ನವದೆಹಲಿ : ಹಳೆಯ ಪಿಂಚಣಿಯ ಜಾರಿ ನಿರೀಕ್ಷೆಯಲ್ಲಿರುವ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರಶಾಕ್ ನೀಡಿದ್ದು, ಹೊಸ ಪಿಂಚಣಿಯನ್ನೇ ಮುಂದುವರೆಸಲು ಹೊಸ ಪಿಂಚಣಿ ಯೋಜನೆ (ಎನ್ಪಿಎಸ್)ಗೆ ಸಂಬಂಧಿಸಿದ ರ ಸಮಸ್ಯೆಗಳಿಗೆ ಪರಿಹಾರವನ್ನು ಹುಡುಕಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಎನ್ಪಿಎಸ್ ಬದಲಿಗೆ ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಮರುಜಾರಿಗೆ ತರಬೇಕು ಎಂದು ದೇಶಾದ್ಯಂತ ಸರ್ಕಾರಿ ನೌಕರರು ಹೋರಾಟ ನಡೆಸುತ್ತಿದ್ದಾರೆ. ಬಜೆಟ್ ನಲ್ಲಿ ಹೊಸ ಪಿಂಚಣಿ ಸಮಸ್ಯೆಗೆ ಪರಿಹಾರ ಹುಡುಕಲಾಗುವುದು ಎಂದು ಭರವಸೆ ನೀಡಲಾಗಿದೆ.
ಒಪಿಎಸ್ ಯೋಜನೆಯಡಿ ಸರ್ಕಾರಿ ನೌಕರರಿಗೆ ತಮ್ಮ ಕೊನೆಯ ಸಂಬಳದ ಅರ್ಧದಷ್ಟು ಮೊತ್ತ ಪಿಂಚಣಿ ರೂಪದಲ್ಲಿ ಸಿಗುತ್ತಿತ್ತು. ಸರ್ಕಾರ ತುಟ್ಟಿ ಭತ್ಯೆ (ಡಿಎ) ಹೆಚ್ಚಳ ಮಾಡಿದಾಗ ಆ ಪಿಂಚಣಿ ಮೊತ್ತವೂ ಏರಿಕೆಯಾಗುತ್ತಿತ್ತು.