ಬೆಂಗಳೂರು: ನಗರದಲ್ಲಿ ಡಿಸೆಂಬರ್.31ರ ರಾತ್ರಿಯಂದು ಹೊಸ ವರ್ಷಾಚರಣೆಯನ್ನು ವಿಜೃಂಭಣೆಯಿಂದ ಜನರು ಆಚರಿಸುತ್ತಾರೆ. ಈ ವೇಳೆಯಲ್ಲಿ ಅಹಿತಕರ ಘಟನೆ ನಡೆಯದಂತೆ ಮುನ್ನಚ್ಚರಿಕೆ ಕ್ರಮವಾಗಿ ಪೊಲೀಸ್ ಇಲಾಖೆಯಿಂದ ಮಾರ್ಗಸೂಚಿ ಕ್ರಮಗಳನ್ನು ಪ್ರಕಟಿಸಲಾಗಿದೆ. ಈ ನಿಯಮಗಳನ್ನು ಪಾಲಿಸುವಂತೆ ಪೊಲೀಸ್ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರು ನಗರದ ಜನತೆ ಹೊಸ ವರ್ಷಾಚರಣೆಯನ್ನು ಅತ್ಯಂತ ಸಂಭ್ರಮದಿಂದ ಆಚರಣೆ ಮಾಡಲಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕರು. ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಯನ್ನು ಆದ್ಯತೆಯನ್ನಾಗಿ ಪರಿಗಣಿಸಿ, ನಗರದಾದ್ಯಂತ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಸೂಕ್ತ ಬಂದೋಬಸ್ತ್ ಏರ್ಪಡಿಸಿಕೊಂಡು, ಕೆಳಕಂಡ ವ್ಯವಸ್ಥೆಗಳಗೆ ಕ್ರಮ ಕೈಗೊಳ್ಳಲಾಗಿದೆ.
ನಗರದಲ್ಲಿ ಹೊಸ ವರ್ಷಾಚರಣೆಯನ್ನು ಸಾರ್ವಜನಿಕವಾಗಿ ಆಚರಿಸುವ ಪ್ರಮುಖ ಸ್ಥಳಗಳಾದ ಎಂ.ಜಿ ರಸ್ತೆ- ಬ್ರಿಗೇಡ್ ರಸ್ತೆ, ರೆಸಿಡೆನ್ಸಿ ರಸ್ತೆ, ಸೆಂಟ್ ಮಾರ್ಕ್ಸ್ ರಸ್ತೆ, ಕಬ್ಬನ್‌ಪಾರ್ಕ್, ಟ್ರಿನಿಟಿ ಸರ್ಕಲ್, ಫೀನಿಕ್ಸ್ ಮಾಲ್. ಕೋರಮಂಗಲ, ಇಂದಿರಾನಗರ 100 ಅಡಿ ರಸ್ತೆ, ಪ್ರಮುಖ ಸ್ಟಾರ್ ಹೋಟೆಲ್‌ಗಳು, ಪಬ್‌ಗಳು, ಕ್ಲಬ್‌ಗಳು ಮುಂತಾದ ಸ್ಥಳಗಳಲ್ಲಿ ಜನಸಂದಣಿಯನ್ನು ನಿಯಂತ್ರಿಸಲು ಸೂಕ್ತ ಬಂದೋಬಸ್ತ್ ಪಿಕೇಟಿಂಗ್ ಪಾಯಿಂಟ್‌ಗಳನ್ನು ನೇಮಕ ಮಾಡಲಾಗುವುದು.
ವಿಶೇಷವಾಗಿ ಕೇಂದ್ರ ವಿಭಾಗದ ಬ್ರಿಗೇಡ್ ರಸ್ತೆ-ಎಂ.ಜಿ.ರಸ್ತೆ, ಒಪೆರಾ ಜಂಕ್ಷನ್, ರಿಬ್ಯಂಡ್ ರಸ್ತೆ, ರೆಸಿಡೆನ್ಸಿ ರಸ್ತೆ ವ್ಯಾಪ್ತಿಯಲ್ಲಿ 5 ಡಿಸಿಪಿ, 18 ಎಸಿಪಿ, 41 ಜನ ಪೊಲೀಸ್ ಇನ್ಸ್‌ಪೆಕ್ಟರ್ ಸೇರಿದಂತೆ ಒಟ್ಟು 2572 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.
