ಕೊಳ್ಳೆಗಾಲ : ಲೋಕಸಭೆ ಚುನಾವಣೆಯ ಬಳಿಕವೂ ಗ್ಯಾರಂಟಿ ಯೋಜನೆಗಳು ಇರುತ್ತವೆ ಎಂದು ಸಿಎಂ ಸಿದ್ದರಾಮ್ಯಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನಸಾಮಾನ್ಯರ ಒಳಿಗಾಗಿ ರಾಜ್ಯ ಕಾಂಗ್ರೆಸ್ ಸರ್ಕಾರಿ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳು ಕಂಡು ಸೋಲುವ ಭೀತಿಯಿಂದ ಬಿಜೆಪಿ, ಜೆಡಿಎಸ್ ನವರು ಮೈತ್ರಿ ಮಾಡಿಕೊಂಡಿದ್ದಾರೆ. ಸೋಲುವ ಭೀತಿಯಿಂದಲೇ ಲೋಕಸಭೆ ಚುನಾವಣೆ ಬಳಿಕ ಗ್ಯಾರಂಟಿ ಯೋಜನೆ ಇರಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ ಲೋಕಸಭೆ ಚುನಾವಣೆ ಬಳಿಕವೂ ಗ್ಯಾರಂಟಿ ಯೋಜನೆಗಳು ಯಾವ ಕಾರಣಕ್ಕೂ ನಿಲ್ಲಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಇರುವುದೇ ಗ್ಯಾರಂಟಿ ಇಲ್ಲ. ಅಂದ ಮೇಲೆ ಗ್ಯಾರಂಟಿಗಳು ಮುಂದುವರಿಯುವ ಬಗ್ಗೆ ಹೇಗೆ ಗ್ಯಾರಂಟಿ ನೀಡುತ್ತಾರೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ವ್ಯಂಗ್ಯವಾಡಿದ್ದಾರೆ.