Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೆಇಎ ಪರೀಕ್ಷಾ ವ್ಯವಸ್ಥೆ ಅಧ್ಯಯನಕ್ಕೆ ಬಂದ ಕೇಂದ್ರ ಸರ್ಕಾರದ ನಿಯೋಗ

11/03/2026 3:31 PM

BREAKING : ಶೈಕ್ಷಣಿಕ ಕೆಲಸಗಳಿಂದ ‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಪಠ್ಯಪುಸ್ತಕ ಲೇಖಕರ ನಿಷೇಧಕ್ಕೆ ಸುಪ್ರೀಂಕೋರ್ಟ್ ಸೂಚನೆ

11/03/2026 3:30 PM

BREAKING: ಕರ್ನಾಟಕ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಲಿಂಗರಾಜ್ ಪಾಟೀಲ್ ರಾಜೀನಾಮೆ

11/03/2026 3:21 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಕ್ರಿಸ್ ಮಸ್ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್ : 1000 ಹೆಚ್ಚುವರಿ ವಿಶೇಷ ‘KSRTC ಬಸ್’ ಸಂಚಾರದ ವ್ಯವಸ್ಥೆ
KARNATAKA

BIG NEWS : ಕ್ರಿಸ್ ಮಸ್ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್ : 1000 ಹೆಚ್ಚುವರಿ ವಿಶೇಷ ‘KSRTC ಬಸ್’ ಸಂಚಾರದ ವ್ಯವಸ್ಥೆ

By kannadanewsnow5720/12/2025 6:54 AM

ಬೆಂಗಳೂರು: ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ಕರಾರಸಾ ನಿಗಮದಿಂದ 1000 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಆ ಮೂಲಕ ಕ್ರಿಸ್ ಮಸ್ ಹಬ್ಬಕ್ಕೆ ಊರಿಗೆ ಹೊರಟವರಿಗೆ ಕೆ ಎಸ್ ಆರ್ ಟಿ ಸಿ ಗುಡ್ ನ್ಯೂಸ್ ನೀಡಿದೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕೆ ಎಸ್ ಆರ್ ಟಿ ಸಿ ಮಾಹಿತಿ ನೀಡಿದ್ದು, ದಿನಾಂಕ:25.12.2025 ರಂದು ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ಕರಾರಸಾ ನಿಗಮವು, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ:19.12.2025, 20.12.2025 ಹಾಗೂ 24.12.2025 ರಂದು ಬೆಂಗಳೂರಿನಿಂದ ಈ ಕೆಳಕಂಡ ಸ್ಥಳಗಳಿಗೆ 1000 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿರುತ್ತದೆ. ನಂತರ ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ದಿನಾಂಕ: 26.12.2025 ಹಾಗೂ 28.12.2025 ರಂದು ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು ಎಂದಿದೆ.

ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗೀರ್, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಕಾರ್ಯಾಚರಣೆ ಮಾಡಲಿದೆ ಎಂದು ಹೇಳಿದೆ.

ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಕಾರ್ಯಾಚರಣೆ ಮಾಡಲಿದೆ ಎಂದಿದೆ.

ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯವನ್ನು ಕಲ್ಪಿಸಲಾಗಿದೆ. ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್‌ಅಪ್ ಪಾಯಿಂಟ್‌ನ ಹೆಸರನ್ನು ಗಮನಿಸುವಂತೆ ಕೋರಲಾಗಿದೆ.

ಇ-ಟಿಕೇಟ್ ಬುಕಿಂಗ್‌ನ್ನು www.ksrtc.karnataka.gov.in ವೆಬ್ ಸೈಟ್ ಮುಖಾಂತರ ಮಾಡಬಹುದಾಗಿದೆ. ಸಾರ್ವಜನಿಕ ಪ್ರಯಾಣಿಕರು ಕರ್ನಾಟಕ ಹಾಗೂ ಅಂತರರಾಜ್ಯದಲ್ಲಿ ಇರುವ ಗಣಕೀಕೃತ ಬುಕಿಂಗ್ ಕೌಂಟರ್‌ಗಳ ಮೂಲಕ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದೆ ಎಂದು ಹೇಳಿದೆ.

ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೇಟು ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ & ಬರುವ ಪ್ರಯಾಣದ ಟಿಕೇಟ್‌ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುವುದು ಎಂಬುದಾಗಿ ತಿಳಿಸಿದೆ.

ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟç ಹಾಗೂ ಪುದುಚೆರಿಯಲ್ಲಿ ಇರುವ ಪ್ರಮುಖ ನಗರಗಳಲ್ಲಿ ನಿಗಮದ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್‌ಗಳು ಇದ್ದು, ಇವುಗಳ ಮೂಲಕ ಸಹ ಮುಂಗಡವಾಗಿ ಆಸನಗಳನ್ನು ನಿಗಮದ ಸಾರಿಗೆಗಳಿಗೆ ಕಾಯ್ದಿರಿಸಬಹುದಾಗಿದೆ ಎಂದು ಮಾಹಿತಿ ನೀಡಿದೆ.