ಮಹಿಳೆಯರ ಸುರಕ್ಷತೆಗಾಗಿ ಪ್ರಮುಖ ಸ್ಥಳಗಳಲ್ಲಿ ಮಹಿಳಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳರುವ ಮಹಿಳಾ ಸುರಕ್ಷತಾ ಸ್ಥಳಗಳನ್ನು (Women Safety Island) ತೆರೆಯಲಾಗಿದೆ. ಮಹಿಳೆಯರು ಇದರ ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ.
ಆಯಕಟ್ಟಿನ ಪ್ರದೇಶಗಳಲ್ಲಿ ಪೊಲೀಸ್ ಕಿಯೋಸ್ಕ್‌ಗಳನ್ನು (Police Kiosk) ತೆರದಿದ್ದು. ಮಕ್ಕಳು ಕಾಣೆಯಾದಲ್ಲಿ, ಯಾವುದೇ ರೀತಿಯ ಕಳುವಿನ ದೂರುಗಳಿಗೆ ಅಥವಾ ಯಾವುದೇ ತುರ್ತು ಸಂದರ್ಭಗಳಲ್ಲಿ ಅವಶ್ಯಕ ಸೇವೆಯನ್ನು ಪಡೆಯಬಹುದಾಗಿದೆ ಎಂದಿದೆ.
ನೂತನ ವರ್ಷಾಚರಣೆ ಸಂದರ್ಭದಲ್ಲಿ ಮಾದಕ ವಸ್ತು ರೇವ್ ಪಾರ್ಟಿಗಳು (ಡ್ರಗ್ಸ್ ಸರಬರಾಜು) ಆಗುವುದನ್ನು ನಿಯಂತ್ರಿಸಲು ನಗರದ ಎಲ್ಲಾ ಡಿ.ಸಿ.ಪಿ ರವರು. ಸಿಸಿಬಿ ಅಧಿಕಾರಿಗಳು ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದು. ಡಿಸೆಂಬರ್ ತಿಂಗಳಲ್ಲಿ 3 ವಿದೇಶಿ ಡ್ರಗ್ಸ್ ಪೆಡ್ಲರ್ ಸೇರಿದಂತೆ 73 ಜನ ಆರೋಪಿಗಳನ್ನು ದಸ್ತಗಿರಿ ಮಾಡಿ ಅವರುಗಳ ವಶದಿಂದ 1 25,20.65,000/- ಮೌಲ್ಯದ 220.501 ಕೆ.ಜಿ ಡ್ರಗ್ಸ್ ವಶಪಡಿಸಿಕೊಂಡು 54 ಪ್ರಕರಣಗಳನ್ನು ದಾಖಅಸಲಾಗಿದೆ.
ಕ್ಲಬ್‌ಗಳು, ಪಬ್‌ಗಳು ಮತ್ತು ರೆಸ್ಟೋರೆಂಟ್‌ಗಳು ಹೊಸ ವರ್ಷಾಚರಣೆ ನಿಮಿತ್ತ ಸದಸ್ಯರುಗಳು ಮತ್ತು ಅತಿಥಿಗಳಿಗೆ ಔತಣ ಕೂಟ / ಇವೆಂಟ್‌ಗಳಿಗೆ ಅನುಮತಿ ನೀಡುವಾಗ ನಿಗಧಿತ ಮಿತಿಯನ್ನು ಮೀರದಂತೆ ಪಾಸ್‌ಗಳನ್ನು ವಿತರಿಸುವಂತೆ ಮಾಲೀಕರಿಗೆ ಸೂಚನೆಗಳನ್ನು ನೀಡಲಾಗಿದೆ.
ಹೊಸ ವರ್ಷಾಚರಣೆ ಸಲುವಾಗಿ ಅಕ್ರಮವಾಗಿ ಸಂಗ್ರಹಿಸಿ ಇಟ್ಟಿರುವ ಮದ್ಯವನ್ನು ಪತ್ತೆಮಾಡಿ ಕ್ರಮ ಕೈಗೊಳ್ಳಲು ಪೊಲೀಸ್ ಮತ್ತು ಅಬಕಾರಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಜಂಟಿ ಕಾರ್ಯಾಚರಣೆ ನಡೆಸಿ, ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದು.
ಮಧ್ಯರಾತ್ರಿ 1-00 ಗಂಟೆಯವರೆಗೆ ಸಾರ್ವಜನಿಕವಾಗಿ ಹೊಸ ವರ್ಷಾಚರಣೆಗೆ ಸರ್ಕಾರದ ಅನುಮತಿ ಇದ್ದು. ನಿಗಧಿತ ಸಮಯದವರೆಗೆ ಮಾತ್ರ ಸಾರ್ವಜನಿಕರು ಹೊಸ ವರ್ಷಾಚರಣೆ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಲಾಗಿದೆ.
