Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS : 80 ವರ್ಷ ಪೂರೈಸಿದ ರಾಜ್ಯ ನಿವೃತ್ತ ಸರ್ಕಾರಿ ನೌಕರರಿಗೆ ಹೆಚ್ಚುವರಿ `ಪಿಂಚಣಿ’ : ಸರ್ಕಾರದಿಂದ ಮಹತ್ವದ ಆದೇಶ.!

06/07/2025 10:00 AM
dhananjaya y.

BREAKING: ಬಂಗಲೆ ಕೂಡಲೇ ತೆರವುಗೊಳಿಸುವಂತೆ ಮಾಜಿ ಸಿಜೆಐ ಚಂದ್ರಚೂಡ್ ಗೆ ಸುಪ್ರೀಂ ಕೋರ್ಟ್ ಸೂಚನೆ

06/07/2025 9:59 AM

Big Updates: ಟೆಕ್ಸಾಸ್ ಪ್ರವಾಹ: ಸಾವಿನ ಸಂಖ್ಯೆ 51ಕ್ಕೆ ಏರಿಕೆ, ತೀವ್ರಗೊಂಡ ಕಾಣೆಯಾದ ಬಾಲಕಿಯರ ಹುಡುಕಾಟ

06/07/2025 9:53 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : `ಮೈಕ್ರೋ ಫೈನಾನ್ಸ್’ ಕಿರುಕುಳ ತಡೆಗೆ ಸರ್ಕಾರದಿಂದ ಮಹತ್ವದ ಕ್ರಮ : ಇನ್ಮುಂದೆ ಈ ನಿಯಮಗಳ ಪಾಲನೆ ಕಡ್ಡಾಯ.!
KARNATAKA

BIG NEWS : `ಮೈಕ್ರೋ ಫೈನಾನ್ಸ್’ ಕಿರುಕುಳ ತಡೆಗೆ ಸರ್ಕಾರದಿಂದ ಮಹತ್ವದ ಕ್ರಮ : ಇನ್ಮುಂದೆ ಈ ನಿಯಮಗಳ ಪಾಲನೆ ಕಡ್ಡಾಯ.!

By kannadanewsnow5706/02/2025 2:05 PM

ಬೆಂಗಳೂರು : ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ತಮ್ಮ ಅವಶ್ಯಕತೆಗಳಿಗಾಗಿ ಸಣ್ಣ ಫೈನಾನ್ಸ್ ಕಂಪನಿಗಳಲ್ಲಿ ಸಾಲ ಪಡೆದು,ಮರುಪಾವತಿಸುವಲ್ಲಿ ವಿಳಂಬ ಮಾಡಿದ ಸಾಲಗಾರರ ಮೇಲೆ ಅನಧಿಕೃತ ಲೇವಾದೇವಿದಾರರು,ಹಣಕಾಸು ಸಂಸ್ಥೆಗಳಿಂದ ಆಗುತ್ತಿರುವ ದಬ್ಬಾಳಿಕೆ,ದೌರ್ಜನ್ಯಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ದೌರ್ಜನ್ಯ ತಡೆಗೆ ಹಲವು ಕ್ರಮಗಳನ್ನು ತೆಗೆದುಕೊಂಡಿದೆ.

ತುರ್ತು ವೈದ್ಯಕೀಯ ಚಿಕಿತ್ಸೆ, ಮಕ್ಕಳ ವಿದ್ಯಾಭ್ಯಾಸ, ಮದುವೆ ಇನ್ನಿತರ ಖರ್ಚಿಗಾಗಿ ತುರ್ತಾಗಿ ಕೈ ಸಾಲ ಪಡೆಯುವ ಪದ್ಧತಿ ರೂಢಿಯಲ್ಲಿದೆ.ಬಹುತೇಕರು ಪಡೆದ ಸಾಲವನ್ನು ವಾಪಸ್ಸು ನೀಡುತ್ತಾರೆ. ಆದರೆ ಕೆಲವು ವ್ಯಕ್ತಿಗಳು ಸಾಮಾಜಿಕ,ವೈಯಕ್ತಿಕ ಅಥವಾ ಉತ್ಪಾದಕವಲ್ಲದ ಕಾರ್ಯಗಳಿಗಾಗಿ ಹಣ ಖರ್ಚು ಮಾಡುವುದರಿಂದ, ಮರುಪಾವತಿ ಕ್ಷಮತೆ ಕಡಿಮೆ ಇರುತ್ತದೆ. ಇಂತಹ ಸಂದರ್ಭಗಳಲ್ಲಿ ಸಾಲ ನೀಡಿದವರು ಮರು ವಸೂಲಿಗಾಗಿ ಒತ್ತಾಯಿಸುತ್ತಾರೆ.ಕೆಲವೆಡೆ ಇದು ಕಿರುಕುಳವಾಗಿ ಬೆಳೆಯುತ್ತಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.

ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ

ಕಳೆದ ಜನವರಿ 25 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ, ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕರ್ನಾಟಕ ವಲಯದ ಅಧ್ಯಕ್ಷರು, ಭಾರತೀಯ ರಿಸರ್ವ ಬ್ಯಾಂಕ್‌ (RBI) ನ ಪ್ರಾಂತೀಯ ನಿರ್ದೇಶಕರು, ಹಾಗೂ ಸಾ-ಧನ್(SA-DHAN),ಎಕೆಎಂಐ,ಎಂಎಫ್ಐಎನ್ ಮತ್ತು ಪ್ರಮುಖ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಪ್ರತಿನಿಧಿಗಳು , ರಾಜ್ಯಮಟ್ಟದ ಬ್ಯಾಂಕರುಗಳ ಸಮಿತಿ ಸಂಚಾಲಕರು, ಅಧಿಕಾರಿಗಳು , ಪೊಲೀಸ್, ಕಂದಾಯ, ಸಹಕಾರ ಹಾಗೂ ಆರ್ಥಿಕ ಇಲಾಖೆಯ ಅಧಿಕಾರಿಗಳನ್ನೊಳಗೊಂಡ ಸಭೆ ನಡೆಸಿ. ಕಿರುಕುಳವನ್ನು ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ನಿರ್ದೆಶನ ನೀಡಿದ್ದಾರೆ.

ಕರ್ನಾಟಕದ ಅಧಿನಿಯಮಗಳು:

ಕರ್ನಾಟಕ ಲೇವಾದೇವಿದಾರರ ಅಧಿನಿಯಮ-1961 ಅಡಿಯಲ್ಲಿನ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚಿಸಲಾಗಿದೆ.
ಈ ಅಧಿನಿಯಮದಡಿಯಲ್ಲಿ 2024ರ ಡಿಸೆಂಬರ್ 31 ರವರೆಗೆ 20,425 ಸಂಸ್ಥೆಗಳು ನೋಂದಣಿಯಾಗಿವೆ. ಅದರಲ್ಲಿ 6590 ಲೇವಾದೇವಿದಾರರು, 6772 ಪಾನ್‌ ಬ್ರೋಕರ್‌ಗಳು, 7063 ಹಣಕಾಸಿನ ಸಂಸ್ಥೆಗಳು (Finance Corporation) ಇವೆ.

ಕರ್ನಾಟಕ ಮಿತಿಮೀರಿದ ಬಡ್ಡಿ ವಿಧಿಸುವಿಕೆ ನಿಷೇಧ ಕಾಯಿದೆ- 2004 ಪ್ರಕಾರ ಭದ್ರತಾ ಸಾಲಗಳಿಗೆ ವರ್ಷಕ್ಕೆ ಶೇ.14 ಹಾಗೂ ಭದ್ರತೆ ಇಲ್ಲದ ಸಾಲಗಳಿಗೆ ವರ್ಷಕ್ಕೆ ಗರಿಷ್ಠ ಶೇ.16 ಗರಿಷ್ಠ ಬಡ್ಡಿ ದರವನ್ನು ಲೇವಾದೇವಿದಾರರಿಗೆ ನಿಗದಿಪಡಿಸಲಾಗಿದೆ.

