Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ರಾಜ್ಯದಲ್ಲೇ ಕಲ್ಬುರ್ಗಿಯಲ್ಲಿ ಅತಿ ಹೆಚ್ಚು ತಾಪಮಾನ ದಾಖಲು : 45 ಡಿಗ್ರಿ ಉಷ್ಣಾಂಶ ದಾಖಲು, ಆರೇಂಜ್ ಅಲರ್ಟ್ ಘೋಷಣೆ!

15/04/2026 3:54 PM

SHOCKING: ರಾಜ್ಯದಲ್ಲೊಂದು ಬೆಚ್ಚಿ ಬೀಳಿಸೋ ಘಟನೆ: ಪ್ರೀತಿಸಿದವನ ಜೊತೆ ಹೋದ ಮಹಿಳೆಗೆ ವಿಷ ಕುಡಿಸಿ ಕೊಂದ ಪೋಷಕರು

15/04/2026 3:34 PM

ನಾನೇನು ಕೇರಳಕ್ಕೆ ಮೋಜು-ಮಸ್ತಿ ಮಾಡಲು ಹೋಗಿದ್ನಾ? : ಸಚಿವ ಸ್ಥಾನ ಕೈ ತಪ್ಪುವ ಭೀತಿಯಲ್ಲಿ ಜಮೀರ್ ಅಹ್ಮದ್ ಖಾನ್!

15/04/2026 3:15 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : `ಯುವನಿಧಿ’ ಫಲಾನುಭವಿಗಳಿಗೆ ಗುಡ್ ನ್ಯೂಸ್ : 1.74 ಲಕ್ಷ ಅಭ್ಯರ್ಥಿಗಳ ಖಾತೆಗೆ ಹಣ ಜಮೆ.!
KARNATAKA

BIG NEWS : `ಯುವನಿಧಿ’ ಫಲಾನುಭವಿಗಳಿಗೆ ಗುಡ್ ನ್ಯೂಸ್ : 1.74 ಲಕ್ಷ ಅಭ್ಯರ್ಥಿಗಳ ಖಾತೆಗೆ ಹಣ ಜಮೆ.!

By kannadanewsnow5718/03/2025 5:43 AM

ಬೆಂಗಳೂರು : ಯುವನಿಧಿ ಯೋಜನೆಯಡಿ ಈ ವರ್ಷದ ಮಾ.10ರವರೆಗೆ 2,62,207 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದು, ಈ ಪೈಕಿ ಜನವರಿ ಅಂತ್ಯಕ್ಕೆ 1,74,170 ಫಲಾನುಭವಿಗಳಿಗೆ ನಿರುದ್ಯೋಗ ಭತ್ಯೆಯನ್ನು ನೇರನಗದುವರ್ಗಾವಣೆ ಮೂಲಕ ಪಾವತಿಸಲಾಗಿದೆ. ಉಳಿದ ಅರ್ಜಿಗಳ ಭೌತಿಕ ಪರಿಶೀ ಲನೆಯ ನಂತರ ಭತ್ಯೆ ನೀಡಲಾಗುವುದು ಎಂದು ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್ ತಿಳಿಸಿದರು.

ಬಿಜೆಪಿಯ ಡಿ.ಎಸ್. ಅರುಣ್‌ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಪದವಿ ಹಾಗೂ ಡಿಪ್ಲೊಮಾಪಡೆದತಕ್ಷಣಯೋಜನೆಗೆನೋಂದಣಿ ಮಾಡಿಕೊಳ್ಳ ಬಹುದು. ಎಲ್ಲವೂ ಆನ್‌ಲೈನ್‌ ಮೂಲಕ ಪರಿಶೀಲನೆಗೆ ಒಳ ಪಡುತ್ತದೆ. ನೋಂದಣಿಯಾದ ಆರು ತಿಂಗಳವರೆಗೆ ಯಾವುದೇ ಉದ್ಯೋಗ ದೊರೆಯದಿದ್ದಾಗ ಮಾತ್ರ ಅವರು ನಿರುದ್ಯೋಗ ಭತ್ಯೆ ಪಡೆಯಲು ಅರ್ಹರಾಗುತ್ತಾರೆ. ಈ ರೀತಿ ಅರ್ಜಿ ಹಾಕಿದವರ ಸಂಖ್ಯೆ 49,727 ಇದೆ ಎಂದರು.