ಸಂಚಾರ ವಿಭಾಗದ ಪೊಲೀಸ್ ಅಧಿಕಾರಿ / ಸಿಬ್ಬಂದಿಗಳು ಸಹಾ ಹೊಸ ವರ್ಷಾಚರಣೆ ಬಂದೋಬಸ್ತ್ಗೆ ನಿಯೋಜಿಸಲಾಗಿದೆ. ಸುರಕ್ಷತೆ ದೃಷ್ಟಿಯಿಂದ ನಗರದ ಎಲ್ಲಾ ಮೇಲು ಸೇತುವೆಗಳಲ್ಲಿ ವಾಹನ ಸಂಚಾರ ನಿರ್ಭಂದಿಸಲಾಗಿದೆ.
ಬೆಂಗಳೂರು ನಗರದ ಹೊರ ವಲಯಗಳಲ್ಲಿ ಕೆಲವರು ಅನಧಿಕೃತವಾಗಿ ರೇವ್ ಪಾರ್ಟಿಗಳನ್ನು ಆಯೋಜಿಸುವ ಬಗ್ಗೆ ಮತ್ತು ಮಾದಕವಸ್ತುಗಳ ಸೇವನೆಗೆ ಅನುವು ಮಾಡುವ ಬಗ್ಗೆಯೂ ಕೂಡ ಕಟ್ಟೆಚ್ಚರ ವಹಿಸಲಾಗಿದ್ದು. ಅಂತಹವರ ಮೇಲೆ ಉಗ್ರ ಕಾನೂನುಕ್ರಮ ಕೈಗೊಳ್ಳಲಾಗುವುದು.
ದಿನಾಂಕ: 31-12-2024 ರಂದು ಬ್ರಿಗೇಡ್ ರಸ್ತೆಯಲ್ಲಿ ವಾಹನ ಸಂಚಾರ ನಿರ್ಭಂದಿಸಿ, ಸಾರ್ವಜನಿಕರಿಗೆ ನಡಿಗೆಯ ಮೂಲಕ ಏಕ ಮುಖ ಪ್ರವೇಶಕ್ಕೆ ಮಾತ್ರ ಅವಕಾಶ ಮಾಡಿದ್ದು. ಎಂ.ಜಿ ರಸ್ತೆಗೆ ಪ್ರವೇಶಿಸುವವರಿಗೆ ಅನಿಲ್ ಕುಂಬ್ಳೆ ಸರ್ಕಲ್ ನಿಂದ ಹಾಗೂ ಮೆಯೋ ಹಾಲ್ ಜಂಕ್ಷನ್ ಮೂಲಕ ಎಂ.ಜಿ.ರಸ್ತೆ ಪ್ರವೇಶಿಸಬಹುದಾಗಿದ್ದು, ನಂತರ ಬ್ರಿಗೇಡ್ ರಸ್ತೆ ಜಂಕ್ಷನ್ ಮೂಲಕ ಬ್ರಿಗೇಡ್ ರಸ್ತೆಗೆ ಪ್ರವೇಶಿಸಿ ಏಕಮುಖವಾಗಿ ಚಲಿಸಿ ಒಪೇರಾ ಜಂಕ್ಷನ್‌ನಲ್ಲಿ ಹೊರ ಹೋಗಲು ಅವಕಾಶ ಮಾಡಲಾಗಿದೆ. ಸಾರ್ವಜನಿಕರು ಸದರಿ ಸ್ಥಳಗಳಲ್ಲಿ ಅಳವಡಿಸಲಾಗಿರುವ ಡಿ.ಎಫ್.ಎಂ.ಡಿ ಮೂಲಕ ಪ್ರವೇಶಿಸುವುದು ಹಾಗೂ ಪೊಲೀಸ್ ತಪಾಸಣೆಗೆ ಸಹಕರಿಸಲು
ಕೋರಿದೆ.
