSLC-PUC’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `ವಿಶೇಷ ಪ್ರೋತ್ಸಾಹಧನ’ಕ್ಕೆ ಅರ್ಜಿ ಆಹ್ವಾನ
KARNATAKA

BIG NEWS : ರಾಜ್ಯದ ‘SSLC-PUC’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `ವಿಶೇಷ ಪ್ರೋತ್ಸಾಹಧನ’ಕ್ಕೆ ಅರ್ಜಿ ಆಹ್ವಾನ

By kannadanewsnow57

ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಎಸ್‍ಎಸ್‍ಎಲ್‍ಸಿ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಗಳು ಎಸ್‍ಎಸ್‍ಎಲ್‍ಸಿ ಯನ್ನು ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿರಬೇಕು. ವಿದ್ಯಾರ್ಥಿಗಳು ದ್ವಿತೀಯ/ಅಂತಿಮ ವರ್ಷದ ಪಿಯುಸಿಯನ್ನು ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿರಬೇಕು. ಸಿಬಿಎಸ್‍ಸಿ ಮತ್ತು ಐಸಿಎಸ್‍ಇ ವತಿಯಿಂದ ನಡೆಸಲಾಗುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆಯಾದವರೂ ಸಹ ಈ ಯೋಜನೆಯಡಿಯಲ್ಲಿ ಪ್ರೋತ್ಸಾಹಧನ ಪಡೆಯಲು ಅರ್ಹರಿರುತ್ತಾರೆ.

ಪದವಿ, ಸ್ನಾತಕೋತ್ತರ ಪದವಿ, ಕೃಷಿ, ಪಶುಸಂಗೋಪನೆ, ಎಂಜಿನಿಯರಿಂಗ್, ಮೆಡಿಕಲ್ ಕೋರ್ಸುಗಳಿಗೆ ಸಂಬಂಧಿಸಿದಂತೆ ಪ್ರತಿ ವರ್ಷ ಪ್ರಥಮ ಪ್ರಯತ್ನದಲ್ಲಿ ಪಾಸಾಗಿರಬೇಕು ಮತ್ತು ಅಂತಿಮ ವರ್ಷದ ತರಗತಿಯಲ್ಲಿ ಪ್ರಥಮ ದರ್ಜೆಯಲ್ಲಿ ಈ ಕೋರ್ಸ್‍ಗಳಿಗೆ ಪಾಸಾಗಿರಬೇಕು ಮತ್ತು ಅಂತಿಮ ವರ್ಷದ ತರಗತಿಯಲ್ಲಿ ಪ್ರಥಮ ದರ್ಜೆಯಲ್ಲಿ ಪಾಸಾಗಿರಬೇಕು ಎಲ್ಲಾ ಕೋರ್ಸುಗಳಲ್ಲಿ ಪ್ರತಿ ವರ್ಷದ ಪರೀಕ್ಷೆ ಅಥವಾ ಸೆಮಿಸ್ಟರ್‍ಗಳಲ್ಲಿ compartmental/ carry over system ರಡಿ ಪಾಸಾಗಿದ್ದರೆ ಅಂತಹವರು ಬಹುಮಾನ ಹಣ ಪಡೆಯಲು ಅರ್ಹರಿರುವುದಿಲ್ಲ.

ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಈ ಕೋರ್ಸುಗಳನ್ನು ಹೊರ ರಾಜ್ಯಗಳಲ್ಲಿ ವ್ಯಾಸಂಗ ಮಾಡಿದ್ದರೂ ಸಹ ಅರ್ಹರಾಗಿರುತ್ತಾರೆ. ಆದರೆ ಹೊರ ದೇಶಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಈ ಯೋಜನೆಯಡಿ ಬಹುಮಾನ ಹಣ ಪಡೆಯಲು ಅರ್ಹರಲ್ಲ.

