Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ವಿಶ್ವದ ನಂಬರ್ 1 ಆಟಗಾರ್ತಿ ‘ಸಬಲೆಂಕಾ’ ಮಣಿಸಿ ಚೊಚ್ಚಲ ‘ಫ್ರೆಂಚ್ ಓಪನ್ ಕಿರೀಟ’ ಗೆದ್ದ ‘ಕೊಕೊ ಗೌಫ್’

07/06/2025 9:58 PM

Good News : ಆಪರೇಷನ್ ಸಿಂಧೂರ್ ರೀಚಾರ್ಜ್ ಆಫರ್ ; ‘ಕ್ಯಾಶ್ ಬ್ಯಾಕ್’ ಜೊತೆಗೆ ‘ರಾಷ್ಟ್ರ ಸೇವೆ’ ಸೌಭಾಗ್ಯ

07/06/2025 9:34 PM

BREAKING: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಪ್ರಕರಣ: ಪರಿಹಾರದ ಮೊತ್ತ 25 ಲಕ್ಷಕ್ಕೆ ಹೆಚ್ಚಿಸಿದ ರಾಜ್ಯ ಸರ್ಕಾರ

07/06/2025 9:21 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : `ಗಣಪತಿ ಹಬ್ಬ’ ಆಚರಣೆಗೆ ಮಾರ್ಗಸೂಚಿ ಪ್ರಕಟ : `DJ’ ಬಳಕೆಗೆ ಪೊಲೀಸರ ಅನುಮತಿ ಕಡ್ಡಾಯ!
KARNATAKA

BIG NEWS : `ಗಣಪತಿ ಹಬ್ಬ’ ಆಚರಣೆಗೆ ಮಾರ್ಗಸೂಚಿ ಪ್ರಕಟ : `DJ’ ಬಳಕೆಗೆ ಪೊಲೀಸರ ಅನುಮತಿ ಕಡ್ಡಾಯ!

By kannadanewsnow5726/08/2024 5:49 PM

ಬೆಂಗಳೂರು : ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ರಾಸಾಯನಿಕಯುಕ್ತ ಬಣ್ಣ ಲೇಪಿತ ಗಣೇಶ ವಿಗ್ರಹಗಳನ್ನು ಪ್ರತಿಷ್ಠಾಪನೆ ಮಾಡದೇ, ಪರಿಸರ ಸ್ನೇಹಿ ಗೌರಿಗಣೇಶ ಹಬ್ಬ ಆಚರಿಸುವ ಮೂಲಕ ನೈಸರ್ಗಿಕ ಜಲ ಸಂಪನ್ಮೂಲಗಳನ್ನು ಸಂರಕ್ಷಿಸಬೇಕು ಎಂದು ಸರ್ಕಾರ ತಿಳಿಸಿದೆ.

ಪ್ರತಿ ವರ್ಷದಂತೆ ಈ ಬಾರಿಯೂ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು, ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರಿಸ್(ಪಿಒಪಿ) ಮತ್ತು ಬಣ್ಣದ ವಿಗ್ರಹಗಳನ್ನು ಸ್ಥಾಪಿಸಿ ಪೂಜಿಸಿದ ನಂತರ ಕೆರೆ, ಬಾವಿ ಹಾಗೂ ಇನ್ನಿತರೆ ನೈಸರ್ಗಿಕ ಜಲಮೂಲಗಳಿಗೆ ವಿಸರ್ಜಿಸುವುದರಿಂದ ನೈಸರ್ಗಿಕ ಜಲಮೂಲಗಳು ಕಲುಷಿತಗೊಂಡು ಭೌತಿಕ ಹಾಗೂ ರಾಸಾಯನಿಕ ಗುಣ ಮಾರ್ಪಟ್ಟು ಪರಿಸರದ ಮೇಲೆ ದುಷ್ಪರಿಣಾಮ ಬೀರಲಿದೆ. ಪ್ರಾಣಿ, ಪಕ್ಷಿ ಹಾಗೂ ಜಲಚರಗಳ ಜೀವಕ್ಕೂ ಅಪಾಯವಾಗುವುದಲ್ಲದೇ ಸಾರ್ವಜನಿಕರ ಆರೋಗ್ಯಕ್ಕೂ ಧಕ್ಕೆ ಉಂಟಾಗುತ್ತದೆ.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಹಬ್ಬದ ಆಚರಣೆಯಿಂದ ನೈಸರ್ಗಿಕ ಜಲ ಮೂಲಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಅಧಿಸೂಚನೆ ಹೊರಡಿಸಿದ್ದು, ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ಯಾವುದೇ ಕೆರೆ ಮತ್ತು ಇತರೆ ಜಲ ಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ಹಾಗಾಗಿ ಸಾರ್ವಜನಿಕರು ಈ ಕೆಳಕಂಡ ಕ್ರಮಗಳನ್ನು ಅನುಸರಿಸಿ ಪರಿಸರ ಸ್ನೇಹಿ ಗೌರಿಗಣೇಶ ಹಬ್ಬ ಆಚರಿಸಿ ನೈಸರ್ಗಿಕ ಜಲ ಸಂಪನ್ಮೂಲಗಳನ್ನು ಸಂರಕ್ಷಿಸಲು ಸಹಕರಿಸಬೇಕು.