ಈ ಹಿಂದೆ ವರ್ಷಾಚರಣೆಯನ್ನು ಮುಗಿಸಿಕೊಂಡು ಸಾರ್ವಜನಿಕರು ವಾಪಸ್ ಹೋಗುವ ಸಂದರ್ಭದಲ್ಲಿ ಎಂ.ಜಿ.ರಸ್ತೆಯ ಮೆಟ್ರೋ ನಿಲ್ದಾಣದಲ್ಲಿ ಹೆಚ್ಚಿನ ಜನಸಂದಣಿಯಾಗಿ ನೂಕುನುಗ್ಗಲು ಪರಿಸ್ಥಿತಿ ನಿರ್ಮಾಣವಾದ್ದರಿಂದ ಈ ವರ್ಷ ರಾತ್ರಿ 11-00 ಗಂಟೆಯಿಂದ 02-00 ಗಂಟೆಯವರೆಗೆ ಎಂ.ಜಿ.ರಸ್ತೆಯ ಮೆಟ್ರೋ ನಿಲ್ದಾಣದ ಮೂಲಕ ಪ್ರಯಾಣಿಕರು ನಿರ್ಗಮಿಸಲು ಅವಕಾಶವಿರುವುದಿಲ್ಲ. ಬದಲಾಗಿ ಸಾರ್ವಜನಿಕರು ಎಂ.ಜಿ. ರಸ್ತೆಯಿಂದ ವಾಪಸ್ ಹೋಗುವ ಸಂದರ್ಭದಲ್ಲಿ ಟ್ರಿನಿಟಿ ಸರ್ಕಲ್ ಹಾಗೂ ಕಬ್ಬನ್‌ಪಾರ್ಕ್ ಮೆಟ್ರೋ ನಿಲ್ದಾಣದ ಮೂಲಕ ನಿರ್ಗಮಿಸಲು ಕೋರಿದೆ.
ನಗರದ ಇತರೆ ವಿಭಾಗಗಳ ಪ್ರಮುಖ ಹೊಸ ವರ್ಷ ಆಚರಣೆಯ ಸ್ಥಳಗಳಾದ ಫೀನಿಕ್ಸ್ ಮಾಲ್, ಓರಾಯನ್ ಮಾಲ್ ಹಾಗೂ ನಗರದ ಇತರೆ ಪ್ರಮುಖ ಸ್ಥಳಗಳಲ್ಲಿ ನಡೆಯಲಿರುವ ಹೊಸ ವರ್ಷಾಚರಣೆ ಸಂಬಂಧ ಅಗತ್ಯ ಮುನ್ನೆಚ್ಚರಿಕೆ ಮತ್ತು ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಿಕೊಳ್ಳಲಾಗುವುದು. ಕೋರಮಂಗಲ, ಇಂದಿರಾನಗರ, ಮಾರತ್ತಹಳ್ಳಿ, ಹೆಚ್.ಆರ್.ಬಿ.ಆರ್ ಲೇಔಟ್, ಪೋರ್ಟ್ ರಸ್ತೆ, ವೈಟ್‌ಫೀಲ್ಡ್ ಪ್ರದೇಶಗಳಲ್ಲಿ ನಡೆಯಲಿರುವ ಹೊಸ ವರ್ಷಾಚರಣೆಯ ಬಂದೋಬಸ್ತ್ ಕರ್ತವ್ಯಕ್ಕೆ 4 ಡಿಸಿಪಿ. 6-ಎ.ಸಿ.ಪಿ. 18-ಪೊಲೀಸ್ ಇನ್ಸ್‌ಪೆಕ್ಟರ್ ಸೇರಿದಂತೆ 2414 ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.
ಪ್ರಮುಖ ಸ್ಥಳಗಳಲ್ಲಿ ಹೆಚ್ಚುವರಿಯಾಗಿ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿರುತ್ತದೆ. ದಿನಾಂಕ: 31.12.2024 ರಂದು ರಾತ್ರಿ ಡೋನ್ ಕ್ಯಾಮರಾಗಳನ್ನು ಕಾರ್ಯಾಚರಣೆಗೊಳಿಸಲಾಗಿದೆ.
ನಗರದ ಪ್ರಮುಖ ಸ್ಥಳಗಳನ್ನು ಶ್ವಾನದಳ ಮತ್ತು 16 ಚೆಕ್ ತಂಡಗಳಿಂದ ತಪಾಸಣೆ ಕೈಗೊಳ್ಳಲಾಗುತ್ತದೆ.
ದಿನಾಂಕ:31/12/2024 ರಂದು ರಾತ್ರಿ II-00 ಗಂಟೆಯಿಂದ ದಿನಾಂಕ 01/01/2025 ರಂದು ಬೆಳಗಿನ ಜಾವ 5-00 ಗಂಟೆಯ ವರೆಗೆ ನಗರದ ಎಲ್ಲಾ (ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೋಗುವ ಮೇಲ್ಲೇತುವೆಯನ್ನು ಹೊರತು ಪಡಿಸಿ) ಮೇಲು ಸೇತುವೆಗಳ ಮೇಲೆ ಅಪಘಾತಗಳು, ಬೀಳುವುದು ಇತ್ಯಾದಿ ಅನಾಹುತಗಳನ್ನು ತಡೆಗಟ್ಟಲು ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.
7. ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲುಸೇತುವೆ ರಸ್ತೆಯ ಮೇಲೆ ದಿನಾಂಕ:31.12,2024 ರಂದು ರಾತ್ರಿ 10:00 ಗಂಟೆಯಿಂದ ದಿನಾಂಕ:01.01.2025 ರ ಬೆಳಗ್ಗೆ 06:00 ಗಂಟೆಯವರೆಗೆ ದ್ವಿಚಕ್ರ ವಾಹನಗಳ ಸಂಚಾರವನ್ನೂ ಸಹ ನಿಷೇಧಿಸಲಾಗಿರುತ್ತದೆ.
8. ಮದ್ಯಪಾನ ಸೇವನೆ ಹಾಗೂ ಮಾದಕವಸ್ತುಗಳ ಸೇವನೆ ಮಾಡಿ ವಾಹನ ಚಾಲನೆ ಮಾಡುವವರ ವಿರುದ್ಧ ಶೂನ್ಯ ಸಹನೆಯನ್ನು ಜಾರಿಗೆ ತರಲಾಗಿದೆ. ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವಂತಹ ಚಾಲಕ ಸವಾರರ ಪತ್ತೆಗೆ ರಾತ್ರಿ ಇಡೀ ಬೇರೆ ಬೇರೆ ಸ್ಥಳಗಳಲ್ಲಿ ತಪಾಸಣೆ ಮಾಡುವ ಚೆಕ್ ಪಾಯಿಂಟ್‌ಗಳನ್ನು ಹಾಕಲಾಗಿದ್ದು ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಎಲ್ಲಾ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
9, ಅತಿವೇಗ ಮತ್ತು ಅಜಾಗರೂಕತೆಯಿಂದ ವಾಹನ ಚಾಲನೆ ಮಾಡುವ ಹಾಗೂ ವೀಲಿಂಗ್/ಡ್ರಾಗ್ ರೇಸ್‌ರಲ್ಲಿ ಭಾಗಿಯಾಗಿ ಇತರೆ ಸಾರ್ವಜನಿಕರಿಗೆ ಅನಾನುಕೂಲ ಮಾಡುವಂತಹ ಮೊಟಾರ್‌ಸೈಕಲ್ ಸವಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇಂತಹ ಘಟನೆಗಳು ಕಂಡು ಬಂದಲ್ಲಿ ಪೊಲೀಸ್ ಸಹಾಯವಾಣಿ ಸಂಖ್ಯೆ:112 ಗೆ ಮಾಹಿತಿ ನೀಡಲು ಕೋರಲಾಗಿದೆ.
10. ನೋ-ಪಾರ್ಕಿಂಗ್ ಸ್ಥಳಗಳಲ್ಲಿ ವಾಹನಗಳನ್ನು ಅನಧಿಕೃತವಾಗಿ ನಿಲ್ಲಿಸಿದ್ದಲ್ಲಿ ಅಂತಹವುಗಳನ್ನು ಟೋ-ಮಾಡಲಾಗುವುದು. 11. ಹೊಸ ವರ್ಷಾಚರಣೆಗೆ ವಿವಿಧ ವಾಣಿಜ್ಯ ಕೇಂದ್ರಗಳು, ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆ ಹಾಗೂ ಇತ್ಯಾದಿ ಕಡೆಗೆ ಆಗಮಿಸುವ ಸಾರ್ವಜನಿಕರು ತಮ್ಮ ಸ್ವಂತ ವಾಹನಗಳನ್ನು ಬಳಸದೆ ಸಾರ್ವಜನಿಕ ಸಾರಿಗೆ ವ್ಯವಸ್ಥೆಗಳಾದ ನಮ್ಮ ಮೆಟ್ರೋ, ಬಿ.ಎಂ.ಟಿ.ಸಿ, ಕೆ.ಎಸ್.ಆರ್.ಟಿ.ಸಿ, ಆಟೋರಿಕ್ಷಾ ಅಥವಾ ಕ್ಯಾಬ್‌ಗಳನ್ನು ಬಳಸುವಂತೆ ಕೋರಲಾಗಿದೆ. 12. ಸಿ.ಬಿ.ಡಿ. ಪ್ರದೇಶದ ವ್ಯಾಪ್ತಿಯಲ್ಲಿ ಭಾರೀ ಸರಕು ಸಾಗಾಣಿಕೆ ವಾಹನಗಳ ಸಂಚಾರವನ್ನು ತಡೆಯಲು ಓಲ್ಡ್ ಉದಯ ಟಿ.ವಿ.ಜಂಕ್ಷನ್, ಖೋಡೆ, ಟೌನ್‌ಹಾಲ್ ಜಂಕ್ಷನ್, ಚಾಲುಕ್ಯ ಜಂಕ್ಷನ್, ದೊಮ್ಮಲೂರು, ಮೇಕ್ರಿ ಸರ್ಕಲ್‌ಗಳಲ್ಲಿ ಮಾರ್ಗ ಬದಲಾವಣೆಯನ್ನು ದಿನಾಂಕ: 3II2.2024 ರ ರಾತ್ರಿ 08:00 ಗಂಟೆಯಿಂದ ದಿನಾಂಕ: 01.01.2025 ರ ಬೆಳಗ್ಗೆ 06:00 ಗಂಟೆಯವರೆಗೆ ಮಾಡಲಾಗುವುದು.
