ಬೆಂಗಳೂರು : ಗ್ಯಾರಂಟಿ ಯೋಜನೆಗಳು ತಾತ್ಕಲಿಕವಲ್ಲ, ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳು ತಾತ್ಕಾಲಿಕ ಅಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಆದರೆ ಗ್ಯಾರಂಟಿ ಯೋಜನೆಗಳು ತಾತ್ಕಾಲಿಕವಲ್ಲ, ಯಾವುಏ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ನಾವು ಗ್ಯಾರಂಟಿ ಯೋಜನೆಗಳನ್ನು ಮುಂದುವರೆಸುವ ಕೆಲಸ ಮಾಡುತ್ತೇವೆ. ಮುಂದಿನ ವರ್ಷ ೫೨ ಸಾವಿರ ಕೋಟಿ ರೂ.ಮೀಸಲಿಡಲಾಗಿದೆ. ಕರ್ನಾಟಕದಲ್ಲಿಕ ಈ ಟರ್ಮ್ ನಾವೇ ಇರುತ್ತೇವೆ. ಮುಂದಿನ ಟರ್ಮ್ ಸಹ ನಾವೇ ಇರುತ್ತೇವೆ ಎಂದು ಹೇಳಿದ್ದಾರೆ.