ಗೌರಿ ಗಣೇಶನ ಹಬ್ಬಕ್ಕೆ ಅನುಸರಿಸಬೇಕಾದ ಕ್ರಮ:

ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ತಯಾರಿಸಬಾರದು ಹಾಗೂ ಕರ್ನಾಟಕರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು (ನಿವಾರಣೆ ಮತ್ತು ನಿಯಂತ್ರಣ) ಕಾಯ್ದೆ 1974ರ ಪ್ರಕಾರ ಕಲಂ 33 (ಎ) ಅನ್ವಯ ರಾಜ್ಯದ ಯಾವುದೇ ಜಲ ಮೂಲಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ.

ಆದೇಶವನ್ನು ಉಲ್ಲಂಘಿಸಿದ್ದಲ್ಲಿ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು.

ತೈಲ ಬಣ್ಣಗಳು ಅಪಾಯಕಾರಿ ರಾಸಾಯನಿಕಗಳಿಂದ ಕೂಡಿದ್ದು, ಹಾಗಾಗಿ ಜೇಡಿ ಮಣ್ಣಿನಿಂದ ಮಾಡಿದ ಹಾಗೂ ನೈಸರ್ಗಿಕ ಬಣ್ಣಗಳಿಂದ ಮಾಡಿಸುವ ಗಣೇಶ ಮೂರ್ತಿಗಳನ್ನು ಪೂಜಿಸಬೇಕು.

ಗೌರಿಗಣೇಶ ಹಬ್ಬದ ಸಂದರ್ಭದಲ್ಲಿ ಬಣ್ಣರಹಿತ ಮಣ್ಣಿನ ಅಥವಾ ನೈಸರ್ಗಿಕ ಮೂರ್ತಿಗಳೊಂದಿಗೆ ಹಬ್ಬ ಆಚರಿಸಿದ ನಂತರ ಮೂರ್ತಿಗಳನ್ನು ನಗರಸಭೆ, ಪುರಸಭೆ ವತಿಯಿಂದ ನಿಗದಿಪಡಿಸಿರುವ ಸ್ಥಳಗಳಲ್ಲಿ ಅಥವಾ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸಂಚಾರಿ ವಾಹನದಲ್ಲಿಯೇ ಮೂರ್ತಿಗಳನ್ನು ವಿಸರ್ಜಿಸಬೇಕು.

ಗೌರಿಗಣೇಶ ಮೂರ್ತಿಗಳನ್ನು ವಿಸರ್ಜಿಸುವ ಸಂದರ್ಭದಲ್ಲಿ ಹಸಿ ಕಸ (ಹೂ, ಹಣ್ಣು, ಬಾಳೆ ಕಂಬ, ಮಾವಿನ ತೋರಣ ಇತ್ಯಾದಿ ಅಲಂಕಾರಿಕ ವಸ್ತುಗಳು) ಪ್ರತ್ಯೇಕಿಸಿ ಮೂರ್ತಿಗಳೊಂದಿಗೆ ನೀರಿಗೆ ವಿಸರ್ಜಿಸದೇ, ನಗರಸಭೆ ಹಾಗೂ ಪುರಸಭೆಯ ಕಸ ಸಂಗ್ರಹಣ ವಾಹನಗಳಿಗೆ ನೀಡಬೇಕು.

ಸಾರ್ವಜನಿಕವಾಗಿ ನಡೆಸುವ ಗಣೇಶ ಮೂರ್ತಿಯ ಉತ್ಸವ ಚಪ್ಪರಕ್ಕೆ ಪರಿಸರ ಸ್ನೇಹಿ ವಸ್ತುಗಳನ್ನೇ ಬಳಸಬೇಕು.

ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬಳಕೆ ಮಾಡಬಾರದು.

ಶಬ್ದ ಮಾಲಿನ್ಯ (ನಿರ್ಬಂಧ ಮತ್ತು ನಿಯಂತ್ರಣ) ನಿಯಮಗಳು-2000 ರನ್ವಯ ಸಾರ್ವಜನಿಕ ಗಣೇಶ ಪೆಂಡಾಲ್‌ಗಳಲ್ಲಿ ಬಳಸುವ ಧ್ವನಿವರ್ಧಕ, ವಿದ್ಯುನ್ಮಾನ ಉಪಕರಣಗಳು ಮತ್ತು ಶಬ್ದ ಉಂಟುಮಾಡುವ ಉಪಕರಣಗಳನ್ನು ಬಳಸಲು ಪೋಲಿಸ್ ಇಲಾಖೆಯಿಂದ ಅನುಮತಿ ಪಡೆಯಬೇಕು.

