Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಲೈಂಗಿಕ ಜೀವನದಲ್ಲಿನ ಬದಲಾವಣೆಗಳು ಮೆದುಳಿನ ಗೆಡ್ಡೆಯ (Brain Tumor) ಆರಂಭಿಕ ಲಕ್ಷಣಗಳೇ?

GOOD NEWS: 3,395 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಮೆಡಿಕಲ್ ಕಾಲೇಜು, ಸ್ಥಳೀಯರಿಗೆ ಉದ್ಯೋಗ, ಸರ್ವರಿಗೂ ಸೂರು, ಕೆಪಿಎಸ್ ಶಾಲೆಗಳು, ಸಮಸ್ಯೆ ಆಲಿಸಲು ಅಧಿಕಾರಿ ನೇಮಕ; ಸಿಎಂ ಡಿ.ಕೆ.ಶಿವಕುಮಾರ್

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದಲ್ಲಿ ಶೇ 15%ಕ್ಕೆ ಸೀಮಿತಗೊಳಿಸಿ `ಒಳ ಮೀಸಲಾತಿ’ ಜಾರಿಗೆ ಸರ್ಕಾರ ಆದೇಶ.!
KARNATAKA

BIG NEWS : ರಾಜ್ಯದಲ್ಲಿ ಶೇ 15%ಕ್ಕೆ ಸೀಮಿತಗೊಳಿಸಿ `ಒಳ ಮೀಸಲಾತಿ’ ಜಾರಿಗೆ ಸರ್ಕಾರ ಆದೇಶ.!

By kannadanewsnow57

ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿಗಳ (SC) ದಶಕಗಳ ಬೇಡಿಕೆಯಾದ ‘ಒಳ ಮೀಸಲಾತಿ’ಯನ್ನು ಜಾರಿಗೊಳಿಸಿ ಕರ್ನಾಟಕ ಸರ್ಕಾರ ಬುಧವಾರ ಅಧಿಕೃತ ಆದೇಶ ಹೊರಡಿಸಿದೆ. ಸುಪ್ರೀಂ ಕೋರ್ಟ್ ನೀಡಿದ್ದ ಮಧ್ಯಂತರ ಆದೇಶ ಹಾಗೂ ಸಚಿವ ಸಂಪುಟದ ತೀರ್ಮಾನದ ಹಿನ್ನೆಲೆಯಲ್ಲಿ ಈ ಐತಿಹಾಸಿಕ ಕ್ರಮ ಕೈಗೊಳ್ಳಲಾಗಿದೆ.

ಮೀಸಲಾತಿ ಹಂಚಿಕೆ: ಪರಿಶಿಷ್ಟ ಜಾತಿಗೆ ನಿಗದಿಪಡಿಸಲಾದ ಶೇ. 15ರಷ್ಟು ಮೀಸಲಾತಿಯಲ್ಲಿ ವರ್ಗವಾರು ಹಂಚಿಕೆ ಮಾಡಲಾಗಿದೆ.

ಪೃವರ್ಗ-ಎ: ಶೇ. 5.25

ಪೃವರ್ಗ-ಬಿ: ಶೇ. 5.25

ಪೃವರ್ಗ-ಸಿ: ಶೇ. 4.50

ಅತೀ ಹಿಂದುಳಿದವರಿಗೆ ಆದ್ಯತೆ: ಪೃವರ್ಗ ‘ಸಿ’ ಅಡಿಯಲ್ಲಿ ಲಭ್ಯವಿರುವ ಹುದ್ದೆಗಳಲ್ಲಿ ಶೇ. 20ರಷ್ಟು ಸೀಟುಗಳನ್ನು ಪರಿಶಿಷ್ಟ ಜಾತಿಯಲ್ಲಿನ 59 ಅತ್ಯಂತ ಹಿಂದುಳಿದ ಜಾತಿಗಳಿಗೆ ಮೀಸಲಿರಿಸಲು ನಿರ್ಧರಿಸಲಾಗಿದೆ. ಒಂದು ವೇಳೆ ಈ ಗುಂಪಿನ ಅಭ್ಯರ್ಥಿಗಳು ಲಭ್ಯವಾಗದಿದ್ದರೆ ಮಾತ್ರ ಆ ಹುದ್ದೆಗಳನ್ನು ಪೃವರ್ಗ ‘ಸಿ’ಯ ಇತರ ಜಾತಿಗಳಿಗೆ ನೀಡಲಾಗುವುದು.

