ಮಂಡ್ಯ : ಇಂದು ಮಂಡ್ಯ ಮೈಸೂರು ಭಾಗದಲ್ಲಿ ಭಾರಿ ಮಳೆ ಆಗುತ್ತಿದ್ದು, ಗುಡುಗು ಮಿಂಚು, ಆಲಿಕಲ್ಲು ಸಹಿತ ವರುಣ ಅಬ್ಬರಿಸಿದ್ದಾನೆ. ಬಿಸಿಲಿನಿಂದ ಬಸವಳಿದಿದ್ದ ಮಂಡ್ಯ ಮೈಸೂರು ಜನತೆಗೆ ಇದೀಗ ವರುಣ ತಂಪೆರೆದಿದ್ದಾನೆ.
ಹೌದು ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದೆ. ರಾಯಸಮುದ್ರ, ಶೀಳನೆರೆ, ಹರಳಹಳ್ಳಿ ಹಾಗು ನೀತಿಮಂಗಲ ಸುತ್ತಮುತ್ತ ಆಲಿಕಲ್ಲು ಮಳೆಯಾಗಿದೆ. ಬಿಸಿಲಿನ ಜಳಕ್ಕೆ ಬಳಲಿ ಬೆಂಡಾಗಿದ್ದವರಿಗೆ ಇದೀಗ ವರುಣ ತಂಪೆರಿದಿದ್ದಾನೆ. ಮಳೆಯ ಆಗಮನದಿಂದ ರೈತರ ಮುಖದಲ್ಲಿ ಇದೀಗ ಮಂದಹಾಸ ಮೂಡಿದೆ.
ಬಿರುಗಾಳಿ ಸಹಿತ ಭಾರಿ ಮಳೆಗೆ ಬೃಹತ್ ಗಾತ್ರದ ಮರವೊಂದು ಧರೆಗುರುಳಿದಿದೆ. ಮೈಸೂರು ಮತ್ತು ಅರಸಿಕೆರೆ ರಾಜ್ಯ ಹೆದ್ದಾರಿಯಲ್ಲಿ ಈ ಒಂದು ಘಟನೆ ನಡೆದಿದೆ. ಹಾದನೂರು ಗ್ರಾಮದ ಬಳಿ ಗಾತ್ರದ ಮರ ಒಂದು ಧರೆಗೆ ಉರುಳಿದೆ. ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ಹಾದನೂರಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು. ರಸ್ತೆಯಲ್ಲಿ ಬಿದ್ದಿದ್ದ ಮರವನ್ನು ಸ್ಥಳೀಯ ನಿವಾಸಿಗಳು ತೆರವುಗೊಳಿಸಿದ್ದಾರೆ.