ಕೆಲವು ತಾಂತ್ರಿಕ ಕಾರಣಗಳಿಂದ ಯುವನಿಧಿ ಯೋಜನೆಯಡಿ ನೀಡಲಾಗುತ್ತಿರುವ ಆರ್ಥಿಕ ನೆರವು ವಿಳಂಬವಾಗಿರಬಹುದು. ಹಾಗೆಂದು ಇದನ್ನು ಸ್ಥಗಿತ ಮಾಡುತ್ತೇವೆ ಎಂದು ಯಾರೂ ಭಾವಿಸಬೇಕಾಗಿಲ್ಲ. ಅನುದಾನದ ಕೊರತೆಯೂ ಇಲ್ಲ. ನಿಯಮಗಳ ಅನುಸಾರವಾಗಿ ನೀಡಬೇಕು ಎಂದು ಸ್ಪಷ್ಟಪಡಿಸಿದರು.

ಯುವನಿಧಿಗೆ ಇಂತಿಷ್ಟೇ ಎಂದು ಟಾರ್ಗೆಟ್ ಮಾಡಿಕೊಂಡಿಲ್ಲ, ಇದು ಅನ್ ಲಿಮಿಟೆಡ್, ತಿಂಗಳಿನಿಂದ ತಿಂಗಳು, ವರ್ಷದಿಂದ ವರ್ಷಕ್ಕೆ ಫಲಾನುಭವಿಗಳ ಸಂಖ್ಯೆ ಹೆಚ್ಚಾಗುತ್ತದೆ. ಮುಂದಿನ ವರ್ಷ 5 ಲಕ್ಷವಾಗಬಹುದು. ನಂತರ 10 ಲಕ್ಷ ತಲುಪುವ ಸಾಧ್ಯತೆಯೂ ಇದೆ. ಪ್ರತಿ ವರ್ಷ ವಿದ್ಯಾರ್ಥಿಗಳು ಸಾವಿರಾರು ಸಂಖ್ಯೆಯಲ್ಲಿ ಪದವಿ ಮತ್ತು ಡಿಪ್ಲೊಮಾ ಪೂರ್ಣಗೊಳಿಸಿ ಬರುತ್ತಾರೆ ಸಚಿವರು ತಿಳಿಸಿದರು.

ಪದವಿ ಡಿಪ್ಲೊಮಾ ಪೂರ್ಣಗೊಳಿಸಿದ ವಿದ್ಯಾರ್ಥಿಗಳು ಈ ಯೋಜನೆಯಡಿ ಆರ್ಥಿಕ ನೆರವು ಪಡೆಯಬೇಕಾದರೆ ಮೊದಲು ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಬೇಕು. ಇದಕ್ಕಾಗಿ ಇಲಾಖೆಗೆ ಸೇವಾ ಸಿಂಧು ಪೋರ್ಟಲ್ ಸೃಜನೆ ಮಾಡಿದೆ. ಇಲ್ಲಿವರೆಗೆ 1,74,181 ವಿದ್ಯಾರ್ಥಿಗಳು ಇದರ ನೆರವು ಪಡೆದಿದ್ದಾರೆ ಎಂದು ಡಾ. ಪಾಟೀಲ್ ವಿವರಿಸಿದರು.