ಇಂತಹ ಮಾಹಿತಿಗಳನ್ನು ಸಾರ್ವಜನಿಕವಾಗಿ ಫಲಕಗಳ ಮೂಲಕ ಪ್ರದರ್ಶಿದಲು ಸಂಸ್ಥೆಗಳು ಹಾಗೂ ಸಂಬಂಧಿಸಿದ ಕಚೇರಿಗಳಿಗೆ ತಿಳಿಸಲಾಗಿದೆ. ಸಾಲಗಾರರು ಇವುಗಳನ್ನು ಸೂಕ್ಷ್ಮವಾಗಿ ಗಮನಿಸಿ ಸಾಲ ಪಡೆಯುವ ಮುನ್ನ ಲೇವಾದೇವಿ ಸಂಸ್ಥೆಗಳ ಅಧಿಕೃತ ನೋಂದಣಿ ಪತ್ರ, ಬಡ್ಡಿದರ, ವಸೂಲಿ ಪ್ರಕ್ರಿಯೆ ಇತ್ಯಾದಿಗಳ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ಈ ಪ್ರಕ್ರಿಯೆಗಳಿಂದ ಸಾಲ ಮರುಪಾವತಿ ಸಂದರ್ಭದಲ್ಲಿನ ಕಿರುಕುಳ ತಪ್ಪಿಸಲು ಸಾಧ್ಯವಾಗುತ್ತದೆ.

ಸೂಕ್ಷ್ಮ ಹಣಕಾಸು (Micro finance) ಸಂಸ್ಥೆಗಳು ಎಂದರೇನು?:

3 ಲಕ್ಷ ರೂ.ವರೆಗೂ ಆದಾಯವಿರುವ ಸಾರ್ವಜನಿಕರಿಗೆ ಸಾಲವನ್ನು ಒದಗಿಸುವ ವ್ಯವಸ್ಥೆಯನ್ನು ಮೈಕ್ರೋ ಫೈನಾನ್ಸ್‌ ಎಂದು ಘೋಷಿಸಲಾಗಿದೆ. ಬ್ಯಾಂಕುಗಳಲ್ಲದ ಸಹಕಾರ ಸಂಘಗಳು, ಎನ್‌ಬಿಎಫ್‌ಸಿಗಳು, ಸರ್ಕಾರೇತರ ಸಂಸ್ಥೆಗಳು, ಟ್ರಸ್ಟ್‌ಗಳು, ಸಣ್ಣ ಅಂಗಡಿ ಮಾಲೀಕರು, ಇನ್ನಿತರರು ಸಾಲ ನೀಡುತ್ತಾರೆ.

ಸಹಕಾರಿ ಸಂಸ್ಥೆಗಳ ಮೇಲ್ವಿಚಾರಣೆಯನ್ನು ಸಹಕಾರ ಇಲಾಖೆ. ಬ್ಯಾಂಕ್‌ ಅಲ್ಲದ ಆರ್ಥಿಕ ಸಂಸ್ಥೆಗಳ (ಎನ್‌ಬಿಎಫ್‌ಸಿ) ಮೇಲ್ವಿಚಾರಣೆಯನ್ನು ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಮೂಲಕ ನೋಂದಣಿ ಮತ್ತು ಮೇಲ್ವಿಚಾರಣೆ ಮಾಡಲಾಗುತ್ತಿದೆ. ಸಾ-ಧನ್ (SA-Dhan) ಮತ್ತು ಮೈಕ್ರೋ ಫೈನಾನ್ಸ್ ಇಂಡಸ್ಟ್ರಿ ನೆಟ್‌ವರ್ಕ್ (MFIN) ಸಂಸ್ಥೆಗಳನ್ನು ಭಾರತೀಯ ರಿಸರ್ವ್‌ ಬ್ಯಾಂಕ್‌ (RBI) ಸ್ವಯಂ ನಿಯಂತ್ರಣಾ ಸಂಸ್ಥೆಗಳನ್ನಾಗಿ (self-regulatory organisation) ನೇಮಿಸಿದೆ.ನಿಗದಿತ ಉತ್ತಮ ಲೇವಾದೇವಿ ಪದ್ದತಿಗಳನ್ನು ಅನುಷ್ಠಾನಗೊಳಿಸಲು ಈ ಸಂಸ್ಥೆಗಳನ್ನು ರಚಿಸಲಾಗಿದೆ.

