ಬೆಂಗಳೂರು : ಬರುವ ಸೆಪ್ಟೆಂಬರ್ 15ರ ಒಳಗಾಗಿ ಬಿಬಿಎಂಪಿ ವಿಭಜನೆ ಪ್ರಕ್ರಿಯೆ ಪೂರ್ಣಗೊಂಡು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾಗಲಿದೆ ಎಂದು ವಿಧಾನಸೌಧದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೇಳಿಕೆ ನೀಡಿದರು.
ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಸಂಬಂಧ ವಿಪಕ್ಷದ ನಾಯಕರು ಸೇರಿ ಇನ್ನು ಮೂರ್ನಾಲ್ಕು ಶಾಸಕರ ಜೊತೆಗೆ ಚರ್ಚಿಸುತ್ತೇನೆ. ಎಲ್ಲರ ಸಲಹೆ ಪಡೆದು ಸಂಪುಟದಲ್ಲಿ ಪ್ರಸ್ತಾಪಿಸಿ ಅಂತಿಮವಾಗಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಡಿಕೆ ಶಿವಕುಮಾರ್ ಅವರು ತಿಳಿಸಿದರು.