ಬೆಂಗಳೂರು : ಎನ್‌ಪಿಎಸ್ ಕೈ ಬಿಟ್ಟು ಓಪಿಎಸ್ ಮರು ಜಾರಿಗೆ ಆಗ್ರಹಿಸಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ರಾಜ್ಯ ಸರ್ಕಾರಿ ನೌಕರರು ಪ್ರತಿಭಟನೆ ನಡೆಸುತ್ತಿದ್ದು, ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಇಂದು ಸರ್ಕಾರಿ ನೌಕರರು ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ. ರಾಜ್ಯ ಎನ್‌ಪಿಎಸ್ ನೌಕರರ ಸಂಘದ ಅಧ್ಯಕ್ಷ ಶಾಂತಾರಾಮ್ ಉಪವಾಸ ಸತ್ಯಾಗ್ರಹದ ಕುರಿತು ಮಾಹಿತಿ ನೀಡಿದರು.
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಇಂದು ಸರ್ಕಾರಿ ನೌಕರರ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಸಂಘದ ಅಧ್ಯಕ್ಷ ಶಾಂತರಾಮ್ ಈ ಕುರಿತು ಮಾಹಿತಿ ನೀಡಿದ್ದು, 2020-21 ನೇ ಸಾಲಿನ ಎನ್‌ಪಿಎಸ್ ರದ್ದುಪಡಿಸಿ, ಒಪಿಎಸ್ ಜಾರಿ ಮಾಡುವಂತೆ ಆಗ್ರಹಿಸಿದ್ದೆವು. ಸಿಎಂ, ಡಿ ಸಿ ಎಂ, ಗೃಹಮಂತ್ರಿ ಅವರನ್ನು ಭೇಟಿಯಾಗಿದ್ದಾಗ ಬೇಡಿಕೆ ಈಡೇರಿಸುವ ಭರವಸೆಯನ್ನು ನೀಡಿದ್ದರು. ಆದರೆ ರಾಜ್ಯ ಸರ್ಕಾರ ಕೊಟ್ಟ ಭಾಷೆಯನ್ನು ಈಡೇರಿಸುವ ಕೆಲಸ ಇದುವರೆಗೂ ಮಾಡಿಲ್ಲ.
ನಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಇಂದು 1 ದಿನ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದೇವೆ. ಓಪಿಎಸ್ ಜಾರಿ 6ನೇ ಗ್ಯಾರಂಟಿ ಎಂದು ಪರಿಗಣಿಸಿ ಸರ್ಕಾರ ಜಾರಿಗೆ ಮಾಡಬೇಕು. ನಮ್ಮ ಓಪಿಎಸ್ ಬೇಡಿಕೆ ಈಡೇರಿಸುವಂತೆ ಸರ್ಕಾರಕ್ಕೆ ಮನವಿ ಮಾಡುತ್ತಿದ್ದೇವೆ. ನಮ್ಮದು ಬದುಕಿನ ಹೋರಾಟ ಹಾಗಾಗಿ ಇಂದು ರಜೆ ಹಾಕಿ ಹೋರಾಟ ಮಾಡುತ್ತಿದ್ದೇವೆ ಒಂದು ದಿನ ಉಪವಾಸ ಸತ್ಯಾಗ್ರಹ ಮಾಡಿ ಸರ್ಕಾರದ ಗಮನ ಸೆಳೆಯುತ್ತೇವೆ ಎಂದು ರಾಜ್ಯ ಎನ್‌ಪಿಎಸ್ ನೌಕರರ ಸಂಘದ ಅಧ್ಯಕ್ಷ ಶಾಂತರಾಮ್ ಮಾಹಿತಿ ನೀಡಿದರು.