ಕರ್ನಾಟಕ ರಾಜ್ಯದಲ್ಲಿ ಕೇವಲ 31 ಮೈಕ್ರೋ ಫೈನಾನ್ಸ್ ಇಂಡಸ್ಟ್ರಿಗಳು ಅಸ್ತಿತ್ವದಲ್ಲಿ ಇವೆ. ಈ 31 ಸಂಸ್ಥೆಗಳು ಅಸೋಸಿಯೇಷನ್ ಆಫ್ ಕರ್ನಾಟಕ ಮೈಕ್ರೋ ಫೈ‌ನಾನ್ಸ್ ಇನಸ್ಟಿಟ್ಯೂಷನ್ (AKMI) ಸದಸ್ಯತ್ವ ಪಡೆದಿವೆ. ರಾಜ್ಯದಲ್ಲಿ ಈ ಸಂಸ್ಥೆಗಳ 3090 ಶಾಖೆಗಳಿದ್ದು 37,967 ಸಿಬ್ಬಂದಿಗಳು ಕೆಲಸ ನಿರ್ವಹಿಸುತ್ತಿದ್ದಾರೆ. 1,09,88,332 ಖಾತೆಗಳಲ್ಲಿ 59,367.76 ಕೋಟಿ ರೂ‌. ಬಾಕಿ ಉಳಿದಿದೆ.

ನಿಯಮಗಳನ್ನು ಪಾಲಿಸದ ಹಣಕಾಸು ಸಂಸ್ಥೆಗಳ ಬಗ್ಗೆ ಮೇಲ್ವಿಚಾರಣಾ ಸಂಸ್ಥೆಗಳ ಮೂಲಕ ಭಾರತೀಯ ರಿಸರ್ವ್‌ ಬ್ಯಾಂಕಿಗೆ ವರದಿ ನೀಡಲಾಗುತ್ತದೆ , ಆರ್‌ಬಿಐ ಒಪ್ಪಿಗೆಯೊಂದಿಗೆ ಸೂಕ್ತ ಶಿಸ್ತಿನ ಕ್ರಮವನ್ನು ಜರುಗಿಸಲಾಗುತ್ತದೆ.

ದಬ್ಬಾಳಿಕೆಯ ಸಾಲ ಮರುಪಾವತಿ ಕ್ರಮದಿಂದ ಸಂರಕ್ಷಿಸಲು ಅಧಿಕೃತವಾಗಿ ಭಾರತೀಯ ರಿಸರ್ವ್‌ ಬ್ಯಾಂಕ್‌ ಮಾರ್ಗಸೂಚಿಗಳು

ಎಲ್ಲಾ ಎನ್‌ಬಿಎಫ್‌ಸಿ-ಎಂಎಫ್‌ಐಗಳು ಬಡ್ಡಿಯ ದರ, ಮರುಪಾವತಿಯ ಕಂತು ಮತ್ತು ಅಸಲು ಸಾಲ ಮುಂತಾದವುಗಳ ಬಗ್ಗೆ ʼಫ್ಯಾಕ್ಟ್ ಶೀಟ್‌ನಲ್ಲಿ ಸಾಲ ವಿತರಣೆಯ ಸಮಯದಲ್ಲಿ ಪ್ರತಿಯೊಬ್ಬ ಸಾಲಗಾರನಿಗೆ ಮಾಹಿತಿ ಒದಗಿಸಬೇಕು.

ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಅನುಸರಿಸಬೇಕಾದ ಕ್ರಮಗಳು

ಮೈಕ್ರೋ ಫೈನಾನ್ಸ್ ಇನ್‌ಸ್ಟಿಟ್ಯೂಷನ್ (ಎಂಎಫ್ಐ) , ಮನಿ ಲೆಂಡಿಂಗ್ ಏಜೆನ್ಸಿ ಅಥವಾ ಸಂಸ್ಥೆಯಿಂದ ನೀಡುವ ಎಲ್ಲಾ ಸಾಲಗಳ ಮಂಜೂರಾತಿ, ವಿತರಣೆಯ ಪ್ರಕ್ರಿಯೆಯಲ್ಲಿ ಈ ಅಂಶಗಳನ್ನು ಅನುಸರಿಸಬೇಕು:

* ಸಾಲಗಾರನಿಗೆ ಸಾಲದ ನಿಯಮಗಳ ಬಗ್ಗೆ ಸ್ಥಳೀಯ ಭಾಷೆಯಲ್ಲಿ ಅಥವಾ ಆತನಿಗೆ ಅರ್ಥವಾಗುವ ಭಾಷೆಯಲ್ಲಿ ತಿಳಿಸಬೇಕು
* ಸಾಲದ ಅರ್ಜಿಯಲ್ಲಿ ಷರತ್ತುಗಳ ಬಗ್ಗೆ ಮಾಹಿತಿ ನೀಡಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲು ಸಹಾಯ ಮಾಡಬೇಕು.
* ಯಾವ ದಾಖಲೆಗಳನ್ನು ನೀಡುವ ಅವಶ್ಯಕತೆ ಇದೆ ಎನ್ನುವ ಸೂಕ್ತ ಮಾಹಿತಿ ನೀಡಬೇಕು.
* ನಗದು ಪುಸ್ತಕ, ಲೆಡ್ಜರ್ ಮತ್ತು ಇತರ ದಾಖಲೆಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು.

