ಬೆಂಗಳೂರು: ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಮಠದ ಪೀಠಾಧ್ಯಕ್ಷ ಶಿವಮೂರ್ತಿ ಮುರುಘರಾಜೇಂದ್ರ ಶರಣರು ಮಠದ ಬ್ಯಾಂಕ್ ಖಾತೆಗಳ ಚೆಕ್ಗಳಿಗೆ ಸಹಿ ಹಾಕುವುದಕ್ಕೆ ಅವಕಾಶವನ್ನು ಹೈಕೋರ್ಟ್ ನೀಡಿದೆ.
ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಮಠದ ಪೀಠಾಧ್ಯಕ್ಷ ಶಿವಮೂರ್ತಿ ಮುರುಘರಾಜೇಂದ್ರ ಶರಣರು ಮಠದ ಬ್ಯಾಂಕ್ ಖಾತೆಗಳ ಚೆಕ್ಗಳಿಗೆ ಸಹಿ ಹಾಕುವುದಕ್ಕೆ ಅವಕಾಶ ಕಲ್ಪಿಸುವಂತೆ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ, ಮಠದ ವಿದ್ಯಾಪೀಠ ಸಂಸ್ಥೆಗಳ ಉದ್ಯೋಗಿ ಹಾಗೂ ಸಿಬ್ಬಂದಿಗೆ ವೇತನ ನೀಡುವುದಕ್ಕಾಗಿ ಅ. 3, 6 ಮತ್ತು 10ರಂದು ಮಾತ್ರ ಚೆಕ್ಗಳಿಗೆ ಸಹಿ ಹಾಕಬೇಕು. ಈ ವೇಳೆಯಲ್ಲಿ ವೇಳೆ ತನಿಖಾಧಿಕಾರಿ ಹಾಗೂ ಜೈಲು ಅಧೀಕ್ಷಕರು ಉಪಸ್ಥಿತರಿರಬೇಕು. ಅಲ್ಲದೇ, ಸಹಿ ಮಾಡಿದ ಚೆಕ್ಗಳ ನಕಲು (ಜೆರಾಕ್ಸ್) ಪ್ರತಿಗಳನ್ನು ವಿಚಾರಣಾಧೀನ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಸೂಚನೆ ನೀಡಿದೆ.