ರಾಜ್ಯ/ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವ ವಿದ್ಯಾಲಯ/ ಯುಜಿಸಿ ಯಿಂದ ಪಡೆದ ಡೀಮ್ಡ್ ವಿಶ್ವ ವಿದ್ಯಾಲಯಗಳಡಿ ಬರುವ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡಿದ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಸ್ವಾಯತ್ತ (ಅಟೋನಮಸ್) ವಿದ್ಯಾ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಈ ಯೋಜನೆಗೆ ಅರ್ಹರಿರುತ್ತಾರೆ. ಸರ್ಕಾರದಿಂದ ಮಾನ್ಯತೆ ಪಡೆಯದಿರುವ ವಿದ್ಯಾ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಈ ಯೋಜನೆಯಡಿ

ಅರ್ಹರಿರುವುದಿಲ್ಲ. ವಿದ್ಯಾರ್ಥಿಯು ವ್ಯಾಸಂಗ ಮಾಡಿದ ಶೈಕ್ಷಣಿಕ ಸಂಸ್ಥೆ ಯಾವ ಜಿಲ್ಲೆಯಲ್ಲಿ ಇರುತ್ತದೆಯೋ ಅದೇ ಜಿಲ್ಲೆಯ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಇವರಿಗೆ ಅರ್ಜಿ ಸಲ್ಲಿಸತಕ್ಕದ್ದು. ಹೊರ ರಾಜ್ಯಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು (native district ) ನಲ್ಲಿ ಮಾತ್ರ ಅರ್ಜಿ ಸಲ್ಲಿಸತಕ್ಕದ್ದು.

ಆನ್‍ಲೈನ್ ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳು ಎಸ್‍ಎಸ್‍ಎಲ್‍ಸಿ- ಅಭ್ಯರ್ಥಿಯ ಫೋಟೊ. ಎಸ್ಸೆಸ್ಸೆಲ್ಸಿ ಅಂಕ ಪಟ್ಟಿ, ಆಧಾರ್ ಪ್ರತಿ, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಬುಕ್,

ದ್ವಿತೀಯ ಪಿ.ಯು.ಸಿ:- ಅಭ್ಯರ್ಥಿಯ ಪೋಟೋ, ದ್ವಿತೀಯ ಪಿ.ಯು.ಸಿ ಅಂಕಪಟ್ಟಿ, ಎಸ್ಸೆಸ್ಸೆಲ್ಸಿ ಅಂಕಪಟ್ಟಿ, ಆಧಾರ್ ಪ್ರತಿ, ಜಾತಿ ಪ್ರಮಾಣ ಪತ್ರ ಆದಾಯ ಪ್ರಮಾಣ ಪತ್ರ ಬ್ಯಾಂಕ್ ಪಾಸ್ ಬುಕ್, ಪದವಿ, ಸ್ನಾತಕೋತ್ತರ ಪದವಿ, ಕೃಷಿ, ಪಶುಸಂಗೋಪನೆ, ಎಂಜಿನಿಯರಿಂಗ್, ಮೆಡಿಕಲ್

ಅಭ್ಯರ್ಥಿಯ ಫೋಟೋ, ಎಲ್ಲಾ ಸೆಮ್‍ಗಳ ಅಂಕಪಟ್ಟ, ಎಸ್ಸೆಸ್ಸೆಲ್ಸಿ ಅಂಕಪಟ್ಟ, ಆಧಾರ್ ಪ್ರತಿ, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಬುಕ್ ಸಲ್ಲಿಸಬೇಕು.

ವಿದ್ಯಾರ್ಥಿಗಳು (www.sw.kar.nic.in) ನಲ್ಲಿ ಆನ್‍ಲೈನ್ ಅರ್ಜಿ ಸಲ್ಲಿಸುವಾಗ ಯಾವುದಾದರೂ ತಾಂತ್ರಿಕ ತೊಂದರೆಯಾದಲ್ಲಿ ಇಲಾಖೆಯ ಟೋಲ್ ಫ್ರೀ ದೂರವಾಣಿ ಸಂಖ್ಯೆ 080-22634300, 080-22353757 ಅಥವಾ ಸಹಾಯಕ ನಿರ್ಧೇಶಕರು (ಗ್ರೇಡ್-2) ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆರವರ ದೂರವಾಣಿ ಸಂಖ್ಯೆ 94808843156 ಮತ್ತು 08276-281115 ನ್ನು ಸಂಪರ್ಕಿಸಬಹುದು ಎಂದು ಸೋಮವಾರಪೇಟೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

