ಬೆಂಗಳೂರು : 2025-26ನೇ ಸಾಲಿನ ರಾಜ್ಯ `ಸರ್ಕಾರಿ ನೌಕರರ’ ವರ್ಗಾವಣೆ ಸಂಬಂಧ ರಾಜ್ಯ ಸರ್ಕಾರವು ಮಾರ್ಗಸೂಚಿಗಳನ್ನು ಪ್ರಕಟಿಸಿದೆ.
ಮೇಲೆ ಓದಲಾದ ಸರ್ಕಾರಿ ಆದೇಶದಲ್ಲಿ, 2025-26ನೇ ಸಾಲಿನಲ್ಲಿ ಸರ್ಕಾರಿ ನೌಕರರ ವರ್ಗಾವಣೆಗಳನ್ನು ನಿಯಂತ್ರಿಸಲು ವರ್ಗಾವಣಾ ಮಾರ್ಗಸೂಚಿಗಳನ್ನು ನೀಡಲಾಗಿದೆ. ಸದರಿ ಆದೇಶದ ಕಂಡಿಕೆ 4ರಲ್ಲಿ 2025-26ನೇ ಸಾಲಿನ ಸಾರ್ವತ್ರಿಕ ವರ್ಗಾವಣೆಗಳನ್ನು ಸದರಿ ಆದೇಶದಲ್ಲಿ ವಿವರಿಸಿರುವ ಷರತ್ತುಗಳಿಗೊಳಪಟ್ಟು ದಿನಾಂಕ: 12.05.2025 ರಿಂದ 14.06.2025 ರವರೆಗೆ ಕೈಗೊಳ್ಳಲು ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಆಯಾ ಇಲಾಖಾ ಸಚಿವರಿಗೆ ಹಾಗೂ ಗ್ರೂಪ್-ಸಿ ಮತ್ತು ಗ್ರೂಪ್-ಡಿ ವೃಂದದ ನೌಕರರಿಗೆ ಸಂಬಂಧಿಸಿದಂತೆ ಆಯಾ ನೇಮಕಾತಿ ಪ್ರಾಧಿಕಾರಗಳಿಗೆ ಅಧಿಕಾರ ಪ್ರತ್ಯಾಯೋಜಿಸಿ ಆದೇಶಿಸಲಾಗಿತ್ತು. ಸದರಿ ವರ್ಗಾವಣೆ ಅವಧಿಯನ್ನು ವಿಸ್ತರಿಸುವುದು ಅವಶ್ಯಕವೆಂದು ಪರಿಗಣಿಸಿ, ಸರ್ಕಾರವು ಈ ಕೆಳಕಂಡಂತೆ ಆದೇಶಿಸಿದೆ.
ಸರ್ಕಾರಿ ಆದೇಶ ಸಂಖ್ಯೆ: ಸಿಆಸುಇ 14 ಸೇನೌವ 2025, ಬೆಂಗಳೂರು, ದಿನಾಂಕ: 17.06.2025.
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ದಿನಾಂಕ: 12.05.2025ರ ಸರ್ಕಾರಿ ಆದೇಶದಲ್ಲಿ ವಿವರಿಸಿರುವ ಷರತ್ತಿಗೊಳಪಟ್ಟು 2025-26ನೇ ಸಾಲಿನಲ್ಲಿ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಆಯಾ ಇಲಾಖಾ ಸಚಿವರಿಗೆ ಹಾಗೂ ಗ್ರೂಪ್-ಸಿ ಮತ್ತು ಗ್ರೂಪ್-ಡಿ ವೃಂದದ ನೌಕರರಿಗೆ ಸಂಬಂಧಿಸಿದಂತೆ ಆಯಾ ನೇಮಕಾತಿ ಪ್ರಾಧಿಕಾರಗಳಿಗೆ ಅಧಿಕಾರ ಪ್ರತ್ಯಾಯೋಜಿಸಲಾಗಿದ್ದ ಅವಧಿಯನ್ನು ದಿನಾಂಕ: 30.06.2025ರವರೆಗೆ ವಿಸ್ತರಿಸಿ ಆದೇಶಿಸಿದೆ. ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