ಹೆಸರು ನೋಂದಣಿ ಮಾಡಿದ ಮೇಲೆ ಅಭ್ಯರ್ಥಿಗಳು 181 ದಿನ ಕಾಯಬೇಕಾಗುತ್ತದೆ. ಈ ಕೆಟಗಿರಿಯಲ್ಲಿ 49 ಸಾವಿರ ಜನರಿದ್ದಾರೆ. ಹೆಚ್ಚಿನ ವಿದ್ಯಾಭ್ಯಾಸ ಅಥವಾ ಉದ್ಯೋಗಕ್ಕೆ ಸೇರಿದರೆ ಇದರ ನೆರವು ಸಿಗುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

ಪದವಿ ಹಾಗೂ ಡಿಪ್ಲೊಮಾ ಪೂರ್ಣಗೊಳಿಸಿದ ತಕ್ಷಣವೇ ಅರ್ಹರಿಗೆ ಇದು ಅನ್ವಯವಾಗುತ್ತದೆ. ಹೆಸರು ನೋಂದಾಯಿಸಿಕೊಂಡು ಪೋರ್ಟಲ್‌ ನಲ್ಲಿ ಅರ್ಜಿ ಹಾಕಿದರೆ ನೋಂದಣಿಯಾಗುತ್ತದೆ. ಇದಕ್ಕೆ ಯಾರ ಸಹಾಯವೂ ಬೇಕಾಗಿಲ್ಲ, ಇಲಾಖೆಯು ಎಲ್ಲಾ ರೀತಿಯ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ ಎಂದು ಹೇಳಿದರು.

ಗ್ರಾಮೀಣ ಪ್ರದೇಶದ ಯುವಕರಿಗೆ ಮಾಹಿತಿ ಕೊಡಲು ಅಗತ್ಯವಾದ ವ್ಯವಸ್ಥೆ ಮಾಡಿದ್ದೇವೆ. ಕೆಲವು ಸಣ್ಣಪುಟ್ಟ ತಾಂತ್ರಿಕ ತೊಂದರೆಗಳು ಎದುರಾಗಬಹುದು ವಿದ್ಯಾರ್ಥಿಗಳು ಗಾಬರಿಪಡದೆ ಸರ್ಕಾರ ಸವಲತ್ತು ಪಡೆಯಲು ಮುಂದಾಗಬೇಕೆಂದು ಸಚಿವರು ಮನವಿ ಮಾಡಿದರು.

BIG NEWS: Good news for `Yuvanidhi' beneficiaries: Money deposited in the accounts of 1.74 lakh candidates!
Share. Facebook Twitter LinkedIn WhatsApp Email

Related Posts

BREAKING : ರಾಜ್ಯದಲ್ಲೇ ಕಲ್ಬುರ್ಗಿಯಲ್ಲಿ ಅತಿ ಹೆಚ್ಚು ತಾಪಮಾನ ದಾಖಲು : 45 ಡಿಗ್ರಿ ಉಷ್ಣಾಂಶ ದಾಖಲು, ಆರೇಂಜ್ ಅಲರ್ಟ್ ಘೋಷಣೆ!

15/04/2026 3:54 PM1 Min Read

SHOCKING: ರಾಜ್ಯದಲ್ಲೊಂದು ಬೆಚ್ಚಿ ಬೀಳಿಸೋ ಘಟನೆ: ಪ್ರೀತಿಸಿದವನ ಜೊತೆ ಹೋದ ಮಹಿಳೆಗೆ ವಿಷ ಕುಡಿಸಿ ಕೊಂದ ಪೋಷಕರು

15/04/2026 3:34 PM1 Min Read

ನಾನೇನು ಕೇರಳಕ್ಕೆ ಮೋಜು-ಮಸ್ತಿ ಮಾಡಲು ಹೋಗಿದ್ನಾ? : ಸಚಿವ ಸ್ಥಾನ ಕೈ ತಪ್ಪುವ ಭೀತಿಯಲ್ಲಿ ಜಮೀರ್ ಅಹ್ಮದ್ ಖಾನ್!

15/04/2026 3:15 PM2 Mins Read
Recent News

BREAKING : ರಾಜ್ಯದಲ್ಲೇ ಕಲ್ಬುರ್ಗಿಯಲ್ಲಿ ಅತಿ ಹೆಚ್ಚು ತಾಪಮಾನ ದಾಖಲು : 45 ಡಿಗ್ರಿ ಉಷ್ಣಾಂಶ ದಾಖಲು, ಆರೇಂಜ್ ಅಲರ್ಟ್ ಘೋಷಣೆ!

