ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಅಪಘಾತ ಸಂಭವಿಸಿದ್ದು, ಟ್ರ್ಯಾಕ್ಟರ್ ಡಿಕ್ಕಿಯಾಗಿ ದ್ವಿಚಕ್ರ ವಾಹನ ದಲ್ಲಿ ತೆರಳುತ್ತಿದ್ದ ಶಿಕ್ಷಕಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ನಗರ ಆನೇಕಲ್ ಪಟ್ಟಣದಲ್ಲಿ ನಡೆದಿದೆ.
ಲಕ್ಷ್ಮಿಪುರ ಸರ್ಕಾರಿ ಶಾಲಾ ಶಿಕ್ಷಕಿ ಯೋಗೀಶ್ವರಿ (46) ಸಾವನ್ನಪ್ಪಿದ್ದಾರೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಟ್ರ್ಯಾಕ್ಟರ್ ಡಿಕ್ಕಿ ರಭಸಕ್ಕೆ ಕೆಳಗೆ ಬಿದ್ದು ಯೋಗೀಶ್ವರಿ ಸಾವನಪ್ಪಿದ್ದಾರೆ ಶಿಕ್ಷಕಿ ಯೋಗೀಶ್ವರಿ ಮೃತ ದೇಹ ಸರ್ಕಾರಿ ಆಸ್ಪತ್ರೆಗೆ ಶವಾಹಾರಕ್ಕೆ ರವಾನಿಸಲಾಗಿದೆ ಘಟನೆ ಸಂಭಂದ ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








