ಬೆಂಗಳೂರು : ವಿಧಾನಸಭೆಯಲ್ಲಿ ಬಿಜೆಪಿಯ 18 ಶಾಸಕರ ಅಮಾನತು ವಿಚಾರವಾಗಿ ವಿಧಾನಸಭೆಯ ಸ್ಪೀಕರ್ ಯುಟಿ ಖಾದರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ಅವರಿಗೆ ರಾಜ್ಯಪಾಲರು ಬಿಜೆಪಿ ಶಾಸಕರ ಅಮಾನತು ವಾಪಸ್ ತೆಗೆದುಕೊಳ್ಳುವ ಸಂಬಂಧ ಪತ್ರ ಬರೆದಿದ್ದಾರೆ.
ಹೌದು ಶಾಸಕರ ಅಮಾನತು ವಾಪಸ್ ಸಂಬಂಧ ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರು ಪತ್ರ ಬರೆದಿದ್ದಾರೆ. ಸ್ಪೀಕರ್ಗೆ ನಿರ್ದೇಶನ ನೀಡಲು ರಾಜ್ಯಪಾಲರಿಗೆ ಬಿಜೆಪಿ ಮನವಿ ಸಲ್ಲಿಸಿತ್ತು. ನಿನ್ನೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರಿಗೆ ಬಿಜೆಪಿ ನಿಯೋಗ ಮನವಿ ಸಲ್ಲಿಸಿತ್ತು. ಈಗ ಬಿಜೆಪಿ ನಿಯೋಗದ ಮನವಿಯ ಬೆನ್ನೆಲೆ ರಾಜ್ಯಪಾಲರು ಸೂಕ್ತ ಕ್ರಮ ಕೈಗೊಂಡು ಅಮಾನತು ವಾಪಸ್ ತೆಗೆದುಕೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಸ್ಪೀಕರ್ ಯುಟಿ ಖಾದರ್ ಹಾಗೂ ಎಚ್ ಕೆ ಪಾಟೀಲ್ ಅವರಿಗೆ ಪತ್ರ ಬರೆದಿದ್ದಾರೆ.