ಬೆಂಗಳುರು : ರಾಜ್ಯ ಸರ್ಕಾರವು ಗಾಳಿಪಟ ಹರಿಸುವ ಕುರಿತಂತೆ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಇನ್ಮುಂದೆ ಗಾಳಿಪಟ ಹಾರಿಸಲು ಮಾಂಜಾ ದಾರ ಬಳಸುವಂತಿಲ್ಲ ಎಂದು ಸೂಚನೆ ನೀಡಿದೆ.
ಗಾಳಿಪಟ ಹಾರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಾರ್ಗಸೂಚಿಯೊಂದನ್ನು ಹೊರಡಿಸಿದ್ದು, ಗಾಳಿಪಟಗಳಿಗೆ ಹತ್ತಿಯಿಂದ ಮಾಡಿದ ದಾರಗಳನ್ನು ಮಾತ್ರ ಬಳಸುವಂತೆ ಸೂಚಿಸಲಾಗಿದೆ. ಯಾವುದೇ ವ್ಯಕ್ತಿ, ಅಂಗಡಿಗಳು, ಸಗಟು ಮತ್ತು ಚಿಲ್ಲರೆ ಮಾರಾಟಗಾರರು, ನೈಲಾನ್ ಮತ್ತು ಗಾಜು ಮತ್ತಿತರ ಅಪಾಯಕಾರಿ ವಸ್ತುಗಳನ್ನು ಬಳಸಿ ಚೀನಿ ಮಾಂಜಾ, ಚೀನಿ ದಾರಗಳನ್ನು ತಯಾರು ಮಾಡುವುದು, ದಾಸ್ತಾನು ಮಾಡುವುದು ಹಾಗೂ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ.
ನೈಲಾನ್ ಮತ್ತು ಗಾಜು ಮತ್ತಿತರ ಅಪಾಯಕಾರಿ ವಸ್ತುಗಳನ್ನು ಬಳಸಿ ತಯಾರಿಸಲಾದ ಚೀನಿ ಮಾಂಜಾ, ಚೀನಿ ದಾರಗಳನ್ನು ಬಳಸಿ ಗಾಳಿಪಟ ಹಾರಿಸಿದ ವೇಳೆ ಕೆಲವೊಂದು ಪ್ರಾಣಾಪಾಯದ ಘಟನೆಗಳು ನಡೆದ ಹಿನ್ನೆಲೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.