ರಾಯಚೂರು : ಸಚಿವ ಶರಣಪ್ರಕಾಶ್ ಪಾಟೀಲ್ ಗೆ ಕಾಂಗ್ರೆಸ್ ಕಾರ್ಯಕರ್ತ ತರಾಟೆಗೆ ತೆಗೆದುಕೊಂಡಿರುವ ಘಟನೆ ನಡೆದಿದೆ. ಇಂದು ಸಚಿವ ಶರಣಪ್ರಕಾಶ್ ಪಾಟೀಲ್ ಅವರು ರಾಯಚೂರು ಜಿಲ್ಲೆಯ ಲಿಂಗಸೂಗೂರಿಗೆ ಭೇಟಿ ನೀಡಿದ ವೇಳೆ ಕಾಂಗ್ರೆಸ್ ಕಾರ್ಯಕರ್ತ ತರಾಟೆಗೆ ತೆಗೆದುಕೊಂಡಿರುವ ಘಟನೆ ನಡೆದಿದೆ.
ಶರಣಪ್ರಕಾಶ್ ಪಾಟೀಲ್ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದು, ಇಂದು ಭೇಟಿ ನೀಡಿದ್ದರು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತ ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರುತ್ತಿರಿ ಅಂತ ಪ್ರಶ್ನಿಸಿದ್ದಾನೆ. ಆಗ ನೀವು ಯಾರು ಕೇಳೋಕೆ ಎಂದು ಸಚಿವರು ಕೇಳಿದ್ದಾರೆ. ಆಗ ನಾನು ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತರ ಅಂತ ಶರಣಪ್ರಕಾಶ್ ಪಾಟೀಲ್ ವಿರುದ್ಧ ಆಕ್ರೋಶ ಹೊರಹಾಕಿದ್ದಾನೆ.