BIG NEWS : `ಗಣಪತಿ ಹಬ್ಬ' ಆಚರಣೆಗೆ ಮಾರ್ಗಸೂಚಿ ಪ್ರಕಟ : `DJ' ಬಳಕೆಗೆ ಪೊಲೀಸರ ಅನುಮತಿ ಕಡ್ಡಾಯ! BIG NEWS: Guidelines for ``Ganpati festival'' celebration published: Police permission is mandatory for use of ``DJ''!
Share. Facebook Twitter LinkedIn WhatsApp Email

Related Posts

BREAKING: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಪ್ರಕರಣ: ಪರಿಹಾರದ ಮೊತ್ತ 25 ಲಕ್ಷಕ್ಕೆ ಹೆಚ್ಚಿಸಿದ ರಾಜ್ಯ ಸರ್ಕಾರ

07/06/2025 9:21 PM1 Min Read

BREAKING: ಬೆಂಗಳೂರು ಕಾಲ್ತುಳಿತ ದುರಂತ: ಮೃತರ ಕುಟುಂಬಕ್ಕೆ ತಲಾ 25 ಲಕ್ಷ ಪರಿಹಾರ- ಸಿಎಂ ಸಿದ್ಧರಾಮಯ್ಯ ಘೋಷಣೆ

07/06/2025 9:13 PM1 Min Read

BREAKING: ಜಮೀನಿನ ವಿಚಾರಕ್ಕೆ ಅಣ್ಣನ ಮಗನನ್ನೇ ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಕೊಲೆಗೈದ ಚಿಕ್ಕಪ್ಪ

07/06/2025 9:08 PM1 Min Read
Recent News

BREAKING : ವಿಶ್ವದ ನಂಬರ್ 1 ಆಟಗಾರ್ತಿ ‘ಸಬಲೆಂಕಾ’ ಮಣಿಸಿ ಚೊಚ್ಚಲ ‘ಫ್ರೆಂಚ್ ಓಪನ್ ಕಿರೀಟ’ ಗೆದ್ದ ‘ಕೊಕೊ ಗೌಫ್’

07/06/2025 9:58 PM

Good News : ಆಪರೇಷನ್ ಸಿಂಧೂರ್ ರೀಚಾರ್ಜ್ ಆಫರ್ ; ‘ಕ್ಯಾಶ್ ಬ್ಯಾಕ್’ ಜೊತೆಗೆ ‘ರಾಷ್ಟ್ರ ಸೇವೆ’ ಸೌಭಾಗ್ಯ

07/06/2025 9:34 PM

BREAKING: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಪ್ರಕರಣ: ಪರಿಹಾರದ ಮೊತ್ತ 25 ಲಕ್ಷಕ್ಕೆ ಹೆಚ್ಚಿಸಿದ ರಾಜ್ಯ ಸರ್ಕಾರ

07/06/2025 9:21 PM

ಪಹಲ್ಗಾಮ್ ಭಯೋತ್ಪಾದಕ ದಾಳಿ ಖಂಡಿಸಿದ ಜರ್ಮನಿ, ಉಗ್ರರ ವಿರುದ್ಧದ ಹೋರಾಟಕ್ಕೆ ಬೆಂಬಲ

07/06/2025 9:16 PM
State News
KARNATAKA

BREAKING: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ ಪ್ರಕರಣ: ಪರಿಹಾರದ ಮೊತ್ತ 25 ಲಕ್ಷಕ್ಕೆ ಹೆಚ್ಚಿಸಿದ ರಾಜ್ಯ ಸರ್ಕಾರ

By kannadanewsnow0907/06/2025 9:21 PM KARNATAKA 1 Min Read

ಬೆಂಗಳೂರು: ಆರ್ ಸಿ ಬಿ ವಿಜಯೋತ್ಸವ ಕಾರ್ಯಕ್ರಮದ ವೇಳೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಕಾಲ್ತುಳಿತ ಉಂಟಾಗಿ 11 ಮಂದಿ ಅಭಿಮಾನಿಗಳು…

BREAKING: ಬೆಂಗಳೂರು ಕಾಲ್ತುಳಿತ ದುರಂತ: ಮೃತರ ಕುಟುಂಬಕ್ಕೆ ತಲಾ 25 ಲಕ್ಷ ಪರಿಹಾರ- ಸಿಎಂ ಸಿದ್ಧರಾಮಯ್ಯ ಘೋಷಣೆ

07/06/2025 9:13 PM

BREAKING: ಜಮೀನಿನ ವಿಚಾರಕ್ಕೆ ಅಣ್ಣನ ಮಗನನ್ನೇ ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಕೊಲೆಗೈದ ಚಿಕ್ಕಪ್ಪ

07/06/2025 9:08 PM

ರಾಜ್ಯದಲ್ಲಿಂದು 57 ಜನರಿಗೆ ಕೊರೋನಾ ಪಾಸಿಟೀವ್: ಸೋಂಕಿಗೆ ಇಬ್ಬರು ಬಲಿ | Covid19 Update

07/06/2025 9:01 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.