ಬೆಂಗಳೂರು : ಪಂಚೆ ಧರಿಸಿದ್ದಾರೆ ಎಂಬ ಕಾರಣಕ್ಕೆ ಫಕೀರಪ್ಪ ಎನ್ನುವವರಿಗೆ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಜಿಟಿ ಮಾಲ್ ಒಳಗಡೆ ಪ್ರವೇಶ ನಿರಾಕರಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಜಿಟಿ ಮಾಲ್ ಮತ್ತೆ ಓಪನ್ ಆಗಿದ್ದು ಕಾರ್ಯಾಚರಣೆ ಪುನಾರಂಭ ಮಾಡಿದೆ.
ಹೌದು ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಜಿಟಿ ಮಾಲ್ ನಲ್ಲಿ ಪಂಚೇ ಧರಿಸಿದ್ದಾರೆ ಎಂಬ ಒಂದೇ ಒಂದು ಕಾರಣಕ್ಕೆ ಫಕೀರಪ್ಪ ಎನ್ನುವವರಿಗೆ ಮಾಲ್ ಒಳಗಡೆ ಚಲನಚಿತ್ರ ವೀಕ್ಷಣೆಗೆ ಮಾಲ್ ಸಿಬ್ಬಂದಿ ಪ್ರವೇಶ ನಿರಾಕರಿಸಿದ್ದರು.ಈ ಒಂದು ಘಟನೆ ಇಡೀ ರಾಜ್ಯಾದ್ಯಂತ ಭಾರಿ ವಿರೋಧ ವ್ಯಕ್ತವಾಗಿತ್ತು. ಅಲ್ಲದೆ ಸದನದಲ್ಲೂ ಕೂಡ ಈ ವಿಷಯ ಚರ್ಚೆಗೆ ಬಂದಿದ್ದು, ಬೆಂಗಳೂರು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಒಂದು ವಾರ ಜಿಟಿ ಮಾಲ್ ಬಂದ್ ಮಾಡಿಸುವುದಾಗಿ ಘೋಷಿಸಿದ್ದರು.
ಇದಾದ ಬಳಿಕ ಫಕೀರಪ್ಪ ಅವರು ಕುಟುಂಬ ಸಮೇತ ವಿಧಾನಸೌಧಕ್ಕೆ ಭೇಟಿ ನೀಡಿದ್ದರು. ಈ ವೇಳೆ ಸ್ಪೀಕರ್ ಯುಟಿ ಖಾದರ್ ಫಕೀರಪ್ಪ ಅವರನ್ನು ಸನ್ಮಾನಿಸಿ ಗೌರವಿಸಿದರು. ಅಲ್ಲದೆ 1.78 ಕೋಟಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದ್ದ ಜಿಟಿ ಮಾಲ್ ಇಂದು ಪುನಃ ಓಪನ್ ಆಗಿದೆ. ಸಂಪೂರ್ಣ ತೆರಿಗೆ ಪಾವತಿಸಿದ ಹಿನ್ನೆಲೆಯಲ್ಲಿ ಪುನಃ ಆರಂಭಗೊಂಡಿದೆ. ಇಂದಿನಿಂದ ಜಿಟಿ ಮಾಲ್ ಕಾರ್ಯಾಚರಣೆ ಪುನರಾರಂಭಗೊಂಡಿದೆ.