ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ಪಾಲಿಕೆಗಳಿಗೆ ಇದೀಗ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ. 5 ಪಾಲಿಕೆಗಳಿಗೆ ಒಟ್ಟು 125 ಕೋಟಿ ರೂಪಾಯಿ ರಾಜ್ಯ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ. ಐದು ಮಹಾನಗರ ಪಾಲಿಕೆಗಳಿಗೆ ತಲಾ 25 ಕೋಟಿಯಂತೆ ಒಟ್ಟು 125 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ.
ಆಸ್ತಿ ತೆರಿಗೆ ಸಂಗ್ರಹದಲ್ಲಿ 500 ಕೋಟಿ ಸಂಗ್ರಹ ಆಗಿತ್ತು. ಅದರಲ್ಲಿ 125 ಕೋಟಿ ರಿಲೀಸ್ ಮಾಡಿದೆ. ಬೆಂಗಳೂರು ದಕ್ಷಿಣ ಮಹಾನಗರ ಪಾಲಿಕೆಗೆ 25 ಕೋಟಿ, ಬೆಂಗಳೂರು ಉತ್ತರ ಮಹಾನಗರ ಪಾಲಿಕೆಗೆ 25 ಕೋಟಿ, ಬೆಂಗಳೂರು ಕೇಂದ್ರ ಮಹಾನಗರ ಪಾಲಿಕೆಗೆ 25 ಕೋಟಿ, ಬೆಂಗಳೂರು ಪೂರ್ವ ಮಹಾನಗರ ಪಾಲಿಕೆಗೆ 25 ಕೋಟಿ, ಹಾಗೂ ಬೆಂಗಳೂರು ಪಶ್ಚಿಮ ಮಹಾನಗರ ಪಾಲಿಕೆಗೆ 25 ಕೋಟಿ ಅನುದಾನ ಬಿಡುಗಡೆ ಮಾಡಿದೆ.