ಹಾವೇರಿ : ಪ್ರಿಯತಮನಿಂದಲೇ ಹತ್ಯೆಗೀಡಾದ ರಟ್ಟಿಹಳ್ಳಿ ತಾಲೂಕಿನ ಮಾಸೂರು ಗ್ರಾಮದ ಸ್ವಾತಿ ಬ್ಯಾಡಗಿ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ.
ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಮಾಹಿತಿ ನೀಡಿದ್ದು, ಮಾಸೂರು ಗ್ರಾಮದ ಸ್ವಾತಿ ಬ್ಯಾಡಗಿ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಬುಧವಾರ ಬೆಂಗಳೂರಿನಲ್ಲಿ ಕ್ಷೇತ್ರದ ಶಾಸಕ ಯು.ಬಿ.ಬಣಕಾರ್‌ಅವ ರೊಂದಿಗೆ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿ, ಸ್ವಾತಿ ಹತ್ಯೆ ಪ್ರಕರಣ ವಿವರಿಸಿ ಪರಿಹಾರ ಬಿಡುಗಡೆ ಮಾಡಲು ಮನವಿ ಮಾಡಲಾಯಿತು. ನಮ್ಮ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಯವರು 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ ಎಂದು ಸಚಿವರು ಹೇಳಿದ್ದಾರೆ.