BIG NEWS: Good news for the state's 'SSLC-PUC' students: Applications invited for `Special Incentive Grant'
Share. Facebook Twitter LinkedIn WhatsApp Email

Related Posts

ಸಾಗರದ IPL ಪ್ರಿಯರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಬಿಗ್ ಗಿಫ್ಟ್: ಮೇ.31ರಂದು ಫೈನಲ್ ಪಂದ್ಯ ವೀಕ್ಷಣೆಗೆ ಎಲ್‌ಇಡಿ ಪರದೆ ವ್ಯವಸ್ಥೆ!

1 Min Read

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ.ಆರ್ ನೇಮಿಸಿ ಸರ್ಕಾರ ಆದೇಶ

1 Min Read

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’27 ತಹಶೀಲ್ದಾರ್’ಗಳನ್ನು ವರ್ಗಾವಣೆ | Tahashildar Transfer

3 Mins Read
Recent News

ಸಾಗರದ IPL ಪ್ರಿಯರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಬಿಗ್ ಗಿಫ್ಟ್: ಮೇ.31ರಂದು ಫೈನಲ್ ಪಂದ್ಯ ವೀಕ್ಷಣೆಗೆ ಎಲ್‌ಇಡಿ ಪರದೆ ವ್ಯವಸ್ಥೆ!

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ.ಆರ್ ನೇಮಿಸಿ ಸರ್ಕಾರ ಆದೇಶ

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’27 ತಹಶೀಲ್ದಾರ್’ಗಳನ್ನು ವರ್ಗಾವಣೆ | Tahashildar Transfer

​ತಾಂತ್ರಿಕ ದೋಷ: ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಅರ್ಧದಾರಿಯಲ್ಲೇ ವಾಪಸ್

State News
KARNATAKA

ಸಾಗರದ IPL ಪ್ರಿಯರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಬಿಗ್ ಗಿಫ್ಟ್: ಮೇ.31ರಂದು ಫೈನಲ್ ಪಂದ್ಯ ವೀಕ್ಷಣೆಗೆ ಎಲ್‌ಇಡಿ ಪರದೆ ವ್ಯವಸ್ಥೆ!

By ವಸಂತ ಬಿ ಈಶ್ವರಗೆರೆ KARNATAKA 1 Min Read

ಶಿವಮೊಗ್ಗ: ಜಿಲ್ಲೆಯ ಸಾಗರ ನಗರದ ಕ್ರಿಕೆಟ್ ಹಾಗೂ ಐಪಿಎಲ್ ಅಭಿಮಾನಿಗಳ ಕ್ರೇಜ್‌ಗೆ ಸಾಗರ ಕ್ಷೇತ್ರದ ಜನಪ್ರಿಯ ಶಾಸಕರಾದ ಗೋಪಾಲಕೃಷ್ಣ ಬೇಳೂರು…

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ.ಆರ್ ನೇಮಿಸಿ ಸರ್ಕಾರ ಆದೇಶ

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’27 ತಹಶೀಲ್ದಾರ್’ಗಳನ್ನು ವರ್ಗಾವಣೆ | Tahashildar Transfer

ರಾಜ್ಯದ ಶಾಲಾ ವಿದ್ಯಾರ್ಥಿಗಳ ಗಮನಕ್ಕೆ: ಮೇ.29ರಿಂದ ‘KSRTC ಬಸ್ ಪಾಸ್’ಗೆ ಅರ್ಜಿ ಸಲ್ಲಿಕೆ ಆರಂಭ, ಜೂನ್.1ರಿಂದ ವಿತರಣೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.