ಕಾರ್ಯಾಚರಣೆ ಮಾಡಲಾಗುವ ಹೆಚ್ಚುವರಿ ಸಾರಿಗೆಗಳು, ಅವುಗಳು ಹೊರಡುವ ಸ್ಥಳ ಹಾಗೂ ವೇಳಾ ವಿವರಗಳನ್ನು ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಅಂತರ್‌ಜಾಲ ವ್ಯವಸ್ಥೆಯಲ್ಲಿ ಹಾಗೂ ಕರಾರಸಾ ನಿಗಮದ ವೆಬ್‌ಸೈಟ್‌ನಲ್ಲಿ ಸಾರ್ವಜನಿಕ ಮಾಹಿತಿಗಾಗಿ ಒದಗಿಸಲಾಗಿದೆ ಹಾಗೂ ಸದರಿ ಹೆಚ್ಚುವರಿ ಸಾರಿಗೆಗಳಲ್ಲಿ ಸಂಚರಿಸುವ ಪ್ರಯಾಣಿಕರು ಕಾಯ್ದಿರಿಸುವ ಮುಂಗಡ ಚೀಟಿಗಳಲ್ಲೂ ಕೂಡ ವಾಹನ ಹೊರಡುವ ಸ್ಥಳದ ವಿವರ ನಮೂದಿಸಲಾಗಿದೆ ಎಂದಿದೆ.

ಅಲ್ಲದೇ, ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲ್ಲೂಕು/ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು ಎಂದು ಕೆ ಎಸ್ ಆರ್ ಟಿ ಸಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ವರದಿ; ವಸಂತ ಬಿ ಈಶ್ವರಗೆರೆ.. ಸಂಪಾದಕರು…

BIG NEWS: Good news for those going home for Christmas: 1000 additional special ‘KSRTC bus’ to be operated
Share. Facebook Twitter LinkedIn WhatsApp Email

Related Posts

ಕೆಇಎ ಪರೀಕ್ಷಾ ವ್ಯವಸ್ಥೆ ಅಧ್ಯಯನಕ್ಕೆ ಬಂದ ಕೇಂದ್ರ ಸರ್ಕಾರದ ನಿಯೋಗ

11/03/2026 3:31 PM1 Min Read

BREAKING: ಕರ್ನಾಟಕ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಲಿಂಗರಾಜ್ ಪಾಟೀಲ್ ರಾಜೀನಾಮೆ

11/03/2026 3:21 PM1 Min Read

ಗ್ರಾಹಕರಿಗೆ ಸಿಲಿಂಡರ್ ನೀಡಲ್ಲ ಎನ್ನುವ ವಿತರಕರ ವಿರುದ್ಧ ಕ್ರಮ : ಸಚಿವ ಕೆ.ಎಚ್ ಮುನಿಯಪ್ಪ ಎಚ್ಚರಿಕೆ!

11/03/2026 3:21 PM1 Min Read
Recent News

ಕೆಇಎ ಪರೀಕ್ಷಾ ವ್ಯವಸ್ಥೆ ಅಧ್ಯಯನಕ್ಕೆ ಬಂದ ಕೇಂದ್ರ ಸರ್ಕಾರದ ನಿಯೋಗ

11/03/2026 3:31 PM

BREAKING : ಶೈಕ್ಷಣಿಕ ಕೆಲಸಗಳಿಂದ ‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಪಠ್ಯಪುಸ್ತಕ ಲೇಖಕರ ನಿಷೇಧಕ್ಕೆ ಸುಪ್ರೀಂಕೋರ್ಟ್ ಸೂಚನೆ

11/03/2026 3:30 PM

BREAKING: ಕರ್ನಾಟಕ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಲಿಂಗರಾಜ್ ಪಾಟೀಲ್ ರಾಜೀನಾಮೆ

11/03/2026 3:21 PM

ಗ್ರಾಹಕರಿಗೆ ಸಿಲಿಂಡರ್ ನೀಡಲ್ಲ ಎನ್ನುವ ವಿತರಕರ ವಿರುದ್ಧ ಕ್ರಮ : ಸಚಿವ ಕೆ.ಎಚ್ ಮುನಿಯಪ್ಪ ಎಚ್ಚರಿಕೆ!

11/03/2026 3:21 PM
State News
KARNATAKA

ಕೆಇಎ ಪರೀಕ್ಷಾ ವ್ಯವಸ್ಥೆ ಅಧ್ಯಯನಕ್ಕೆ ಬಂದ ಕೇಂದ್ರ ಸರ್ಕಾರದ ನಿಯೋಗ

By kannadanewsnow0911/03/2026 3:31 PM KARNATAKA 1 Min Read

ಬೆಂಗಳೂರು: ವೆಬ್ ಕಾಸ್ಟಿಂಗ್ ಹಾಗೂ ಮುಖ ಚಹರೆ ಪತ್ತೆ ತಂತ್ರಜ್ಞಾನ ಬಳಸಿಕೊಂಡು ಅತ್ಯಂತ ಪಾರದರ್ಶಕವಾಗಿ ವಿವಿಧ ಪರೀಕ್ಷೆಗಳನ್ನು ನಡೆಸುತ್ತಿರುವ ಕರ್ನಾಟಕ ಪರೀಕ್ಷಾ…

BREAKING: ಕರ್ನಾಟಕ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಲಿಂಗರಾಜ್ ಪಾಟೀಲ್ ರಾಜೀನಾಮೆ

11/03/2026 3:21 PM

ಗ್ರಾಹಕರಿಗೆ ಸಿಲಿಂಡರ್ ನೀಡಲ್ಲ ಎನ್ನುವ ವಿತರಕರ ವಿರುದ್ಧ ಕ್ರಮ : ಸಚಿವ ಕೆ.ಎಚ್ ಮುನಿಯಪ್ಪ ಎಚ್ಚರಿಕೆ!

11/03/2026 3:21 PM

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಭರ್ಜರಿ ಬೇಟೆ: 1.57 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಜಪ್ತಿ

11/03/2026 3:16 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.