ಬೆಂಗಳೂರು : ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಹೆಸರಿನಲ್ಲಿ ಅಕ್ರಮ ಹಣ ವರ್ಗಾವಣೆ ಮಾಡಿದ್ದ ಆರೋಪದ ಮೇಲೆ ಎಐಸಿಸಿ ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆ ನಡೆಸಿತ್ತು.
GTRI ಹಸಿರು ಕ್ರಾಂತಿ 2.0 ಸೂತ್ರ.! ರೈತರೇ, ಸರ್ಕಾರದ ಆಶಯದಂತೆ ‘ಬೆಳೆ’ ಬೆಳೆಯಿರಿ, ಆಗ ‘MSP’ ಗ್ಯಾರಂಟಿ
ಇಡಿ ಕ್ರಮ ವಿರೋಧಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಲಪಾಡ್ ವಿರುದ್ಧ ಶಿವಾಜಿನಗರ ಠಾಣಾ ಪೊಲೀಸರು ದಾಖಲಿಸಿದ್ದ ಖಾಸಗಿ ದೂರನ್ನು ಹೈಕೋರ್ಟ್ ರದ್ದುಪಡಿಸಿದೆ.
ಮದುವೆಯಿಂದ ಹಿಂದೆ ಸರಿಯುವುದು ಐಪಿಸಿ ಸೆಕ್ಷನ್ 417ರ ಅಡಿಯಲ್ಲಿ ವಂಚನೆಯ ಅಪರಾಧವಲ್ಲ : ಸುಪ್ರೀಂ ಕೋರ್ಟ್
ಪ್ರಕರಣ ಸಂಬಂಧ ಶಿವಾಜಿನಗರ ಠಾಣಾ ಪೊಲೀಸರು ದಾಖಲಿಸಿದ್ದ ಖಾಸಗಿ ದೂರು ಮತ್ತು ಅದಕ್ಕೆ ಸಂಬಂಧಿಸಿದಂತೆ 42ನೇ ಮ್ಯಾಜಿಸ್ಟ್ರೇರ್ಟ್ ಕೋರ್ಟ್ ವಿಚಾರಣೆ ರದ್ದುಪಡಿಸುವಂತೆ ಕೋರಿ ಮೊಹಮ್ಮದ್ ನಲಪಾಡ್ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ನ್ಯಾಯಪೀಠ ಈ ಆದೇಶ ಮಾಡಿದೆ.
ಮದುವೆಯಿಂದ ಹಿಂದೆ ಸರಿಯುವುದು ಐಪಿಸಿ ಸೆಕ್ಷನ್ 417ರ ಅಡಿಯಲ್ಲಿ ವಂಚನೆಯ ಅಪರಾಧವಲ್ಲ : ಸುಪ್ರೀಂ ಕೋರ್ಟ್
ಇದೇ ಪ್ರಕರಣ ಸಂಬಂಧ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿರುದ್ಧದ ದೂರು ಹಾಗೂ ಮ್ಯಾಜಿಸ್ಟ್ರೇಟ್ ಕೋರ್ಟ್ ವಿಚಾರಣೆ ರದ್ದುಪಡಿಸಿ ಹೈಕೋರ್ಟ್‌ನ ಮತ್ತೊಂದು ನ್ಯಾಯಪೀಠ ಈ ಹಿಂದೆ ಆದೇಶಿಸಿತ್ತು. ಆ ಆದೇಶ ಆಧರಿಸಿ ನಲಪಾಡ್ ವಿರುದ್ಧದ ಪ್ರಕರಣವನ್ನೂ ರದ್ದುಪಡಿಸಲಾಗಿದೆ.