ಮೈಸೂರು : ಡಿಸೆಂಬರ್.31ರ ಹೊಸ ವರ್ಷಾಚರಣೆಗೆ ಪೊಲೀಸ್ ಇಲಾಖೆಯಿಂದ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ಈ ನಿಯಮಗಳನ್ನು ಪಾಲಿಸೋದು ಕಡ್ಡಾಯವಾಗಿದೆ.
ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಮೈಸೂರು ನಗರ ಪೊಲೀಸ್ ಕಮೀಷನರ್ ಸೀಮಾ ಲಾಟ್ಕರ್ ಅವರು, ಸಾರ್ವಜನಿಕರು, ಮಹಿಳೆಯರು ಹಾಗೂ ಮಕ್ಕಳ ಸುರಕ್ಷತೆಯಿಂದ ಹೊಸ ವರ್ಷಾಚರಣೆಯ ವೇಳೆ ಸೂಕ್ತ ಬಂದೋಬಸ್ತ್ ಕೈಗೊಳ್ಳಲಾಗಿದೆ. ಚಾಮುಂಡಿ ಬೆಟ್ಟಕ್ಕೂ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ ಎಂದರು.
ಹೊಸ ವರ್ಷಾಚರಣೆ ವೇಳೆ ಈ ಮಾರ್ಗಸೂಚಿ, ಈ ನಿಯಮಗಳ ಪಾಲನೆ ಕಡ್ಡಾಯ
-ಸಾರ್ವಜನಿಕರೊಂದಿಗೆ ಅಸಭ್ಯವಾಗಿ ವರ್ತಿಸುವಂತಿಲ್ಲ. ಇದರ ತಡೆಗಾಗಿ ಠಾಣಾವಾರು ವಿಶೇಷ ಕಾರ್ಯಪಡೆ ತಂಡ ರಚನೆ.
-ಮಹಿಳೆಯರ ರಕ್ಷಣೆಗಾಗಿ ಮಹಿಳಾ ಅಧಿಕಾರಿ, ಸಿಬ್ಬಂದಿ ಒಳಗೊಂಡ ಸುರಕ್ಷತಾ ಪಿಂಕ್ ಗರುಡಾ ಅಂದರೆ ಚಾಮುಂಡೆ ಪಡೆ ಗಸ್ತು
-ಯಾವುದೇ ಅಹಿತಕರ ಘಟನೆ ನಡೆದ ಕೂಡಲೇ ತಪಾಸಣೆಗೆ ಶ್ವಾನದಳ, ವಿದ್ವಂಸಕ ಕೃತ್ಯ ತಡೆ ತಂಡದಿಂದ ತಪಾಸಣೆಗೆ ರೆಡಿ
-ಜಿಲ್ಲೆಯಲ್ಲಿ ಪ್ರವಾಸಿ ತಾಣಗಳಲ್ಲಿ ಭದ್ರತೆಗಾಗಿ ಹೆಚ್ಚಿನ ಸಿಸಿಟಿವಿ ಕ್ಯಾಮರಾ ಕಣ್ಗಾವಲು
-ವೀಲಿಂಗ್, ಡ್ರಾಗ್ ರೇಸ್ ತಡೆಗೆ ಸಂಚಾರ ಪೊಲೀಸರು ಸಜ್ಜು
-ಅತಿ ವೇಗದ ಚಾಲನೆ ಮೇಲೆ ನಿಗಾ ವಹಿಸಲು ಚೆಕ್ ಪೋಸ್ಟ್ ತೆರೆಯಲಾಗುತ್ತಿದೆ. 112 ವಾಹನ, ಹೈವೇ ಪೆಟ್ರೋಲ್ ವಾಹನ ನಿಯೋಜನೆ
-ರಾತ್ರಿ 1 ಗಂಟೆವರೆಗೆ ಮಾತ್ರ ರೆಸ್ಟೋರೆಂಟ್, ಹೋಟೆಲ್, ಕ್ಲಬ್ ಗಳಲ್ಲಿ ಹೊಸ ವರ್ಷಾಚರಣೆಗೆ ಅವಕಾಶ. ಆನಂತ್ರ ಬಂದ್ ಕಡ್ಡಾಯ
-ಸೋಷಿಯಲ್ ಮೀಡಿಯಾ ಮೇಲೆ ಪೊಲೀಸರ ಹದ್ದಿನ ಕಣ್ಣ, ಅಪಪ್ರಚಾರ ಮಾಡಿದ್ರೇ ಕೇಸ್ ಫಿಕ್ಸ್