15/04/2026 3:54 PM

SHOCKING: ರಾಜ್ಯದಲ್ಲೊಂದು ಬೆಚ್ಚಿ ಬೀಳಿಸೋ ಘಟನೆ: ಪ್ರೀತಿಸಿದವನ ಜೊತೆ ಹೋದ ಮಹಿಳೆಗೆ ವಿಷ ಕುಡಿಸಿ ಕೊಂದ ಪೋಷಕರು

15/04/2026 3:34 PM

ನಾನೇನು ಕೇರಳಕ್ಕೆ ಮೋಜು-ಮಸ್ತಿ ಮಾಡಲು ಹೋಗಿದ್ನಾ? : ಸಚಿವ ಸ್ಥಾನ ಕೈ ತಪ್ಪುವ ಭೀತಿಯಲ್ಲಿ ಜಮೀರ್ ಅಹ್ಮದ್ ಖಾನ್!

15/04/2026 3:15 PM

BIG NEWS : ಮುಂದಿನ ಟಾರ್ಗೆಟ್ ನಾನೇ ಎಂದು ಹೇಳುತ್ತಿದ್ದಾರೆ : ಸಚಿವ ಜಮೀರ್ ಅಹ್ಮದ್ ಖಾನ್ ಅಸಮಾಧಾನ!

15/04/2026 3:08 PM
State News
KARNATAKA

BREAKING : ರಾಜ್ಯದಲ್ಲೇ ಕಲ್ಬುರ್ಗಿಯಲ್ಲಿ ಅತಿ ಹೆಚ್ಚು ತಾಪಮಾನ ದಾಖಲು : 45 ಡಿಗ್ರಿ ಉಷ್ಣಾಂಶ ದಾಖಲು, ಆರೇಂಜ್ ಅಲರ್ಟ್ ಘೋಷಣೆ!

By kannadanewsnow0515/04/2026 3:54 PM KARNATAKA 1 Min Read

ಕಲಬುರಗಿ : ಇಂದು ರಾಜ್ಯದಲ್ಲಿಯೇ ಅತಿ ಹೆಚ್ಚು ತಾಪಮಾನ ಕಲಬುರ್ಗಿ ಜಿಲ್ಲೆಯ ಒಂದರಲ್ಲಿ ದಾಖಲಾಗಿದೆ. ಕಲ್ಬುರ್ಗಿ ಜಿಲ್ಲೆಯ ನಾಲ್ಕು ತಾಲೂಕಿನಲ್ಲಿ…

SHOCKING: ರಾಜ್ಯದಲ್ಲೊಂದು ಬೆಚ್ಚಿ ಬೀಳಿಸೋ ಘಟನೆ: ಪ್ರೀತಿಸಿದವನ ಜೊತೆ ಹೋದ ಮಹಿಳೆಗೆ ವಿಷ ಕುಡಿಸಿ ಕೊಂದ ಪೋಷಕರು

15/04/2026 3:34 PM

ನಾನೇನು ಕೇರಳಕ್ಕೆ ಮೋಜು-ಮಸ್ತಿ ಮಾಡಲು ಹೋಗಿದ್ನಾ? : ಸಚಿವ ಸ್ಥಾನ ಕೈ ತಪ್ಪುವ ಭೀತಿಯಲ್ಲಿ ಜಮೀರ್ ಅಹ್ಮದ್ ಖಾನ್!

15/04/2026 3:15 PM

BIG NEWS : ಮುಂದಿನ ಟಾರ್ಗೆಟ್ ನಾನೇ ಎಂದು ಹೇಳುತ್ತಿದ್ದಾರೆ : ಸಚಿವ ಜಮೀರ್ ಅಹ್ಮದ್ ಖಾನ್ ಅಸಮಾಧಾನ!

15/04/2026 3:08 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.