ಹಳೆಯ ಅಧಿಸೂಚನೆಗಳ ರದ್ದು: ಒಳ ಮೀಸಲಾತಿ ಅಳವಡಿಸದೆ ಈಗಾಗಲೇ ಹೊರಡಿಸಲಾಗಿದ್ದ ಎಲ್ಲಾ ನೇಮಕಾತಿ ಅಧಿಸೂಚನೆಗಳನ್ನು ಹಿಂಪಡೆಯಲು ಸರ್ಕಾರ ಸೂಚಿಸಿದೆ. ಈಗ ಹೊಸ ಮೀಸಲಾತಿ ನಿಯಮದನ್ವಯ ಪರಿಷ್ಕೃತ ಅಧಿಸೂಚನೆಗಳನ್ನು ಕೂಡಲೇ ಹೊರಡಿಸಿ ನೇಮಕಾತಿ ಪ್ರಕ್ರಿಯೆ ಆರಂಭಿಸಲು ಆದೇಶಿಸಲಾಗಿದೆ.

ಸ್ಪರ್ಧಾತ್ಮಕ ಪರೀಕ್ಷೆ ನಡೆದಿದ್ದರೆ ವಿನಾಯಿತಿ: ಈಗಾಗಲೇ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆದಿರುವ ಅಧಿಸೂಚನೆಗಳಿಗೆ ಈ ಹೊಸ ಆದೇಶ ಅನ್ವಯಿಸುವುದಿಲ್ಲ. ಅವುಗಳನ್ನು ಹೊರತುಪಡಿಸಿ ಉಳಿದೆಲ್ಲಾ ನೇಮಕಾತಿಗಳಿಗೆ ಒಳ ಮೀಸಲಾತಿ ಕಡ್ಡಾಯ.

400 ಬಿಂದುಗಳ ರೋಸ್ಟರ್: ಒಳ ಮೀಸಲಾತಿಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಸಮಾಜ ಕಲ್ಯಾಣ ಇಲಾಖೆಯು 400 ಬಿಂದುಗಳ ಹೊಸ ರೋಸ್ಟರ್ ವ್ಯವಸ್ಥೆಯನ್ನು ಜಾರಿಗೆ ತರಲಿದೆ.

ಬೃಹತ್ ನೇಮಕಾತಿಗೆ ಚಾಲನೆ: ಹಣಕಾಸು ಇಲಾಖೆಯು ಈಗಾಗಲೇ ಅನುಮೋದನೆ ನೀಡಿರುವ ವಿವಿಧ ಇಲಾಖೆಗಳ ಒಟ್ಟು 56,432 ಹುದ್ದೆಗಳ ನೇರ ನೇಮಕಾತಿಗೆ ತಕ್ಷಣವೇ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಪ್ರಾಧಿಕಾರಗಳಿಗೆ ಸರ್ಕಾರ ನಿರ್ದೇಶನ ನೀಡಿದೆ.

ನ್ಯಾಯಾಲಯದ ತೀರ್ಪಿಗೆ ಒಳಪಟ್ಟು ಜಾರಿ:
ಈ ಒಳ ಮೀಸಲಾತಿ ಜಾರಿಯು ಸದ್ಯ ಮಾನ್ಯ ಉಚ್ಚ ನ್ಯಾಯಾಲಯದಲ್ಲಿರುವ ರಿಟ್ ಅರ್ಜಿಯ ಅಂತಿಮ ತೀರ್ಪಿಗೆ ಒಳಪಟ್ಟಿರುತ್ತದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ. ಸಚಿವ ಸಂಪುಟದ ಈ ನಿರ್ಧಾರವು ರಾಜ್ಯದ ಪರಿಶಿಷ್ಟ ಜಾತಿಯ ವಿವಿಧ ಉಪಜಾತಿಗಳ ನಡುವೆ ಸಮಾನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ದೊಡ್ಡ ಹೆಜ್ಜೆ ಎಂದು ವಿಶ್ಲೇಷಿಸಲಾಗುತ್ತಿದೆ.