ಬೆಂಗಳೂರು ನಗರದ ಎಲ್ಲಾ ನಾಗರೀಕರಿಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳನ್ನು ಕೋರುತ್ತಾ, ಶೂನ್ಯ ಅಪಘಾತ ಹಾಗೂ ಸುರಕ್ಷಿತ ಹೊಸ ವರ್ಷವನ್ನು ನಿರೀಕ್ಷಿಸೋಣವೆಂದು ಆಶಿಸುತ್ತೇವೆ. ಸಾರ್ವಜನಿಕರು ಸಹಕರಿಸಲು ಕೋರಲಾಗಿದೆ.
ಹೊಸ ವರ್ಷಾಚರಣೆಯನ್ನು ಆಚರಿಸುವ ನಗರದ ಸಾರ್ವಜನಿಕರು, ಮಹಿಳೆಯರು, ಮತ್ತು ಮಕ್ಕಳ ಭದ್ರತೆ ಮತ್ತು ಸುರಕ್ಷತೆ ದೃಷ್ಠಿಯಿಂದ ನಗರ ಪೊಲೀಸರಿಂದ ಕೆಲವು ಸಲಹಾ ಸೂಚನೆಗಳು, ಸಾರ್ವಜನಿಕರು ಮಾಡಬೇಕಾದ ಅಂಶಗಳು.
1. ಹೊಸ ವರ್ಷಾಚರಣೆಯನ್ನು ಶಾಂತಿಯುತವಾಗಿ ಆಚರಿಸುವುದು.
2. ಕಾನೂನು ನಿಯಮಗಳನ್ನು ಪಾಲನೆ ಮಾಡಿ, ನಿಯಮಿತವಾಗಿ ವಾಹನ ಚಾಲನೆ ಮಾಡಿ ಮತ್ತು ಸಂಚಾರಿ ನಿಮಯಗಳನ್ನು ಕಡ್ಡಾಯವಾಗಿ ಪಾಲಿಸಿ.
3. ಸಾರ್ವಜನಿಕರು ಶಾಂತಿ ಮತ್ತು ಶಿಸ್ತನ್ನು ಕಾಪಾಡಲು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂಧಿಯವರ ಜೊತೆ ಸಹಕರಿಸಿ
4. ಪೊಲೀಸರು ಮತ್ತು ಸ್ಥಳೀಯ ಆಡಳಿತದಿಂದ ಅನುಮೋದಿಸಲ್ಪಟ್ಟ ಅಧೀಕೃತ ಸ್ಥಳಗಳಲ್ಲಿ ವರ್ಷಾಚರಣೆಯನ್ನು ಆಚರಿಸಿ.
5. ತುರ್ತು ಸಂದರ್ಭಗಳಲ್ಲಿ 112 ಅಥವಾ ಸಮೀಪದ ಪೊಲೀಸ್ ಠಾಣೆಯನ್ನು/ಪೊಲೀಸ್ ಕಿಯೋಸ್ಕ್ ಅನ್ನು ಸಂಪರ್ಕಿಸುವುದು.
6. ವರ್ಷಾಚರಣೆಯ ಸಂದರ್ಭದಲ್ಲಿ ಅಕ್ಕಪಕ್ಕದವರ ಭದ್ರತೆ ಮತ್ತು ಸುರಕ್ಷತೆಯ ಬಗ್ಗೆ ಕಾಳಜಿ ವಹಿಸುವುದು.
7. ಹೆಚ್ಚು ಬೆಳಕಿರುವ ಪ್ರದೇಶಗಳಲ್ಲಿ ವರ್ಷಾಚರಣೆಯನ್ನು ಆಚರಿಸಿ.