*ಸಾಲ ನೀಡಿದ ದಿನಾಂಕದಿಂದ ಏಳು ದಿನಗಳ ಒಳಗೆ ಸಾಲಗಾರನಿಗೆ ನಿಗದಿತ ನಮೂನೆಯಲ್ಲಿ ಸಾಲದ ಮೊತ್ತ ,ನೀಡಿದ ದಿನಾಂಕ ಮತ್ತು ಅವಧಿಯ ಮುಕ್ತಾಯ, ಸಂಸ್ಥೆಯ ಕಾರ್ಯನಿರ್ವಾಹಕರ ಹೆಸರು ಮತ್ತು ವಿಳಾಸ, ನಿಯಮಾನುಸಾರ ವಿಧಿಸಲಾಗುವ ಬಡ್ಡಿದರ ಸ್ಪಷ್ಟವಾಗಿರುವ ಲಿಖಿತ ದಾಖಲೆಯನ್ನು ತಲುಪಿಸಬೇಕು.

* ಸಾಲಗಾರನು ಮಾಡುವ ಪಾವತಿಗೆ ಪ್ರತಿಯಾಗಿ ಸಹಿ ಮಾಡಿದ ರಶೀದಿ ನೀಡಬೇಕು.

* ಸಾಲಗಾರನ ಲಿಖಿತ ಬೇಡಿಕೆಯ ಮೇರೆಗೆ ಸಾಲಕ್ಕೆ ಸಂಬಂಧಿಸಿದ ಯಾವುದೇ ದಾಖಲೆಯ ನಕಲನ್ನು ನೀಡಬೇಕು.
* ಸಾಲಗಾರರಿಂದ ಪಡೆದ ಭದ್ರತೆಯನ್ನು ಸ್ಪಷ್ಟವಾಗಿ ತಿಳಿಸಬೇಕು

*ಜನಸಾಮಾನ್ಯರು ಈ ವಿಧಾನಗಳ ಬಗ್ಗೆ ತಿಳುವಳಿಕೆ ಹೊಂದಿರಬೇಕು. ತಮ್ಮ ಅಧಿಕೃತ ಹಕ್ಕುಗಳು,ಬಾಧ್ಯತೆಗಳ ಬಗ್ಗೆ ಖಚಿತ ಪಡಿಸಿಕೊಂಡ ನಂತರ ಸಾಲ ತೆಗೆದುಕೊಳ್ಳಬೇಕು.

ಸ್ವಸಹಾಯ ಗುಂಪುಗಳಲ್ಲಿ ಸಾಲ

ಮಹಿಳಾ ಸ್ವ-ಸಹಾಯ ಗುಂಪುಗಳಿಂದ ಹಲವು ಕಡೆ ಬಳಕೆ ಸಾಲವನ್ನು (Consumption Loan) ಪಡೆಯುವ ವ್ಯವಸ್ಥೆ ಇದೆ. ಇವುಗಳಲ್ಲಿ ಶೇ. 99 ರಷ್ಟು ಯಶಸ್ವಿಯಾಗಿ ಮರುಪಾವತಿ ಕೂಡ ಆಗುತ್ತವೆ. ಬ್ಯಾಂಕುಗಳಲ್ಲಿ ಇರುವಂತೆ ದಾಖಲಾತಿ ಒದಗಿಸುವ, ಜಾಮೀನು ನೀಡುವ ಹಾಗೂ ತಮ್ಮ ಆಸ್ತಿಗಳ ಅಡಮಾನ ಮಾಡುವ ಕ್ಲಿಷ್ಟ ವಿಧಾನ ಇಲ್ಲಿರುವುದಿಲ್ಲ. ಸರಳ ವಿಧಾನ ಅನುಸರಿಸಿ ಸಾಲ ಸಿಗುವುದರಿಂದ ಜನರು ಇಂತಹ ವ್ಯವಸ್ಥೆಗಳಿಗೆ ಹೆಚ್ಚಾಗಿ ಮೊರೆ ಹೋಗುತ್ತಾರೆ.