BIG NEWS: Government orders implementation of 'internal reservation' limited to 15% in the state!
Share. Facebook Twitter LinkedIn WhatsApp Email

Related Posts

GOOD NEWS: 3,395 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

2 Mins Read

ಮೆಡಿಕಲ್ ಕಾಲೇಜು, ಸ್ಥಳೀಯರಿಗೆ ಉದ್ಯೋಗ, ಸರ್ವರಿಗೂ ಸೂರು, ಕೆಪಿಎಸ್ ಶಾಲೆಗಳು, ಸಮಸ್ಯೆ ಆಲಿಸಲು ಅಧಿಕಾರಿ ನೇಮಕ; ಸಿಎಂ ಡಿ.ಕೆ.ಶಿವಕುಮಾರ್

1 Min Read

‘ಬಿಜೆಪಿ, ಜೆಡಿಎಸ್’ನಿಂದ ಮತ್ತೊಬ್ಬ ಶಿವಕುಮಾರ್ ಹುಟ್ಟುಹಾಕಲು ಸಾಧ್ಯವಿಲ್ಲ: ಸಿಎಂ ಡಿಕೆಶಿ

1 Min Read
Recent News

ಲೈಂಗಿಕ ಜೀವನದಲ್ಲಿನ ಬದಲಾವಣೆಗಳು ಮೆದುಳಿನ ಗೆಡ್ಡೆಯ (Brain Tumor) ಆರಂಭಿಕ ಲಕ್ಷಣಗಳೇ?

GOOD NEWS: 3,395 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಮೆಡಿಕಲ್ ಕಾಲೇಜು, ಸ್ಥಳೀಯರಿಗೆ ಉದ್ಯೋಗ, ಸರ್ವರಿಗೂ ಸೂರು, ಕೆಪಿಎಸ್ ಶಾಲೆಗಳು, ಸಮಸ್ಯೆ ಆಲಿಸಲು ಅಧಿಕಾರಿ ನೇಮಕ; ಸಿಎಂ ಡಿ.ಕೆ.ಶಿವಕುಮಾರ್

​ಪಂದ್ಯದ ಒತ್ತಡಕ್ಕೆ ‘ಚೋಟಾ ಭೀಮ್’ ಮದ್ದು: ಯುವ ಕ್ರಿಕೆಟಿಗ ವೈಭವ್ ಸೂರ್ಯವಂಶಿಯ ವಿಶಿಷ್ಟ ಅಭ್ಯಾಸವನ್ನು ಬಹಿರಂಗಪಡಿಸಿದ ಹರ್ಷ ಗೋಯೆಂಕಾ!

State News
KARNATAKA

GOOD NEWS: 3,395 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಮಿಕ್ಕುಳಿದ (ಉಳಿದ ಮೂಲ) ವೃಂದದಲ್ಲಿನ ವಿವಿಧ ಜಿಲ್ಲಾ, ನಗರ ಹಾಗೂ ಘಟಕಗಳಲ್ಲಿ ಖಾಲಿ…

ಮೆಡಿಕಲ್ ಕಾಲೇಜು, ಸ್ಥಳೀಯರಿಗೆ ಉದ್ಯೋಗ, ಸರ್ವರಿಗೂ ಸೂರು, ಕೆಪಿಎಸ್ ಶಾಲೆಗಳು, ಸಮಸ್ಯೆ ಆಲಿಸಲು ಅಧಿಕಾರಿ ನೇಮಕ; ಸಿಎಂ ಡಿ.ಕೆ.ಶಿವಕುಮಾರ್

‘ಬಿಜೆಪಿ, ಜೆಡಿಎಸ್’ನಿಂದ ಮತ್ತೊಬ್ಬ ಶಿವಕುಮಾರ್ ಹುಟ್ಟುಹಾಕಲು ಸಾಧ್ಯವಿಲ್ಲ: ಸಿಎಂ ಡಿಕೆಶಿ

ರಾಜ್ಯದಲ್ಲಿ ರೌಡಿಸಂ ಮಟ್ಟಹಾಕಲು ಸರ್ಕಾರ ಬಿಗ್ ಆ್ಯಕ್ಷನ್: ಪ್ರತಿ ಠಾಣಾ ಮಟ್ಟದಲ್ಲೂ ‘ಆಂಟಿ ರೌಡಿ ಸ್ಕ್ವಾಡ್’ ರಚನೆಗೆ ಆದೇಶ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.