8. ಸಾರ್ವಜನಿಕರು ಮಹಿಳೆಯರು, ಮಕ್ಕಳು ಮತ್ತು ಹಿರಿಯರ ಸುರಕ್ಷತೆ ಬಗ್ಗೆ ಗಮನಹರಿಸುವುದು.
9. ಸಾರ್ವಜನಿಕರು ಜನಸಂದಣಿ ಇರುವ ಸ್ಥಳಗಳಲ್ಲಿ ಹೆಚ್ಚು ಜಾಗರೂಕತೆಯಿಂದ ಇರುವುದು.
10. ಯಾವುದೇ ಅಹಿತಕರ ಘಟನೆ/ಕಾನೂನುಬಾಹಿರ ಚಟುವಟಿಕೆಗಳು ಕಂಡುಬಂದಲ್ಲಿ ತಕ್ಷಣ ಹತ್ತಿರದ ಪೊಲೀಸರಿಗೆ ಮಾಹಿತಿಯನ್ನು ನೀಡುವುದು.
11. ಸಾರ್ವಜನಿಕರು ತಮ್ಮ ಚಲನವಲನಗಳ ಬಗ್ಗೆ ಕುಟುಂಬಕ್ಕೆ ಮಾಹಿತಿಯನ್ನು ಆಗಿದ್ದಾಂಗೆ ನೀಡುತ್ತಿರಿ.
12. ವರ್ಷಾಚರಣೆಯನ್ನು ಆಚರಿಸುವ ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರು ಮತ್ತು ಮಕ್ಕಳು ಬೆಲೆಬಾಳುವ ಆಭರಣಗಳನ್ನು ಧರಿಸದೇ ಇರುವುದು ಒಳಿತು. ಅಲ್ಲದೇ ಮೊಬೈಲ್ ಫೋನ್ ಮತ್ತು ಹಣವನ್ನು ಸುರಕ್ಷಿತವಾಗಿ ಇಟ್ಟುಕೊಳ್ಳುವುದು.
13. ಇತರೆ ಧರ್ಮದವರಿಗೆ ಘಾಸಿಯಾಗದಂತೆ ವರ್ಷಚರಣೆಯನ್ನು ಆಚರಿಸಿ.
14. ಭದ್ರತಾ ಸಿಬ್ಬಂಧಿಗಳಾದ ಪೊಲೀಸ್, ಹೋಂ ಗಾರ್ಡ್, ಜೊತೆ ಸಹಕರಿಸಿ
15. ಆಟೋ ಮತ್ತು ಕ್ಯಾಬ್‌ಗಳಲ್ಲಿ ಪ್ರಯಾಣಿಸುವಾಗ ಅದೀಕೃತವೇ ಎಂಬುದನ್ನು ಖಾತ್ರಿಪಡಿಸಿಕೊಳ್ಳಿ. 16. ಪೊಲೀಸರು ಸೂಚಿಸಿರುವ ರಸ್ತೆಗಳಲ್ಲಿಯೇ ಸಂಚರಿಸಿ.
ಸಾರ್ವಜನಿಕರು ಮಾಡಬಾರದ ಅಂಶಗಳು
1. ಮದ್ಯಪಾನ ಮತ್ತು ಮಾದಕ ವಸ್ತುಗಳನ್ನು ಸೇವಿಸಿ ವಾಹನ ಚಾಲನೆ ಮಾಡಬೇಡಿ, ಇದು ಕಾನೂನು ಬಾಹಿರವಾಗಿದ್ದು, ಜೀವಕ್ಕೆ ಹಾನಿ ಉಂಟು ಮಾಡಬಹುದು.
2. ಪಟಾಕಿಗಳನ್ನು ಸಿಡಿಸಬಾರದು. ಪರಿಸರ ಮಾಲಿನ್ಯ ಉಂಟಾಗುವುದನ್ನು ತಪ್ಪಿಸಿ.
3. ಅನಾವಶ್ಯಕವಾಗಿ ವಾಹನದ ಹಾರ್ನ್ ಮೊಳಗಿಸಬೇಡಿ, ಹಾಗೂ ಪೀಪಿ ಯನ್ನು ಊದಬೇಡಿ.
4. ಅಪಾಯಕಾರಿಯಾಗಿ, ಅತೀವೇಗ ಮತ್ತು ಅಜಾಗರೂಕತೆಯಿಂದ ವಾಹನಗಳನ್ನು ಚಲಾಯಿಸುವಂತಿಲ್ಲ. 5. ಪೊಲೀಸರು ಮತ್ತು ಸ್ಥಳೀಯ ಆಡಳಿತದಿಂದ ಅನುಮತಿ ಪಡೆಯದೇ ಯಾವುದೇ ಸಮಾರಂಭಗಳನ್ನು ಆಯೋಜಿಸುವಂತಿಲ್ಲ.