ಸಹಾಯವಾಣಿ

ಬಡಜನರ ಅವಶ್ಯಕತೆಯನ್ನು ಬಂಡವಾಳ ಮಾಡಿಕೊಳ್ಳುವ ಕೆಲವು ವ್ಯಕ್ತಿಗಳು,ಅನಧಿಕೃತ ಲೇವಾದೇವಿದಾರರು ಜನರ ತುರ್ತು ಅವಶ್ಯಕತೆಗೆ ಹಣ ನೀಡಿ, ಹೆಚ್ಚು ಬಡ್ಡಿ ವಿಧಿಸಿ ಶೋಷಣೆ ಮಾಡುತ್ತಾರೆ. ಅಂತಹ ವ್ಯಕ್ತಿಗಳು ಅಥವಾ ಸಂಸ್ಥೆಗಳ ವಿರುದ್ಧ ಸಾರ್ವಜನಿಕರು ಸಹಾಯವಾಣಿ ಸಂಖ್ಯೆಗಳಿಗೆ ದೂರು ನೀಡಬಹುದು. ಸೂಕ್ಷ್ಮ ಹಣಕಾಸು ಸಂಸ್ಥೆ (MFI) ,ಮನಿ ಲೆಂಡಿಂಗ್ ಸಂಸ್ಥೆಗಳ ನಿಯಮ ಉಲ್ಲಂಘನೆಗಳ ಕುರಿತು ಭಾರತೀಯ ರಿಸರ್ವ್ ಬ್ಯಾಂಕ್‌ (RBI) ಸಹಾಯವಾಣಿ ಸಂಖ್ಯೆ 14448 ಗೆ ಮಾಹಿತಿ ನೀಡಬಹುದು.

ರಾಜ್ಯ ಸರ್ಕಾರವು ಮೈಕ್ರೋ ಫೈನಾನ್ಸ್‌ ಸಾಲಗಾರರಿಗೆ ಎಲ್ಲ ರೀತಿಯ ಕಾನೂನು ರಕ್ಷಣೆ ನೀಡಲು ಕ್ರಮವಹಿಸಿದೆ ನೊಂದ ವ್ಯಕ್ತಿಗಳು ರಾಜ್ಯದ ಏಕೀಕೃತ ಸಹಾಯವಾಣಿ ಸಂಖ್ಯೆ: 112 ಅಥವಾ 1902 ಸಂಪರ್ಕಿಸಬಹುದು.

ಡಾ.ಶಾಲಿನಿ ರಜನೀಶ್
ಮುಖ್ಯ ಕಾರ್ಯದರ್ಶಿಗಳು,ಕರ್ನಾಟಕ ಸರ್ಕಾರ

BIG NEWS : ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ `ಸುಗ್ರೀವಾಜ್ಞೆ' ಜಾರಿ : CM ಸಿದ್ದರಾಮಯ್ಯ ಹೇಳಿಕೆ.!
Share. Facebook Twitter LinkedIn WhatsApp Email

Related Posts

GOOD NEWS : 80 ವರ್ಷ ಪೂರೈಸಿದ ರಾಜ್ಯ ನಿವೃತ್ತ ಸರ್ಕಾರಿ ನೌಕರರಿಗೆ ಹೆಚ್ಚುವರಿ `ಪಿಂಚಣಿ’ : ಸರ್ಕಾರದಿಂದ ಮಹತ್ವದ ಆದೇಶ.!

06/07/2025 10:00 AM2 Mins Read

ಧನುಸ್ಸು ರಾಶಿಯವರಿಗೆ ಈ ಒಂದು ತಾಂತ್ರಿಕ ಅನುಷ್ಠಾನ ಮಾಡಿ ನೋಡಿ ಜೀವನ ಅದೃಷ್ಟದ ರೀತಿಯಲ್ಲಿ ಬದಲಾವಣೆಯಾಗುತ್ತದೆ

06/07/2025 9:46 AM1 Min Read

SHOCKING : ರಾಯಚೂರಿನಲ್ಲಿ ಘೋರ ದುರಂತ : ಮೊಹರಂ ವೇಳೆ ಬೆಂಕಿಯಲ್ಲಿ ಬಿದ್ದು ವ್ಯಕ್ತಿಗೆ ಗಂಭೀರ ಗಾಯ.!

