ಬೆಂಗಳೂರು : ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಯತ್ನಾಳ್ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು ರದ್ದು ಮಾಡಿದೆ.
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಸಚಿವ ಶಿವಾನಂದ ಎಸ್. ಪಾಟೀಲ್ ವಿಚಾರಣಾ ನ್ಯಾಯಾಲಯಕ್ಕೆ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯನ್ನು ಹೈಕೋರ್ಟ್ ರದ್ದು ಮಾಡಿದೆ. ಈ ಮೂಲಕ ಶಾಸಕ ಯತ್ನಾಳ್ ಗೆ ಹೈಕೋರ್ಟ್ ರಿಲೀಫ್ ನೀಡಿದೆ.
ಶಿವಾನಂದ ಪಾಟೀಲ್ ದಾಖಲಿಸಿರುವ ಮಾನನಷ್ಟ ಮೊಕದ್ದಮೆ ರದ್ದುಪಡಿಸುವಂತೆ ಕೋರಿ ಶಾಸಕ ಯತ್ನಾಳ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ಮಾನನಷ್ಟ ಮೊಕದ್ದಮೆಯನ್ನು ರದ್ದು ಮಾಡಿ ಆದೇಶ ಹೊರಡಿಸಿದೆ.