6. ವಯಸ್ಸಾದವರಿಗೆ,
ಖಾಯಿಲೆ ಮನುಷ್ಯರಿಗೆ ತೊಂದರೆಯಾಗುವಂತೆ
ಸಮಾರಂಭಗಳನ್ನು ಆಯೋಜಿಸಬಾರದು.
7. ಅವಧಿ ಮೀರಿ ಶಬ್ದಮಾಲಿನ್ಯವನ್ನುಂಟು ಮಾಡುವುದು ಕಾನೂನುಬಾಹಿರವಾಗಿದೆ.
ವರ್ಷಾಚರಣೆಯ
8. ಪೊಲೀಸರು ಮತ್ತು ಸ್ಥಳೀಯ ಆಡಳಿತ ರೂಪಿಸುವ ಭದ್ರತಾ ಮಾರ್ಗದರ್ಶಿಗಳನ್ನು ಉಲ್ಲಂಘಿಸುವಂತಿಲ್ಲ. 9. ಸಾರ್ವಜನಿಕರು ಅನಾವಶ್ಯಕವಾಗಿ ಗೊಂದಲ ಮತ್ತು ದ್ವಂದ್ವಗಳಿಗೆ ಎಡೆ ಮಾಡಿಕೊಡಬೇಡಿ.
10. ನಿರ್ಭಂಧಿತ ಸ್ಥಳ/ಪ್ರದೇಶಗಳಿಗೆ ಪ್ರವೇಶಿಸಬೇಡಿ.
II. ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಮತ್ತು ದೂಮಪಾನವನ್ನು ಮಾಡುವುದು ಕಾನೂನು ಬಾಹಿರವಾಗಿರುತ್ತದೆ.
12. ಸಾರ್ವಜನಿಕರು ಇತರರಿಗೆ ತೊಂದರೆಯಾಗುವಂತೆ ನಡೆದುಕೊಳ್ಳಬೇಡಿ.
13. ಪೊಲೀಸ್ ಬ್ಯಾರಿಕೇಡ್‌ಗಳನ್ನು ಹಾಯ್ದು ಹೋಗಲು ಪ್ರಯತ್ನಿಸಬೇಡಿ
14. ತಮಾಷೆ ಮತ್ತು ಮೋಜಿಗಾಗಿ ತುರ್ತು ಕರೆಗಳಿಗೆ ಸಂಪರ್ಕಿಸುವ ಕೆಲಸದಲ್ಲಿ ತೊಡಗಿಸಿಕೊಳ್ಳಬೇಡಿ.
15. ರಸ್ತೆ ಮಧ್ಯೆ ಅನಾವಶ್ಯಕವಾಗಿ ನಿಂತುಕೊಳ್ಳುವುದು ಮತ್ತು ಗುಂಪುಗೂಡುವಂತಿಲ್ಲ.
16. ಸಮಾಜದ ಶಾಂತಿ ಕದಡುವಂತಹ ಯಾವುದೇ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಡಿ.
17. ರಸ್ತೆ ದೀಪ ಸೇರಿದಂತೆ ಸರ್ಕಾರಿ ಸ್ವತ್ತುಗಳನ್ನು ಹಾನಿಗೊಳಿಸಬೇಡಿ.
18. ಪೋಷಕರು ಅಪ್ರಾಪ್ತ ವಯಸ್ಕ ಮಕ್ಕಳಿಗೆ ವಾಹನಗಳನ್ನು ಚಾಲನೆ ಮಾಡಲು ನೀಡಬೇಡಿ. 19. ಅನಾವಶ್ಯಕವಾಗಿ ಸಾರ್ವಜನಿಕರೊಂದಿಗೆ ಹಾಗೂ ಅಪರಿಚಿತರೊಂದಿಗೆ ವಾದ, ವಾಗ್ವಾದಗಳಲ್ಲಿ ತೊಡಗಿಸಿಕೊಳ್ಳಬೇಡಿ.
20. ಸಾರ್ವಜನಿಕರು ಕೃತಕ ವಿಕೃತ ಮುಖವಾಡಗಳನ್ನು ಧರಿಸಿ, ಬೇರೆಯವರಿಗೆ ಕಿರಿಕಿರಿ ಮಾಡಬೇಡಿ.