06/07/2025 9:34 AM1 Min Read
Recent News

GOOD NEWS : 80 ವರ್ಷ ಪೂರೈಸಿದ ರಾಜ್ಯ ನಿವೃತ್ತ ಸರ್ಕಾರಿ ನೌಕರರಿಗೆ ಹೆಚ್ಚುವರಿ `ಪಿಂಚಣಿ’ : ಸರ್ಕಾರದಿಂದ ಮಹತ್ವದ ಆದೇಶ.!

06/07/2025 10:00 AM
dhananjaya y.

BREAKING: ಬಂಗಲೆ ಕೂಡಲೇ ತೆರವುಗೊಳಿಸುವಂತೆ ಮಾಜಿ ಸಿಜೆಐ ಚಂದ್ರಚೂಡ್ ಗೆ ಸುಪ್ರೀಂ ಕೋರ್ಟ್ ಸೂಚನೆ

06/07/2025 9:59 AM

Big Updates: ಟೆಕ್ಸಾಸ್ ಪ್ರವಾಹ: ಸಾವಿನ ಸಂಖ್ಯೆ 51ಕ್ಕೆ ಏರಿಕೆ, ತೀವ್ರಗೊಂಡ ಕಾಣೆಯಾದ ಬಾಲಕಿಯರ ಹುಡುಕಾಟ

06/07/2025 9:53 AM

ಧನುಸ್ಸು ರಾಶಿಯವರಿಗೆ ಈ ಒಂದು ತಾಂತ್ರಿಕ ಅನುಷ್ಠಾನ ಮಾಡಿ ನೋಡಿ ಜೀವನ ಅದೃಷ್ಟದ ರೀತಿಯಲ್ಲಿ ಬದಲಾವಣೆಯಾಗುತ್ತದೆ

06/07/2025 9:46 AM
State News
KARNATAKA

GOOD NEWS : 80 ವರ್ಷ ಪೂರೈಸಿದ ರಾಜ್ಯ ನಿವೃತ್ತ ಸರ್ಕಾರಿ ನೌಕರರಿಗೆ ಹೆಚ್ಚುವರಿ `ಪಿಂಚಣಿ’ : ಸರ್ಕಾರದಿಂದ ಮಹತ್ವದ ಆದೇಶ.!

By kannadanewsnow5706/07/2025 10:00 AM KARNATAKA 2 Mins Read

ಬೆಂಗಳೂರು : 80 ವರ್ಷ ಪೂರೈಸಿದ ಮತ್ತು ಅದಕ್ಕೂ ಮೇಲ್ಮಟ್ಟ ವಯಸ್ಸನ್ನು ಪೂರ್ಣಗೊಳಿಸಿರುವ ರಾಜ್ಯ ಸರ್ಕಾರಿ ಕುಟುಂಬ ಪಿಂಚಣಿದಾರರಿಗೆ ಹೆಚ್ಚುವರಿ…

ಧನುಸ್ಸು ರಾಶಿಯವರಿಗೆ ಈ ಒಂದು ತಾಂತ್ರಿಕ ಅನುಷ್ಠಾನ ಮಾಡಿ ನೋಡಿ ಜೀವನ ಅದೃಷ್ಟದ ರೀತಿಯಲ್ಲಿ ಬದಲಾವಣೆಯಾಗುತ್ತದೆ

06/07/2025 9:46 AM

SHOCKING : ರಾಯಚೂರಿನಲ್ಲಿ ಘೋರ ದುರಂತ : ಮೊಹರಂ ವೇಳೆ ಬೆಂಕಿಯಲ್ಲಿ ಬಿದ್ದು ವ್ಯಕ್ತಿಗೆ ಗಂಭೀರ ಗಾಯ.!

06/07/2025 9:34 AM

BREAKING : ಕಾಂಗ್ರೆಸ್ ನಲ್ಲಿ `CM ಸಿದ್ದರಾಮಯ್ಯ’ಗೆ ರಾಷ್ಟ್ರಮಟ್ಟದ ಹುದ್ದೆ : `ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಮಂಡಳಿ’ ಅಧ್ಯಕ್ಷರಾಗಿ ನೇಮಕ

06/07/2025 9:26 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.