ಬೆಂಗಳೂರು : ಹಾವೇರಿಯಲ್ಲಿ ಫೆ.14ರಂದು ಭೂ ಗ್ಯಾರಂಟಿ ಯೋಜನೆಯ ಸಮರ್ಪಣಾ ಸಮಾವೇಶ ನಡೆಯಲಿದ್ದು, ಕಾರ್ಯಕ್ರಮ ದಲ್ಲಿ ಹಾವೇರಿ ಸೇರಿದಂತೆ ಸುತ್ತಲ 8 ಜಿಲ್ಲೆಗಳ ಸುಮಾರು 1.10 ಲಕ್ಷ ಜನರಿಗೆ ಭೂಮಿಯ ಹಕ್ಕುಪತ್ರ ವಿತರಿಸಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ವಿಕಾಸಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು,2013-18 2 5,842 ದುರಸ್ತಿ ಆಗಿದ್ದರೆ, 2018-23ರ ಅವಧಿಯಲ್ಲಿ 8,500 ಪ್ರಕರಣಗಳು ವಿಲೇವಾರಿಯಾಗಿವೆ. 2025ರ ಜನವರಿಯಿಂದ ಆರಂಭವಾದ ಈ ಅಭಿಯಾನದಡಿ ಸದ್ಯ ರಾಜ್ಯದೆಲ್ಲೆಡೆ 1,93,615 ಪ್ರಕರಣಗಳಲ್ಲಿ ಸರ್ವೆ ಮತ್ತು ಪೋಡಿ ದುರಸ್ತಿ ನಡೆಯುತ್ತಿದೆ. ಅಧಿಕಾರಿಗಳು ಜನರ ಮನೆ ಬಾಗಿಲಿಗೆ ತೆರಳಿ ಸೇವೆ ನೀಡುತ್ತಿರುವುದು ಸರಕಾರದ ಬದ್ಧತೆಯ ಕಾರ್ಯ ಎಂದು ಹೇಳಿದ್ದಾರೆ.
ಹಾವೇರಿಯಲ್ಲಿ ಫೆ.14ರಂದು ಭೂ ಗ್ಯಾರಂಟಿ ಯೋಜನೆಯ ಸಮರ್ಪಣಾ ಸಮಾವೇಶ ನಡೆಯಲಿದ್ದು, ಕಾರ್ಯಕ್ರಮ ದಲ್ಲಿ ಹಾವೇರಿ ಸೇರಿದಂತೆ ಸುತ್ತಲ 8 ಜಿಲ್ಲೆಗಳ ಸುಮಾರು 1.10 ಲಕ್ಷ ಜನರಿಗೆ ಭೂಮಿಯ ಹಕ್ಕುಪತ್ರ ವಿತರಿಸಲಾಗುತ್ತದೆ.ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿರುವ ಸರಕಾರದ ಆರನೇ ಗ್ಯಾರಂಟಿಯಾಗಿ ಭೂ ಗ್ಯಾರಂಟಿ ಯೋಜನೆಯನ್ನು ಜಾರಿ ಮಾಡಿದೆ. ಈ ಯೋಜನೆಯಡಿ ಮೊದಲ ಹಂತದಲ್ಲಿ 2025ರ ಮೇ ತಿಂಗಳಲ್ಲಿ ಹೊಸಪೇಟೆಯಲ್ಲಿ ಕಾರ್ಯಕ್ರಮ ಮಾಡಿ 1.11 ಲಕ್ಷ ಮಂದಿಗೆ ಹಕ್ಕುಪತ್ರ ವಿತರಿಸಲಾಗಿತ್ತು ಎಂದರು.
ದಾಖಲೆರಹಿತ ವಸತಿ ಪ್ರದೇಶಗಳಲ್ಲಿ ಬಡ ಜನರಿಗೆ ಭೂ ಮಾಲೀಕತ್ವ ಖಚಿತಪಡಿಸುವ ಉದ್ದೇಶಕ್ಕೆ ಭೂ ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೆ. ತಾಂಡಾ ಹಾಗೂ ಹಟ್ಟಿಗಳ ದಾಖಲೆರಹಿತ ವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತಿಸುವ ಕ್ರಮದಡಿ ಹಿಂದಿನ ಸರಕಾರ ಆರು ವರ್ಷಗಳಲ್ಲಿ 1 ಲಕ್ಷ ಹಕ್ಕುಪತ್ರ ವಿತರಿಸಿದೆ. ನಮ್ಮ ಸರಕಾರ ಎರಡೂವರೆ ವರ್ಷದಲ್ಲೇ 1.10 ಲಕ್ಷ ಜನರಿಗೆ ಹಕ್ಕುಪತ್ರ ನೀಡಿದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಮೃತರ ಹೆಸರಿನಲ್ಲಿ ಮುಂದು ವರಿದಿರುವ 49 ಲಕ್ಷ ಜಮೀನುಗಳನ್ನು ಗುರುತಿಸಿ ಅವುಗಳ ಮಾಲೀಕತ್ವವನ್ನು ವಾರಸುದಾರರಿಗೆ ಹಸ್ತಾಂತರಿಸುವ ಕಾರ್ಯ ನಡೆಯುತ್ತಿದೆ. ಈಗಾಗಲೇ 12 ಲಕ್ಷ ಮೂಲ ವಾರಸುದಾರರಿಗೆ ಜಮೀನು ಹಸ್ತಾಂತರಿಸಿ ಪಹಣಿ ವರ್ಗಾಯಿಸಲಾಗಿದೆ. ಹಳೆ ಭೂ ದಾಖಲೆಗಳ ನಕಲಿ ತಡೆಗಟ್ಟಲು ಭೂಸುರಕ್ಷಾ ಯೋಜನೆಯಡಿ 64 ಲಕ್ಷಕ್ಕೂ ಹೆಚ್ಚು ಪುಟಗಳನ್ನು ಸ್ಕ್ಯಾನ್ ಮಾಡಲಾಗಿದೆ. ಸಾರ್ವ ಜನಿಕರು ಆನ್ಲೈನ್ನಲ್ಲೇ ಕಂದಾಯ ದಾಖಲೆಗಳನ್ನು ಪಡೆಯುವ ವ್ಯವಸ್ಥೆ ಮಾಡಲಾಗಿದ್ದು, ಇದರಿಂದ ಮಧ್ಯವರ್ತಿಗಳ ಹಾವಳಿ ತಪ್ಪಲಿದೆ ಎಂದು ಹೇಳಿದ್ದಾರೆ.








